Indira Canteen

ಬೆಂಗಳೂರು: ಇಂದಿರಾ ಕ್ಯಾಂಟೀನ್ ಪುನಾರಾಂಭ
ಜನಜಂಗುಳಿಯ ಕಾರಣದಿಂದ ಎರಡು ದಿನಗಳ ಹಿಂದೆ ಸ್ಥಗಿತಗೊಳಿಸಿದ್ದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆ ಇಂದಿರಾ ಕ್ಯಾಂಟೀನ್ ಅನ್ನು ಸರ್ಕಾರ ಪುನರಾಂಭಿಸಿದೆ.

ಸಾಲು ಸಾಲಾಗಿ ನಿಂತ ಜನ: ಇಂದಿರಾ ಕ್ಯಾಂಟೀನ್ ದಿಢೀರ್ ಬಂದ್ ಮಾಡಿದ ರಾಜ್ಯ ಸರ್ಕಾರ
ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್‌ಡೌನ್ ಇರುವುದರಿಂದ ಬಡವರಿಗೆ ಅನುಕೂಲವಾಗಲೆಂದು ಇಂದಿರಾ ಕ್ಯಾಂಟೀನ್‌ನಲ್ಲಿ ಊಟ, ತಿಂಡಿ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿತ್ತು. ಆದರೆ ಇದೀಗ ದಿಢೀರ್ ಆಗಿ ಇಂದಿರಾ ಕ್ಯಾಂಟೀನನ್ನು ಬಂದ್ ಮಾಡಲು ಸರ್ಕಾರ ನಿರ್ಧರಿಸಿದೆ.

ಸಂಪೂರ್ಣ ಲಾಕ್ ಡೌನ್ ಬಗ್ಗೆ ಸಂಜೆ ನಿರ್ಧಾರ: ಬಡವರಿಗೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ: ಸಿಎಂ ಯಡಿಯೂರಪ್ಪ
ಕೋವಿಡ್-19 ಸೋಂಕು ತಡೆಗಟ್ಟಲು ಸಂಪೂರ್ಣ ರಾಜ್ಯ ಲಾಕ್ ಡೌನ್ ಮಾಡುವ ಬಗ್ಗೆ ಇಂದು ಸಂಜೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಇಂದಿರಾ ಕ್ಯಾಂಟೀನ್ ಬೆಲೆ ಏರಿಕೆಯಿಂದ ಬಡಜನತೆಯ ಮೇಲಿನ ಬರೆ; ಎಎಪಿ ಆರೋಪ
ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ದರಗಳನ್ನು ಹೆಚ್ಚಿಸಲು ಮುಂದಾಗಿರುವ ಕ್ರಮಕ್ಕೆ ಆಮ್ ಆದ್ಮಿ ಪಕ್ಷ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರ ವಿರುದ್ಧ ಬೆಂಗಳೂರಿನಲ್ಲಿ ಕೇಸು ದಾಖಲು
ಹಣವನ್ನು ದುರುಪಯೋಗಪಡಿಸಿದ ಆರೋಪದ ಮೇಲೆ ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಬ್ಬರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

ವಾಲ್ಮೀಕಿ ಹೆಸರಿನ ಕ್ಯಾಂಟೀನ್ ಬದಲು ವಿವಿ ಸ್ಥಾಪಿಸಿ, ಮೀಸಲಾತಿ ಹೆಚ್ಚಿಸಿ, ಬಿಜೆಪಿ ಸರ್ಕಾರಕ್ಕೆ ಉಗ್ರಪ್ಪ ಆಗ್ರಹ
ಇಂದಿರಾ ಕ್ಯಾಂಟಿನ್ ಗೆ ಇಂದಿರಾ ಹೆಸರು ತೆಗೆದು ಮಹರ್ಷಿ ವಾಲ್ಮೀಕಿ ಅನ್ನ ಕುಟೀರ ಎಂದು ಮರುನಾಮಕರಣ ಮಾಡಲು ಹೊರಟಿರುವುದು ವಾಲ್ಮೀಕಿ ಮಹರ್ಷಿಗೆ ಮಾಡುವ ಅಪಮಾನ ಎಂದು ಮಾಜಿ ಸಂಸದ ಹಾಗೂ ವಾಲ್ಮೀಕಿ ಸಮುದಾಯದ ನಾಯಕ ವಿ.ಎಸ್.ಉಗ್ರಪ್ಪ ಕಿಡಿಕಾರಿದ್ದಾರೆ.

ಇಂದಿರಾ ಕ್ಯಾಂಟೀನ್‌ಗೆ ವಾಲ್ಮೀಕಿ ಹೆಸರು: ವಾಲ್ಮೀಕಿ ಹೆಸರನ್ನು ರಾಜಕೀಯಕ್ಕೆ ಬಳಸಬೇಡಿ, ಸಿದ್ದರಾಮಯ್ಯ
ಇಂದಿರಾ ಕ್ಯಾಂಟೀನ್ ಗಳಿಗೆ ಐತಿಹಾಸಿಕ ಕವಿ ಮಹರ್ಷಿ ವಾಲ್ಮೀಕಿಯವರ ಹೆಸರು ಇಡುವ ಯೋಚನೆ ಇದೆಯಂತೆ. ಮಹರ್ಷಿ ವಾಲ್ಮೀಕಿಯವರ ಬಗ್ಗೆ ನಮಗೆಲ್ಲ ಅಪಾರವಾದ ಗೌರವ ಇದೆ. ಅವರ ಹೆಸರನ್ನು ಬಿಜೆಪಿ ತನ್ನ ಕ್ಷುಲಕ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಮಹಾಕವಿ ಗೆ ಅವಮಾನ ಮಾಡಲಾಗುತ್ತಿದೆ...

ಇಂದಿರಾ ಕ್ಯಾಂಟೀನ್ ಬದಲು ವಾಲ್ಮೀಕಿ ಅನ್ನ ಕುಟೀರ ಎಂದು ಮರುನಾಮಕರಣ ಮಾಡಲು ಚಿಂತನೆ: ಆರ್.ಅಶೋಕ್
ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ತಂದಿದ್ದ ಇಂದಿರಾ ಕ್ಯಾಂಟೀನ್ ಗೆ ಮಹರ್ಷಿ ವಾಲ್ಮೀಕಿ ಅನ್ನ ಕುಟೀರ ಎಂದು ಮರುನಾಮಕರಣ ಮಾಡುವ ಬಗ್ಗೆ ಗಂಭೀರ ಚಿಂತನೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಮಂಗಳವಾರ ಹೇಳಿದ್ದಾರೆ.

ವಿಜಯಪುರ: ಪ್ಲಾಸ್ಟಿಕ್ ಕೊಡಿ, ಒಂದು ಕಪ್ ಉಚಿತವಾಗಿ ಟೀ ಕುಡಿಯಿರಿ
ದೇಶ ಮತ್ತು ನಗರವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಉದ್ದೇಶದಿಂದ, ಪರಿಸರದಲ್ಲಿ ಪ್ಲಾಸ್ಟಿಕ್ ಬಳಕೆ ತಗ್ಗಿಸುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಆಡಳಿತ ಇಲಾಖೆಗಳು ಹೊಸ ಹೊಸ ಐಡಿಯಾಗಳನ್ನು ರೂಪಿಸುತ್ತಿದ್ದಾರೆ.

