Indira Gandhi Institute of Child Health

ಕೋವಿಡ್ 3ನೇ ಅಲೆ: ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ 100 ಹಾಸಿಗೆಗಳ ನೂತನ ಸುಸಜ್ಜಿತ ಐಸಿಯು
ಬೆಂಗಳೂರು ನಗರದ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ (IGICH)ನಲ್ಲಿ ಕಾಗ್ನಿಜೆಂಟ್ ಫೌಂಡೇಶನ್ ನೆರವಿನಿಂದ ಸ್ಥಾಪನೆ ಮಾಡಲಾಗಿರುವ 100 ಹಾಸಿಗೆಗಳ ಮಕ್ಕಳ ತೀವ್ರ ನಿಗಾ ಘಟಕವನ್ನು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮಂಗಳವಾರ ಲೋಕಾರ್ಪಣೆ ಮಾಡಿದರು.

ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ಒಪಿಡಿ ವೈದ್ಯರಿಗೆ ಪಿಪಿಇ ಕಿಟ್ ಇಲ್ಲ!
ಇದು ಅವ್ಯವಸ್ಥೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ಹೊರರೋಗ ವಿಭಾಗದ ವೈದ್ಯರು ಪಿಪಿಇ ಕಿಟ್ ಗಳಿಲ್ಲದೆ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ಬಂದಿದೆ. ರೋಗಿಗಳಿಗೆ ವೈದ್ಯೋಪಚಾರ ಮಾಡುವ ಸಮಯದಲ್ಲಿ ತಮಗೆ ಎಲ್ಲಿ ಕೊರೋನಾ ಸೋಂಕು ತಗುಲುತ್ತದೋ ಎಂಬ ಭಯ ಈ ವೈದ್ಯರನ್ನು ಅಪಾರವಾಗಿ ಕಾಡುತ್ತಿದೆ.

