infection

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 48,648 ಕೇಸ್ ಪತ್ತೆ, 6 ಲಕ್ಷಕ್ಕಿಳಿದ ಸಕ್ರಿಯ ಪ್ರಕರಣಗಳ ಸಂಖ್ಯೆ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ದೇಶದಲ್ಲಿ ಇಳಿಯುತ್ತಿರುವ ಕೊರೋನಾ ಆರ್ಭಟ: ಭಾರತದಲ್ಲಿ 49,881 ಹೊಸ ಕೇಸ್ ಪತ್ತೆ, 517 ಮಂದಿ ಸಾವು
ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಸತತ 4ನೇ ದಿನವೂ 50 ಸಾವಿರಕ್ಕಿಂತಲೂ ಕಡಿಮೆ ದಾಖಲಾಗಿವೆ. ಭಾರತದಲ್ಲಿಂದು 49,881 ಕೊರೋನಾ ವೈಸರ್ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 80,40,203ಕ್ಕೆ ಏರಿಕೆಯಾಗಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 43,893 ಕೇಸ್ ಪತ್ತೆ, 508 ಮಂದಿ ಸಾವು
ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಮತ್ತೆ 50 ಸಾವಿರಕ್ಕಿಂತ ಕಡಿಮೆ ದಾಖಲಾಗಿವೆ. ಬುಧವಾರ 43,893 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 79.90 ಲಕ್ಷಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ದಿನೇ ದಿನೇ ಕ್ಷೀಣಿಸುತ್ತಿರುವ ಕೊರೋನಾ: ಕಳೆದ 24 ಗಂಟೆಗಳಲ್ಲಿ 45,149 ಜನರಿಗೆ ಸೋಂಕು, 480 ಮಂದಿ ಸಾವು
ಭಾರತದಲ್ಲಿ ಕೊರೋನಾ ವೈರಸ್ ಹಾವಳಿ ಕ್ರಮೇಣ ತಗ್ಗುತ್ತಿದ್ದು, ದಿನನಿತ್ಯದ ಸೋಂಕು, ಸಕ್ರಿಯ ಪ್ರಕರಣಗಳು ಹಾಗೂ ಸಾವು ದಿನೇ ದಿನೇ ಕ್ಷೀಣಿಸುತ್ತಿರುವುದು ಭಾರತೀಯರಲ್ಲಿ ಸಮಾಧಾನವನ್ನು ಮೂಡಿಸಿದೆ. ಹೆಮ್ಮಾರಿ ವೈರಸ್ ಆರ್ಭಟ ಗರಿಷ್ಠ ಮಟ್ಟಕ್ಕೇರಿ ಇದೀಗ ಇಳಿಮುಖದ ಹಾದಿಯಲ್ಲಿ ಸಾಗುತ್ತಿರುವುದು ಗಮನಾರ್ಹ.

ಜಾಗತಿಕವಾಗಿ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷಕ್ಕೆ ಏರಿಕೆ
ಜಗತ್ತಿನಾದ್ಯಂತ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಭಾರತದಲ್ಲಿ ಇಳಿಯುತ್ತಿರುವ ಕೊರೋನಾ ಮಹಾಮಾರಿ ಆರ್ಭಟ: 24 ಗಂಟೆಗಳಲ್ಲಿ 50,129ಕೇಸ್ ಪತ್ತೆ, 90 ದಿನಗಳಲ್ಲಿ ಕನಿಷ್ಟ ಸಂಖ್ಯೆಗಿಳಿದ ಸಾವಿನ ಸಂಖ್ಯೆ
ದೇಶದಲ್ಲಿ ಮಹಾಮಾರಿ ಕೊರೋನಾ ಮಹಾಮಾರಿ ಆರ್ಭಟ ಇಳಿಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ 50,129 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 78,64,811ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 53,370 ಕೇಸ್ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 7 ಲಕ್ಷಕ್ಕೆ ಇಳಿಕೆ
ಭಾರತದಲ್ಲಿ ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಎಂದಿನಂತೆ ಶನಿವಾರ ಕೂಡ ಮುಂದುವರೆದಿದ್ದು, ಸತತ 6 ದಿನಗಳಿಂದ 60 ಸಾವಿರಕ್ಕಿಂತಲೂ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 53,370 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 78,14,682ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಾವಿನ ಪ್ರಮಾಣ ಶೇ.1ಕ್ಕೆ ಇಳಿಕೆ
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕು ಹಾಗೂ ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಸರಾಸರಿ ಶೇ.11.25ರಷ್ಟಿರುವ ಕೊರೋನಾ ಪಾಸಿಟಿವಿಟಿ ದರ ಕಳೆದ ಒಂದು ವಾರದ ಪ್ರಕರಣಗಳಲ್ಲಿ ಶೇ.6.51ಕ್ಕೆ ಕುಸಿದಿದೆ. ಅಲ್ಲದೆ, ಕೊರೋನಾ ಸೋಂಕಿತರ ಸಾವಿನ ಪ್ರಮಾಣ ಶೇ.1ಕ್ಕೆ ಇಳಿಕೆಯಾಗಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 54,366 ಜನರಿಗೆ ಕೊರೋನಾ: ಸತತ 5ನೇ ದಿನವೂ 60 ಸಾವಿರಕ್ಕಿಂತ ಕಡಿಮೆ ಕೇಸ್!
ಭಾರತದಲ್ಲಿ ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಮುಂದುವರಿದಿದ್ದು, ಸತತ 5 ದಿನಗಳಿಂದ 60 ಸಾವಿರಕ್ಕಿಂತಲೂ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗಿವೆ.

