infection

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 80,472 ಕೇಸ್ ಪತ್ತೆ, 1,179 ಮಂದಿ ಸಾವು
ಕೊರೋನಾ ದೇಶದಲ್ಲಿ ಇನ್ನೂ ತುತ್ತ ತುದಿಗೆ ತಲುಪಿಲ್ಲ ಎಂಬ ಸಂಶೋಧಕರ ವಾದಗಳ ನಡುವೆಯೇ, ಈ ವೈರಸ್ ತನ್ನ ಗರಿಷ್ಠ ಮಟ್ಟ ತಲುಪಿ ಇಳಿಮುಖವಾಗುತ್ತಿದೆಯೇ ಎಂಬ ಅನುಮಾನಗಳು ಮೂಡತೊಡಗಿದೆ. ದೇಶದಲ್ಲಿ ಕಳೆದ 10 ದಿನಗಳಿಂದ ಕೊರೋನಾ ಸೋಂಕಿತರ ಹಾಗೂ ಸಾವಿನ ಸಂಖ್ಯೆ ಇಳಿಕೆಯಾಗುತ್ತಿರುವುದೇ ಇದಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ: ಮೊದಲ ಬಾರಿಗೆ ಒಂದೇ ದಿನ 10 ಸಾವಿರಕ್ಕೂ ಹೆಚ್ಚು ಕೇಸ್ ಪತ್ತೆ, ಹೆಚ್ಚಿದ ಆತಂಕ
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ 10 ಸಾವಿರಕ್ಕಿಂತಲೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಜನತೆಯಲ್ಲಿನ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಕೋವಿಡ್-19: ದೇಶದಲ್ಲಿ ಒಂದೇ ದಿನ 82,170 ಕೇಸ್ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 60 ಲಕ್ಷ, 95,542 ಮಂದಿ ಸಾವು
ಸೋಮವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 82,170 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 60 ಲಕ್ಷ ಗಡಿದಾಟಿದೆ.

ಭಾರತದಲ್ಲಿ ಕೊರೋನಾ ಅಬ್ಬರ: ಒಂದೇ ದಿನ 88,600 ಕೇಸ್ ಪತ್ತೆ, 59.92 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 88,600 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 59,92,533ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿ ಒಂದೇ ದಿನ 85,362 ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 59 ಲಕ್ಷ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 85,362 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 59 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 86,052 ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 58 ಲಕ್ಷ, 92,290 ಮಂದಿ ಸಾವು
ದೇಶದಲ್ಲಿ ಕೊರೋನಾ ಅಬ್ಬರ ಕೊಂಚ ಮಟ್ಟದಲ್ಲಿ ಇಳಿಕೆ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 86,052 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 58 ಲಕ್ಷ ಗಡಿ ದಾಟಿದೆ.

ದೇಶದಲ್ಲಿ 24 ಗಂಟೆಗಳಲ್ಲಿ 86,508 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 57.3 ಲಕ್ಷ, 91,149 ಮಂದಿ ಸಾವು
ದೇಶದಲ್ಲಿ ಕೊರೋನಾ ಆರ್ಭಟ ದಿನ ಕಳೆಯುತ್ತಿದ್ದಂತೆ ಕೊಂಚ ಇಳಿಕೆ ಕಾಣುತ್ತಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 86,508 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 5,732,519ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೊರೋನಾ ಅಬ್ಬರದಲ್ಲಿ ಇಳಿಕೆ: 24 ಗಂಟೆಗಳಲ್ಲಿ 83,347 ಮಂದಿಯಲ್ಲಿ ಸೋಂಕು ಪತ್ತೆ, ಸೋಂಕಿತರ ಸಂಖ್ಯೆ 5.64 ಲಕ್ಷ
ದೇಶದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳ ಅಬ್ಬರ ತಿಂಗಳ ಬಳಿಕ ಇಳಿಕೆ ಕಂಡಿದ್ದು, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 83,347 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,646,011ಕ್ಕೆ ಏರಿಕೆಯಾಗಿದೆ.

ಮಹಾಮಾರಿ ಕೊರೋನಾಗೆ ನಲುಗುತ್ತಿರುವ ವಿಶ್ವ: ಅತೀ ಹೆಚ್ಚು ಸೋಂಕಿತ ಟಾಪ್ 10 ಪಟ್ಟಿಯಲ್ಲಿ ಈಗಲೂ ಅಮೆರಿಕಾ ನಂ.1...!
ಮಹಾಮಾರಿ ವಜ್ರಮುಷ್ಟಿಯಲ್ಲಿ ಇಡೀ ವಿಶ್ವ ನಲುಗಿ ಹೋಗುತ್ತಿದ್ದು, ವಿವಿಧ ರಾಷ್ಟ್ರಗಳಲ್ಲಿ ಒಟ್ಟು ಸೋಂಕಿತರ ಸಂಖ್ಯೆ 30.6 ಕೋಟಿ ತಲುಪಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

