IndiGo flight

ತಾಂತ್ರಿಕ ದೋಷ: ಬೆಂಗಳೂರಿನಿಂದ ವಾರಣಾಸಿಗೆ ಹೊರಟಿದ್ದ ಇಂಡಿಗೋ ವಿಮಾನ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ!
ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ಮಂಗಳವಾರ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ವರದಿಯಾಗಿದೆ.

ಇಂಡಿಗೋ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಅಶಿಸ್ತಿನ ವರ್ತನೆ: ಇಬ್ಬರು ಪ್ರಯಾಣಿಕರ ಬಂಧನ
ಕುಡಿದ ಮತ್ತಿನಲ್ಲಿ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರನ್ನು ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ದುಬೈ- ಮುಂಬೈ ಮಾರ್ಗದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ವೈದ್ಯಕೀಯ ತುರ್ತು: ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮಯನ್ಮಾರ್ ಗೆ ಡೈವರ್ಟ್
ಬ್ಯಾಂಕಾಕ್‌ನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ವೈದ್ಯಕೀಯ ತುರ್ತು ಪರಿಸ್ಥಿತಿಯ ಕಾರಣ ಭಾನುವಾರ ಮಯನ್ಮಾರ್ ನ ರಂಗೂನ್(ಯಾಂಗೋನ್)ಗೆ ತಿರುಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಕೋಲ್ಕತ್ತಾ-ಬೆಂಗಳೂರು ಇಂಡಿಗೋ ವಿಮಾನದ ವಾಶ್ ರೂಂನಲ್ಲಿ ಧೂಮಪಾನ ಮಾಡುತ್ತಿದ್ದ 20 ವರ್ಷದ ಪ್ರಯಾಣಿಕನ ಬಂಧನ
ಶುಕ್ರವಾರ ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದ ವಾಶ್ ರೂಂನಲ್ಲಿ ಧೂಮಪಾನ ಮಾಡುತ್ತಿದ್ದ 20 ವರ್ಷದ ಪ್ರಯಾಣಿಕರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.

ವೈದ್ಯಕೀಯ ತುರ್ತು ಪರಿಸ್ಥಿತಿ: ದೆಹಲಿ-ದೋಹಾ ವಿಮಾನ ಕರಾಚಿಯಲ್ಲಿ ಭೂಸ್ಪರ್ಶ, ಆದರೂ ಉಳಿಯಲಿಲ್ಲ ಪ್ರಯಾಣಿಕನ ಪ್ರಾಣ!
ದೆಹಲಿಯಿಂದ ದೋಹಾಗೆ ತೆರಳುತ್ತಿದ್ದ ಇಂಡಿಗೋ ವಿಮಾನ ವೈದ್ಯಕೀಯ ತುರ್ತು ಪರಿಸ್ಥಿತಿ ಹಿನ್ನಲೆಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.

ವಿಮಾನದಲ್ಲಿ ಕುಡಿದು ಗದ್ದಲ, ಇಬ್ಬರು ಪ್ರಯಾಣಿಕರ ಬಂಧನ
ವಿಮಾನದಲ್ಲಿ ಪ್ರಯಾಣಿಕರ ಅನುಚಿತ ವರ್ತನೆ ಮುಂದುವರೆದಿದೆ. ಇಂಡಿಗೋ ವಿಮಾನ ಹಾರಾಟದ ಮಾರ್ಗ ಮಧ್ಯ ಮಧ್ಯದಲ್ಲಿ ಕುಡಿದು ಗದ್ದಲ ಉಂಟುಮಾಡಿದ ಆರೋಪದ ಮೇರೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ ಎಫ್) ನೆರವಿನಿಂದ ಇಬ್ಬರು ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.

ಕೋಲ್ಕತ್ತ- ಬೆಂಗಳೂರು ಇಂಡಿಗೋ ವಿಮಾನಕ್ಕೆ ಮತ್ತೆ ಟಿಶ್ಶ್ಯೂ ಪೇಪರ್ ಬಾಂಬ್ ಬೆದರಿಕೆ
ಕೋಲ್ಕತ್ತಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಟಿಶ್ಶೂಪೇಪರ್ ಬಾಂಬ್ ಬೆದರಿಕೆ ಬಂದಿದ್ದು ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು.

ಇಂಡಿಗೋ ವಿಮಾನದಲ್ಲಿ ತೆಲುಗು ಭಾಷಿಕ ಮಹಿಳೆಗೆ ಅವಮಾನ; ವ್ಯಾಪಕ ಆಕ್ರೋಶ
ತೆಲುಗು ಭಾಷಿಕರೊಬ್ಬರಿಗೆ ಹಿಂದಿ ಅಥವಾ ಇಂಗ್ಲಿಷ್ ಬರುವುದಿಲ್ಲವೆಂಬ ಕಾರಣಕ್ಕೆ ಅವಮಾನ ಮಾಡಿದ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಬೆಂಗಳೂರಿನಲ್ಲಿ ಲ್ಯಾಂಡ್ ಆಗುವ ಕೆಲವೇ ಹೊತ್ತಿಗೆ ಮುನ್ನ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ
ಜೈಪುರದಿಂದ ಬೆಂಗಳೂರಿಗೆ 175 ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಇಳಿಯುವ ಮುನ್ನವೇ ವಿಮಾನದಲ್ಲಿ ಬಾಂಬ್ ಇರುವುದಾಗಿ ಟಾಯ್ಲೆಟ್‌ನಲ್ಲಿ ಟಿಶ್ಯೂ ಪೇಪರ್ ಮೇಲೆ ಗೀಚಿದ ಅನಾಮಧೇಯ ಸಂದೇಶ ಪತ್ತೆಯಾಗಿದ್ದರಿಂದ ತೀವ್ರ ಉದ್ವಿಗ್ನತೆ ಉಂಟಾಗಿತ್ತು.

