Infosys foundation

ತುಮಕೂರಿನಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಇನ್ಫೋಸಿಸ್ ಮುಂದು!
ಇನ್ಫೋಸಿಸ್ ಫೌಂಡೇಷನ್, ಸಮಾಜಸೇವಾ ಸಂಸ್ಥೆ ಮತ್ತು ಇನ್ಫೋಸಿಸ್ ಸಂಸ್ಥೆಯ ಸಿಎಸ್‌ಆರ್ ನಿಧಿಯಿಂದ ತುಮಕೂರಿನ ಕುಣಿಗನ್ ನಲ್ಲಿ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಮುಂದಾಗಿದೆ.

ಹಿರಿಯರೆಂಬ ಕಾರಣಕ್ಕೆ ಸಂಭಾಜಿ ಭಿಡೆ ಕಾಲಿಗೆರಗಿದ ಸುಧಾ ಮೂರ್ತಿ; ಬಲವಂತವಾಗಿ ಭೇಟಿ ಮಾಡಿದ್ದ ಭಿಡೆ ಬೆಂಬಲಿಗರು!
ಭೀಮಾ ಕೊರೆಗಾಂವ್ ಪ್ರಕರಣದ ಪ್ರಮುಖ ಆರೋಪಿ ಸಂಭಾಜಿ ಭಿಡೆ ಅವರನ್ನು ಇನ್ಫೋಸಿಸ್ ಫೌಂಡೇಶನ್ ನ ಸುಧಾಮೂರ್ತಿ ಅವರು ಭೇಟಿಯಾಗಿರುವ ವಿಚಾರ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದ್ದು, ಆದರೆ ಭಿಡೆ ಬೆಂಬಲಿಗರೇ ಬಲವಂತವಾಗಿ ಸುಧಾಮೂರ್ತಿ ಅವರನ್ನು ಭೇಟಿಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು: ಜಯದೇವ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯದ ನೂತನ ಹೃದ್ರೋಗ ಘಟಕ ಉದ್ಘಾಟನೆ
ಜಯದೇವ ಹೃದ್ರೋಗ ಆಸ್ಪತ್ರೆಯ ಆವರಣದಲ್ಲಿ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನಿರ್ಮಾಣಗೊಂಡಿರುವ ನೂತನ ಕಟ್ಟಡ (ಇನ್ಫೋಸಿಸ್ ಬ್ಲಾಕ್) ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದಾರೆ.

ಜಯದೇವ ಹೃದ್ರೋಗ ಸಂಸ್ಥೆ ಆವರಣದಲ್ಲಿ 350 ಬೆಡ್ ಗಳ ಸಾಮರ್ಥ್ಯದ ನೂತನ ಆಸ್ಪತ್ರೆ: ಇನ್ಫೋಸಿಸ್ ಫೌಂಡೇಶನ್ ನೆರವು
ಇದೇ ತಿಂಗಳ 17ರಿಂದ ನಗರದ ಜಯದೇವ ಹೃದ್ರೋಗ ಆಸ್ಪತ್ರೆಯ ಆವರಣದಲ್ಲಿ 350 ಬೆಡ್ ಗಳ ಸೌಲಭ್ಯ ಹೊಂದಿರುವ ಹೃದ್ರೋಗ ಆಸ್ಪತ್ರೆ ಸಾರ್ವಜನಿಕರ ಚಿಕಿತ್ಸೆಗೆ ಲಭ್ಯವಾಗಲಿದೆ.

ಕಿದ್ವಾಯಿ ಆಸ್ಪತ್ರೆಯಲ್ಲಿ ಒಪಿಡಿ ತೆರೆದ ಇನ್ಫೋಸಿಸ್ ಫೌಂಡೇಷನ್
ಕಿದ್ವಾಯಿ ಗಂಥಿ ಸಂಸ್ಥೆಯಲ್ಲಿ ಇನ್ಫೋಸಿಸ್ ವತಿಯಿಂದ ನಿರ್ಮಿಸಿರುವ ಒಪಿಡಿ ಬ್ಲಾಕ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವೋ ಸುಧಾಕರ್ ಅವರು ಸೋಮವಾರ ಉದ್ಘಾಟನೆ ಮಾಡಿದರು.

ಕೊರೋನಾ ವಿರುದ್ಧ ಹೋರಾಟಕ್ಕೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ
ನಿರಂತರವಾಗಿ ಹೆಚ್ಚುತ್ತಿರುವ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಚಲನಚಿತ್ರ ಪೋಷಕ ಕಲಾವಿದರು, ಕಾರ್ಮಿಕರಿಗೆ ಇನ್ಫೋಸಿಸ್ ಪ್ರತಿಷ್ಠಾನದಿಂದ ನೆರವು
ಕೊರೋನಾ ಸೋಂಕಿನಿಂದ ನಲುಗಿಹೋಗಿರುವ ಚಲನಚಿತ್ರ ಪೋಷಕ ಕಲಾವಿದರು ಹಾಗೂ ಕಾರ್ಮಿಕರಿಗೆ ಇನ್ಫೋಸಿಸ್ ಪ್ರತಿಷ್ಠಾನ ಆಹಾರ ಕಿಟ್‌ಗಳ ವಿತರಣೆ ಮಾಡುವ ಮೂಲಕ ಕಲಾವಿದರ ನೆರವಿಗೆ ಧಾವಿಸಿದೆ.

ಬ್ರಾಡ್ ವೇ ರಸ್ತೆಯ ಕೋವಿಡ್ ಆಸ್ಪತ್ರೆ ಉದ್ಘಾಟನೆ: ಶೇ.1%ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿಗೆ ಐಸಿಯುನಲ್ಲಿ ಚಿಕಿತ್ಸೆ
4 ತಿಂಗಳ ಪರಿಶ್ರಮದಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆ ಇಲ್ಲದೆ ಕೋವಿಡ್ ರೋಗಿಗಳಿಗೆ ಸುಸಜ್ಜಿತ ಆಸ್ಪತ್ರೆ ಲಭ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಇನ್ಫೋಸಿಸ್ ಪ್ರತಿಷ್ಠಾನದಿಂದ ಬಿಪಿಎಲ್ ಕಾರ್ಡ್ ಇಲ್ಲದ ಮತ್ತು ವಿಶೇಷ ಚೇತನರಿಗೆ ದಿನಸಿ ಸಾಮಗ್ರಿ ವಿತರಣೆ
ಕೊರೋನಾ ಲಾಕ್ ಡೌನ್ ನಿಂದಾಗಿ ಎಲ್ಲಾ ಸ್ತರದ ಜನರು ತೊಂದರೆಗೀಡಾಗಿದ್ದು, ಇನ್ಫೋಸಿಸ್ ಪ್ರತಿಷ್ಠಾನದಿಂದ ಬಿಪಿಎಲ್ ಪಡಿತರ ಚೀಟಿ ಹೊಂದಿಲ್ಲದ ಮತ್ತು ವಿಶೇಷ ಚೇತನರಿಗೆ ಪಡಿತರ ಧಾನ್ಯ ವಿತರಿಸಲಾಯಿತು

