infection

ದೇಶದಲ್ಲಿ ಒಂದೇ ದಿನ 13,586 ಜನಕ್ಕೆ ಕೊರೋನಾ, ಸೋಂಕಿತರ ಸಂಖ್ಯೆ 3.80 ಲಕ್ಷಕ್ಕೆ ಏರಿಕೆ, 12,573 ಮಂದಿ ಸಾವು
ಕೊರೋನಾ ವೈರಸ್ ಅಟ್ಟಹಾಸ ದೇಶದಲ್ಲಿ ಮುಂದುವರೆದಿದ್ದು, ಒಂದೇ ದಿನ 13,586 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,80,532ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ಕೊರೋನಾ ವೈರಸ್: ಜಗತ್ತಿನಾದ್ಯಂತ 4.5 ಲಕ್ಷ ದಾಟಿದ ಸಾವಿನ ಸಂಖ್ಯೆ
ಮಾರಕ ಕೊರೋನದಿಂದ ಜಗತ್ತಿನಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 4 ಲಕ್ಷದ 50 ಸಾವಿರ ದಾಟಿದೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್‌ಎಸ್‌ಇ) ತಿಳಿಸಿದೆ.

ದೇಶಕ್ಕೆ ಕೊರೋನಾ ಶಾಕ್: ಒಂದೇ ದಿನ 11,502 ಮಂದಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 3.32 ಲಕ್ಷಕ್ಕೆ ಏರಿಕೆ
ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಮತ್ತೆ ಹೊಸದಾಗಿ 11,502 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3.32 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ದೇಶಕ್ಕೆ ಕೊರೋನಾಘಾತ: ಒಂದೇ ದಿನ 10,956 ಮಂದಿಯಲ್ಲಿ ವೈರಸ್ ದೃಢ, ಭಾರತದಲ್ಲೀಗ 2.97 ಲಕ್ಷ ಸೋಂಕಿತರು, 8,498 ಮಂದಿ ಬಲಿ
ದೇಶದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ ಬರೋಬ್ಬರಿ 10,956 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2.97 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 9,985 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 2.76 ಲಕ್ಷಕ್ಕೆ ಏರಿಕೆ
ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದವರೆದಿದ್ದು, ಕಳೆದ 24 ಗಂಟೆಗಳಲ್ಲಿ 9,985 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,76,583ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 9,987 ಮಂದಿಯಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 2.66 ಲಕ್ಷಕ್ಕೆ ಏರಿಕೆ
ದೇಶದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 9,987 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿದೆ ದೇಶದಲ್ಲಿ ಸೋಂಕಿತರ ಸಂಖ್ಯೆ 2,66,598ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದ 10 ರಾಜ್ಯಗಳ 38 ಜಿಲ್ಲೆಗಳ ನಗರಗಳಲ್ಲಿ ಮನೆ ಮನೆ ಕೊರೋನಾ ತಪಾಸಣೆ ಅಗತ್ಯವಿದೆ: ರಾಜ್ಯಗಳಿಗೆ ಕೇಂದ್ರ ಸೂಚನೆ
ದೇಶದಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದ್ದು, ಈಗಾಗಲೇ ಸೋಂಕಿತರ ಸಂಖ್ಯೆ 2.5 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ 10 ರಾಜ್ಯಗಳ 38 ಜಿಲ್ಲೆಗಳ ನಗರಗಳಲ್ಲಿ ಮನೆ ಮನೆಗೆ ತೆರಳಿ ಕೊರೋನಾ ಪರೀಕ್ಷೆ ನಡೆಸುವ ಅಗತ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಒಂದೇ ದಿನ 9,983 ಕೊರೋನಾ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 2.56 ಲಕ್ಷಕ್ಕೆ ಏರಿಕೆ; 7,135 ಮಂದಿ ಸಾವು
ಭಾರತದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕೇವಲ ಒಂದೇ ದಿನದಲ್ಲಿ 9,983 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,56,611 ಲಕ್ಷಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: 70 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ವಿಶ್ವದಾದ್ಯಂತ ಕೊರೋನಾ ಆರ್ಭಟ ಹೆಚ್ಚುತ್ತಲೇ ಇದ್ದು, ಈ ವರೆಗೂ 70 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿಗೊಳಗಾಗಿದ್ದಾರೆಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್‌ಎಸ್‌ಇ) ತಿಳಿಸಿದೆ.

