injured

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮೂರು ಮಂದಿ ಸಾವು, ನಾಲ್ವರಿಗೆ ಗಾಯ
ಕಳೆದ ತಿಂಗಳು ತೀವ್ರ ಹಿಂಸಾಚಾರ, ಪ್ರತಿಭಟನೆಗಳಿಂದ ತತ್ತರಿಸಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಕೆಲ ದಿನಗಳಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತ್ತು. ಆದರೆ, ಸೋಮವಾರ ಬೆಳಗ್ಗೆ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಡಿಶಾ ರೈಲು ದುರಂತ: ಹಳಿಗಳ ಮೇಲೆ ಹೆಣಗಳ ರಾಶಿ, ಗಾಯಾಳುಗಳಿಂದ ತುಂಬಿ ತುಳುಕುತ್ತಿರುವ ಆಸ್ಪತ್ರೆ; ಹೊರಗಡೆಯೇ ಚಿಕಿತ್ಸೆ
ಭೀಕರ ದುರಂತದಲ್ಲಿ ಸುಮಾರು 233 ಮಂದಿ ಸಾವನ್ನಪ್ಪಿರುವುದರಿಂದ ರೈಲು ಹಳಿಗಳ ಮೇಲೆ ಹೆಣಗಳ ರಾಶಿಯೇ ಬಿದ್ದಿದೆ. ರೈಲ್ವೆ ಬೋಗಿಗಳು ಒಂದರ ಮೇಲೆ ಒಂದು ಬಿದ್ದಿರುವುದರಿಂದ ರಕ್ಷಣಾ ಕಾರ್ಯಾಚರಣೆ ಕ್ಲಿಷ್ಟಕರವಾಗಿದೆ.

ಅಭಿಮಾನಿಗಳ ಪ್ರಾರ್ಥನೆಯಿಂದ ಆರೋಗ್ಯದಲ್ಲಿ ಚೇತರಿಕೆ: ಅಮಿತಾಬ್ ಬಚ್ಚನ್
ಹೈದ್ರಾಬಾದ್‍ನಲ್ಲಿ ನಡೆಯುತ್ತಿದ್ದ ಪ್ರಾಜೆಕ್ಟ್ ಕೆ ಚಿತ್ರಿಕರಣದಲ್ಲಿ ಗಾಯಗೊಂಡು ಇದೀಗ ಚೇತರಿಸಿಕೊಳ್ಳುತ್ತಿರುವ ಮೆಗಾಸ್ಟಾರ್ ಅಮಿತಾಬ್ ಬಚ್ಚನ್, ಮಂಗಳವಾರ ಅಭಿಮಾನಿಗಳ ಕಾಳಜಿ ಮತ್ತು ಪ್ರಾರ್ಥನೆಗಳಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಜಮ್ಮು-ಕಾಶ್ಮೀರ: ಅವಂತಿಪೋರಾ ಎನ್ ಕೌಂಟರ್, ಓರ್ವ ಉಗ್ರನ ಹತ್ಯೆ
ಜಮ್ಮು-ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ

ಗುಜರಾತ್: ವಲ್ಸಾದ್ ಫಾರ್ಮಾ ಕಂಪನಿಯಲ್ಲಿ ಸ್ಫೋಟ; ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ
ಗುಜರಾತ್ ನ ವಲ್ಸಾದ್ ಜಿಲ್ಲೆಯಲ್ಲಿ ಔಷಧ ಕಂಪನಿಯೊಂದರಲ್ಲಿ ಕಳೆದ ರಾತ್ರಿ ಹಠಾತ್ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಕ್ರಿಕೆಟ್ ಆಡುವ ವೇಳೆ ಜ್ಯೋತಿರಾದಿತ್ಯ ಸಿಂಧಿಯಾ ಹೊಡೆದ ಚೆಂಡು ಬಿಜೆಪಿ ಕಾರ್ಯಕರ್ತನ ತಲೆಗೆ ಬಡಿದು ಗಾಯ!
ನೂತನವಾಗಿ ನಿರ್ಮಿಸಲಾದ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾಟದ ವೇಳೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಹೊಡೆದ ಬಾಲ್ ಬಿಜೆಪಿ ಕಾರ್ಯಕರ್ತನ ತಲೆಗೆ ಬಡಿದು ರಕ್ತಸ್ರಾವ ಉಂಟಾದ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.

ಹರಿಯಾಣ: ಮದುವೆಯಿಂದ ವಾಪಸ್ಸಾಗುತ್ತಿದ್ದವರು ಮಸಣಕ್ಕೆ; ಭೀಕರ ಅಪಘಾತದಲ್ಲಿ ಮೂವರು ಸಾವು, 7 ಮಂದಿಗೆ ಗಾಯ
ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಮೂವರು ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವರಿ ಬಳಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ದೆಹಲಿ: ಇಟ್ಟಿಗೆ ತುಂಬಿದ ಟ್ರಕ್ ಪಲ್ಟಿ, 60 ವರ್ಷದ ವೃದ್ಧ ಸಾವು, ಇಬ್ಬರಿಗೆ ಗಾಯ
ಇಟ್ಟಿಗೆ ತುಂಬಿದ್ದ ಟ್ರಕ್ ಪಲ್ಟಿಯಾದ ಪರಿಣಾಮ 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನವದೆಹಲಿಯ ಮಂಗೋಲ್ ಪುರಿ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮುವಿನಲ್ಲಿ ಅವಳಿ ಸ್ಫೋಟ; 9 ಮಂದಿಗೆ ಗಾಯ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಜಮ್ಮು ತಲುಪಲು ಕೇವಲ ಎರಡು ದಿನ ಬಾಕಿಯಿರುವಂತೆಯೇ, ಶನಿವಾರ ನಗರದ ಹೊರವಲಯದಲ್ಲಿರುವ ಜನನಿಬಿಡ ಪ್ರದೇಶದಲ್ಲಿ ಅವಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

