infection

ಭಾರತದಲ್ಲಿ ಒಂದೇ ದಿನ 18,552 ಮಂದಿಗೆ ಕೊರೋನಾ; 5.08 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 15,685 ಮಂದಿ ಸಾವು
ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ ದಾಖಲೆಯ 18,552 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೋನಾ ರೌದ್ರನರ್ತನ: ಕೇವಲ 6 ದಿನಗಳಲ್ಲಿ ಸೋಂಕಿತರ ಸಂಖ್ಯೆ 4 ರಿಂದ 5 ಲಕ್ಷಕ್ಕೆ ಏರಿಕೆ
ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೇವಲ 6 ದಿನಗಳಲ್ಲಿ ಸೋಂಕಿತರ ಸಂಖ್ಯೆ 4ರಿಂದ 5 ಲಕ್ಷಕ್ಕೆ ಏರಿಕೆಯಾಗಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 17,296 ಕೊರೋನಾ ಪ್ರಕರಣ; ಸೋಂಕಿತರ ಸಂಖ್ಯೆ 4.90 ಲಕ್ಷಕ್ಕೆ ಏರಿಕೆ, 15,301 ಮಂದಿ ಸಾವು
ಶುಕ್ರವಾರ ದೇಶದಲ್ಲಿ ಕೊರೋನಾ ತನ್ನ ವ್ಯಾಪಕತೆಯನ್ನು ತೋರಿದ್ದು, ಒಂದೇ ದಿನ 407 ಜನರನ್ನು ಬಲಿಪಡೆದುಕೊಂಡಿದೆ. ಇದರೊಂದಿಗೆ ಈ ವರೆಗೆ ಕೊರೋನಾಗೆ ಬಲಿಯಾದವರ ಸಂಖ್ಯೆ 15,301ಕ್ಕೆ ತಲುಪಿದೆ. ಜಾಗತಿಕ ಮಟ್ಟದಲ್ಲಿ ಅತೀ ಹೆಚ್ಚು ಸಾವು ದಾಖಲಾದ ದೇಶಗಳ ಪಟ್ಟಿಯಲ್ಲಿ 9ನೇ ಸ್ಥಾನ ಪಡೆದುಕೊಂಡಿದೆ.

ದೇಶದಲ್ಲಿ ಒಂದೇ ದಿನ 16,922 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ, 418 ಮಂದಿ ಸಾವು
ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಏರುಗತಿ ಮುಂದುವರೆದಿದ್ದು, ಗುರುವಾರ ದೇಶದಲ್ಲಿ 16,922 ಮಂದಿಯಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 4,73,105ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 14933 ಮಂದಿಯಲ್ಲಿ ಕೊರೋನಾ ಪತ್ತೆ, ಸೋಂಕಿತರ ಸಂಖ್ಯೆ 4.40 ಲಕ್ಷಕ್ಕೆ ಏರಿಕೆ
ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದ್ದು, ಮಂಗಳವಾರ ಬರೋಬ್ಬರಿ 14,933 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 440215ಕ್ಕೆ ಏರಿಕೆಯಾಗಿದೆ.

ವಿಶ್ವದಾದ್ಯಂತ ಕೊರೋನಾ ಆರ್ಭಟ: 90 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 4.46 ಲಕ್ಷ ಮಂದಿ ಸಾವು
ವಿಶ್ವದಾದ್ಯಂತ ಕೊರೋನಾ ಆರ್ಭಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 90 ಲಕ್ಷ ಗಡಿ ದಾಟಿದೆ. ಅಲ್ಲದೆ. 4.46 ಲಕ್ಷ ಮಂದಿ ಬಲಿಯಾಗಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು ನಗರದಲ್ಲಿ ಕೊರೋನಾ ಆರ್ಭಟ: ನಿನ್ನೆ ಒಂದೇ ದಿನ 94 ಮಂದಿಯಲ್ಲಿ ಸೋಂಕು ಪತ್ತೆ
ಬೆಂಗಳೂರು ನಗರದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕೊರೋನಾ ವಾರಿಯರ್ಸ್, ವಿಧಾನಸೌಧದ ವಾರ್ತಾ ಇಲಾಖೆ ಉಪ ನಿರ್ದೇಶಕ, ಪೊಲೀಸ್ ಸಿಬ್ಬಂದಿ, ಬಿಎಂಟಿಸಿ ಸಿಬ್ಬಂದಿ, ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸೇರಿದಂತೆ ಶನಿವಾರ ಬರೋಬ್ಬರಿ 94 ಮಂದಿಗೆ ಕೊರೋನಾ ಸೋಂಕು ದೃಢಪಡುವ ಮೂಲಕ ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.

ಕೋವಿಡ್-19: 24 ಗಂಟೆಗಳಲ್ಲಿ 15,413 ಮಂದಿಯಲ್ಲಿ ವೈರಸ್ ಪತ್ತೆ, 4.10ಲಕ್ಷಕ್ಕೇರಿದೆ ಸೋಂಕಿತರ ಸಂಖ್ಯೆ
ಲಾಕ್'ಡೌನ್ ಸಡಿಲಗೊಂಡ ಬಳಿಕ ಶರವೇಗದಲ್ಲಿ ಏರುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಹೊಸದೊಂದು ಮೈಲಿಗಲ್ಲು ನಿರ್ಮಿಸಲು ಸಜ್ಜಾಗಿದೆ. ಭಾನುವಾರ ದೇಶದಲ್ಲಿ ಹೊಸದಾಗಿ 15,413 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.10ಲಕ್ಷಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 24 ಗಂಟೆಗಳಲ್ಲಿ 14,516 ಮಂದಿಯಲ್ಲಿ ಕೊರೋನಾ ವೈರಸ್ ದೃಢ, ಸೋಂಕಿತರ ಸಂಖ್ಯೆ 3.95 ಲಕ್ಷಕ್ಕೆ ಏರಿಕೆ
ಭಾರತದಲ್ಲಿ ಕೊರೋನಾ ರೌದ್ರಾವತಾರ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 14,516 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

