infection

ಕೋವಿಡ್-19: ದೇಶದಲ್ಲಿ ಒಂದೇ ದಿನ 34,884 ಕೇಸ್, 26,273 ಮಂದಿ ಸಾವು; ಒಟ್ಟು ಸೋಂಕಿತರ ಸಂಖ್ಯೆ 1.38 ಲಕ್ಷಕ್ಕೆ ಏರಿಕೆ
ಭಾರತದಲ್ಲಿ ಕೊರೋನಾ ವೈರಸ್ ರೌದ್ರನರ್ತನ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 34,884 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 10,38,716ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ ದಾಖಲೆಯ 34,956 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, 10 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶದಾದ್ಯಂತ ಸೋಂಕು ಪತ್ತೆ ಹೆಚ್ಚಳವಾದ ಬೆನ್ನಲ್ಲೇ ಸೋಂಕಿತರ ಸಂಖ್ಯೆಯಲ್ಲೂ ಭಾರೀ ಏರಿಕೆ ಕಂಡುಬರುತ್ತಿದ್ದು, ಶುಕ್ರವಾರ ದಾಖಲೆಯ 34,956 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,03,832ಕ್ಕೆ ತಲುಪಿದೆ.

ಅಮೆರಿಕಾದಲ್ಲಿ ಕೊರೋನಾ ಸ್ಫೋಟ: 24 ಗಂಟೆಗಳಲ್ಲಿ 68,428 ಮಂದಿಯಲ್ಲಿ ವೈರಸ್ ಪತ್ತೆ, 974 ಮಂದಿ ಸಾವು
ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 68,428 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 32 ಸಾವಿರ ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 9.70 ಲಕ್ಷಕ್ಕೆ ಏರಿಕೆ
ದೇಶದಲ್ಲಿ ದಾಖಲೆಯ ಪ್ರಮಾಣದಲ್ಲಿ ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 32,695 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 970,169ಕ್ಕೆ ತಲುಪಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 29,429 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 9.36 ಲಕ್ಷಕ್ಕೆ ಏರಿಕೆ
ದೇಶದಾದ್ಯಂತ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 29,429 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,36,6181ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 28,498 ಮಂದಿಯಲ್ಲಿ ವೈರಸ್ ಪತ್ತೆ, 9 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 28,498 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 9 ಲಕ್ಷ ಗಡಿದಾಟಿದಂತಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ಜಾಗತಿಕ ಕೊರೊನವೈರಸ್ ಪ್ರಕರಣಗಳ ಸಂಖ್ಯೆ 1 ಕೋಟಿ 28 ಲಕ್ಷಕ್ಕೇರಿಕೆ
ಜಾಗತಿಕ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ಭಾನುವಾರ 1 ಕೋಟಿ 28 ಲಕ್ಷ ತಲುಪಿದ್ದರೆ, ಸಾವಿನ ಸಂಖ್ಯೆ 5 ಲಕ್ಷದ 67 ಸಾವಿರಕ್ಕಿಂತ ಹೆಚ್ಚಾಗಿದೆ.

ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ದಾಖಲೆಯ 28,637 ಕೇಸ್, 551 ಮಂದಿ ಬಲಿ
ಭಾರತದಲ್ಲಿ ಭಾನುವಾರ ಕೊರೋನಾ ಸ್ಫೋಟಗೊಂಡಿದ್ದು, ಸಾರ್ವಕಾಲಿಕ ಗರಿಷ್ಟ 28,637 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಅದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,49,553ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಅಮೆರಿಕಾದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ಬರೋಬ್ಬರಿ 66,528 ಮಂದಿಯಲ್ಲಿ ವೈರಸ್ ದೃಢ!
ವಿಶ್ವದ ದೊಡ್ಡಣ್ಣ ಅಮೆರಿಕಾ ರಾಷ್ಟ್ರವನ್ನು ಮಹಾಮಾರಿ ಕೊರೋನಾ ವೈರಸ್ ಬೆನ್ನು ಬಿಡದಂತೆ ಕಾಡುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 66,528 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

