Indira Canteen

ಡಿಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಇಂದಿರಾ ಕ್ಯಾಂಟೀನ್ನಲ್ಲಿ ಉಪಹಾರ, ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ನಡೆಸಿದ್ದು, ಈ ವೇಳೆ ಇಂದಿರಾ ಕ್ಯಾಂಟೀನ್ನಲ್ಲಿ ಉಪಹಾರ ಸೇವಿಸಿ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದ್ದರು.

ಕರ್ನಾಟಕ ಬಜೆಟ್ 2023-24: ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ರೂ. ಮೀಸಲು
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳ ಬಲವರ್ಧನೆಗೆ ಆದ್ಯತೆ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಲಕ್ಷಿಸಲಾಗಿದ್ದ ಇಂದಿರಾ ಕ್ಯಾಂಟೀನ್ ಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡಲಾಗುವುದು ಎಂದು ಅವರು ತಿಳಿಸಿದರು.

ಇಂದಿರಾ ಕ್ಯಾಂಟೀನ್ ಹೊಸ ಮೆನು ಸಿದ್ಧ: ಮಂಗಳೂರು ಬನ್ಸ್, ಬ್ರೆಡ್ ಜಾಮ್, ರಾಗಿ ಮುದ್ದೆ ಸೇರ್ಪಡೆ?
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ಮೆನುವಿಗಾಗಿ ಹೆಚ್ಚುವರಿ ಭಕ್ಷ್ಯಗಳ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ

ಇಂದಿರಾ ಕ್ಯಾಂಟೀನ್ ನಲ್ಲಿ ಊಟದ ಜೊತೆಗೆ ಮೊಟ್ಟೆ: ಸರ್ಕಾರಕ್ಕೆ ಬಿಬಿಎಂಪಿ ಮಾಜಿ ಸದಸ್ಯರ ಒತ್ತಾಯ
ನಿತ್ಯ ಸಾವಿರಾರು ಬಡ ಕೂಲಿ ಕಾರ್ಮಿಕರಿಗೆ, ಶ್ರಮಿಕರಿಗೆ ಕಡಿಮೆ ದರದಲ್ಲಿ ಊಟ ಸಿಗುವಂತೆ ಮಾಡಿದ್ದ ಇಂದಿರಾ ಕ್ಯಾಂಟೀನ್ನಲ್ಲಿ ಇದೀಗ ಮೊಟ್ಟೆ ಕೂಡ ಸಿಗಲಿದೆ. ಇಂದಿರಾ ಕ್ಯಾಂಟೀನ್ನಲ್ಲಿ ಇನ್ನುಮುಂದೆ ಮೊಟ್ಟೆ ನೀಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಬಿಬಿಎಂಪಿ ಮಾಜಿ ಸದಸ್ಯರು ಮುಂದಾಗಿದ್ದಾರೆ.

ಇನ್ಮುಂದೆ ಉತ್ತರ ಕರ್ನಾಟಕದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಪ್ರತ್ಯೇಕ ಮೆನು!
ರಾಜ್ಯದಾದ್ಯಂತ ಕ್ಯಾಂಟೀನ್‌ಗಳನ್ನು ಪುನರಾರಂಭಿಸಲು ಸರ್ಕಾರ ಪ್ರಯತ್ನಿಸುತ್ತಿದ್ದು, ಇಂದಿರಾ ಕ್ಯಾಂಟೀನ್‌ಗಳಲ್ಲಿ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಮೆನುವನ್ನು ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಇನ್ನೂ 50 ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಸರ್ಕಾರ ನಿರ್ಧಾರ
ರಾಜಧಾನಿ ಬೆಂಗಳೂರಿನಲ್ಲಿ ಶೀಘ್ರದಲ್ಲಿ 50 ಇಂದಿರಾ ಕ್ಯಾಂಟೀನ್ ಗಳನ್ನು ಹೊಸದಾಗಿ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಬಜೆಟ್‌ನಲ್ಲಿ ಹಣ ಮೀಸಲಿಡದೆ ಇಂದಿರಾ ಕ್ಯಾಂಟೀನ್'ಗಳ ಬಂದ್ ಮಾಡಲು ರಾಜ್ಯ ಸರ್ಕಾರ ಮುಂದು: ಕಾಂಗ್ರೆಸ್ ಆರೋಪ
ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳಿಗೆ ಹಣ ಮೀಸಲಿಡದೆ, ಇಂದಿರಾ ಕ್ಯಾಂಟೀನ್ ಗಳ ಬಂದ್ ಮಾಡಲು ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕರ್ನಾಟಕ ಸರ್ಕಾರ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚುತ್ತಿದೆ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭವಾದ ಅನುದಾನಿತ ಆಹಾರ ಕ್ಯಾಂಟೀನ್ (ಇಂದಿರಾ ಕ್ಯಾಂಟೀನ್)ಗಳನ್ನು ರಾಜ್ಯ ಸರ್ಕಾರ ಮುಚ್ಚುತ್ತಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಸೋಮವಾರ ಆರೋಪಿಸಿದೆ.

ಇಂದಿರಾ ಕ್ಯಾಂಟೀನ್ ಮರುನಾಮಕರಣ: ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಸಾಧ್ಯತೆ
ಇಂದಿರಾ ಕ್ಯಾಂಟೀನ್'ನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮರುನಾಮಕರಣ ಮಾಡುವ ವಿಚಾರ ಸಂಬಂಧ ಮುಂದಿನ ತಿಂಗಳು 10 ದಿನಗಳ ಕಾಲ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲೂ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

