India vs England

1st ODI: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ, ಬುಮ್ರಾ ಮಾರಕ ಬೌಲಿಂಗ್ ಗೆ ಇಂಗ್ಲೆಂಡ್ ತತ್ತರ, 5 ವಿಕೆಟ್ ಪತನ
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಇಂಗ್ಲೆಂಡ್ ಗೆ ಆರಂಭಿಕ ಆಘಾತ ನೀಡಿ ಐದು ಪ್ರಮುಖ ವಿಕೆಟ್ ಗಳಿಸಿದೆ.

ಸೂರ್ಯಕುಮಾರ್ ಯಾದವ್ ಶತಕ ವ್ಯರ್ಥ: 3ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು; ಸರಣಿ ವಶ
ನಾಟಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ 3 ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆ 17 ರನ್ ಗಳ ಜಯ ದೊರೆತಿದೆ.

ಎರಡನೇ ಟಿ20: ಇಂಗ್ಲೆಂಡ್ ಗೆ 171 ರನ್ ಗುರಿ ನೀಡಿದ ಭಾರತ
ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ 2 ನೇ ಟಿ20 ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿದೆ.

ಭಾರತಕ್ಕೆ ಎರಡನೇ ಇನ್ನಿಂಗ್ಸ್ ನಲ್ಲಿ ಆರಂಭಿಕ ಆಘಾತ, 432 ರನ್ ಗಳಿಗೆ ಇಂಗ್ಲೆಂಡ್ ಆಲೌಟ್
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ನ ಮೂರನೇ ದಿನದ ಭೋಜನ ವಿರಾಮಕ್ಕೆ ಮುನ್ನ ಭಾರತ ಎರಡನೇ ಇನ್ನಿಂಗ್ಸ್ ನಲ್ಲಿ ಒಂದು ವಿಕೆಟ್ ಗೆ 34 ಗಳಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಟೀಮ್ ಇಂಡಿಯಾ, ಇಂಗ್ಲೆಂಡ್ ಗಿಂತ 320 ರನ್ ಹಿಂದುಳಿದಿದ್ದಾರೆ.

3ನೇ ಟೆಸ್ಟ್: ಭಾರತದ ವಿರುದ್ಧ ಭಾರೀ ಇನ್ನಿಂಗ್ಸ್ ಮುನ್ನಡೆ ಸಾಧಿಸಿದ ಇಂಗ್ಲೆಂಡ್
ನಾಯಕ ಜೋ ರೂಟ್ (121 ರನ್) ಇವರ ಭರ್ಜರಿ ಶತಕದ ನೆರವಿನಿಂದ ಇಂಗ್ಲೆಂಡ್ ಇಲ್ಲಿ ನಡೆದಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿದೆ.

ಟೆಸ್ಟ್ ಕ್ರಿಕೆಟ್ ನಲ್ಲಿ ಅನಿಲ್ ಕುಂಬ್ಳೆ ದಾಖಲೆ ಮುರಿದ ವೇಗಿ ಜೇಮ್ಸ್ ಆಂಡರ್ಸನ್
ಇಂಗ್ಲೆಂಡ್ ವೇಗಿ ಆಂಡರ್ಸನ್ ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತದ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದು, ಅತಿ ಹೆಚ್ಚು ವಿಕೆಟ್ ಪಡೆದವರ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್: 183ಕ್ಕೆ ಇಂಗ್ಲೆಂಡ್ ಆಲೌಟ್, 162 ರನ್ ಗಳಿಂದ ಹಿಂದಿರುವ ಭಾರತ
ಇಲ್ಲಿನ ಟ್ರೆಂಟ್ ಬ್ರಿಡ್ಜ್ ನಲ್ಲಿ ಆರಂಭವಾದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ದಿನದಾಟ ಅಂತ್ಯಕ್ಕೆ ಇಂಗ್ಲೆಂಡ್ ತಂಡ 183 ರನ್ ಗಳಿಗೆ ಆಲ್ ಔಟ್ ಆಗಿದ್ದು, ಭಾರತ 162 ರನ್ ಗಳಿಂದ ಹಿಂದಿದೆ. ರೋಹಿತ್ ಶರ್ಮಾ ಹಾಗೂ ಕೆ ಎಲ್ ರಾಹುಲ್ ಕ್ರೀಸ್ ನಲ್ಲಿದ್ದು, ತಲಾ 9 ರನ್ ಗಳಿಸಿದ್ದಾರೆ.

ಇಂಡಿಯಾ ವರ್ಸಸ್ ಇಂಗ್ಲೆಂಡ್ ಸಿನಿಮಾಗೆ ಪಾಕ್ ಅಭಿಮಾನಿ
ಲಾಕ್ ಡೌನ್ ಅವಧಿ ಹಲವು ಸಿನಿಮಾ ತಯಾರುಕರುಗಳಿಗೆ ಒಳ್ಳೆಯ ಸಮಯವಾಗಿದೆ. ಅದರಲ್ಲೂ ರಿಲೀಸ್ ಆಗಿ ಡಿಜಿಟಲ್ ಸ್ಟ್ರೀಮಿಂಗ್ ಕಾಣುತ್ತಿರುವ ಸಿನಿಮಾಗಳಿಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.

ಇಂಡಿಯಾ ವರ್ಸಸ್ ಇಂಗ್ಲೆಂಡ್ ಚಿತ್ರದ ಟೀಸರ್
ವಸಿಷ್ಠ ಎನ್ ಸಿಂಹ ಮತ್ತು ಮಾನ್ವಿತಾ ಕಾಮತ್ ಅಭಿನಯದ ಇಂಡಿಯಾ ವರ್ಸಸ್ ಇಂಗ್ಲೆಂಡ್ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶಿಸಿದ್ದಾರೆ.

