injured

ಮುಂಬೈ: ಬಿರುಗಾಳಿ, ಮಳೆಗೆ ಕಬ್ಬಿಣದ ಹೋರ್ಡಿಂಗ್ ಕುಸಿತ, 9 ಜನರ ಸಾವು, 70 ಮಂದಿಗೆ ಗಾಯ- ವಿಡಿಯೋ
ಬಿರುಗಾಳಿ, ಮಳೆಗೆ ಕಬ್ಬಿಣದ ಹೋರ್ಡಿಂಗ್ ವೊಂದು ಪೆಟ್ರೋಲ್ ಪಂಪ್ ಮೇಲೆ ಕುಸಿದು ಬಿದ್ದ ಪರಿಣಾಮ 9 ಜನರು ಸಾವನ್ನಪ್ಪಿದ್ದು, 70 ಮಂದಿ ಗಾಯಗೊಂಡಿರುವ ಘಟನೆ ವಾಣಿಜ್ಯ ನಗರಿಯ ಘಾಟ್ಕೋಪರ್ ಪ್ರದೇಶದಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಅನೇಕ ಮಂದಿ ಅವಶೇಷಗಳಡಿ ಸಿಲುಕಿಕೊಂಡಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿಒಕೆಯಲ್ಲಿ ಪ್ರತಿಭಟನೆ ವೇಳೆ ಘರ್ಷಣೆ: ಪೊಲೀಸ್ ಅಧಿಕಾರಿ ಸಾವು, ನೂರಾರು ಮಂದಿಗೆ ಗಾಯ
ವಿದ್ಯುತ್ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪಾಕ್ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಭದ್ರತಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವೆ ಉಂಟಾದ ಘರ್ಷಣೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿರುವುದಾಗಿ ಮಾಧ್ಯಮ ವರದಿಗಳು ಭಾನುವಾರ ಹೇಳಿವೆ.

ಬಿಹಾರ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸರ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ
ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಿಂದಿನಿಂದ ವೇಗವಾಗಿ ಬಂದ ಕಂಟೈನರ್ ಟ್ರಕ್ ವ್ಯಾನ್‌ಗೆ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು ಹನ್ನೆರಡು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಗಾಯಗೊಂಡ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದಿದ್ದು, ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಘೀರ ಸಿನಿಮಾ ಶೂಟಿಂಗ್ ವೇಳೆ ನಟ ಶ್ರೀಮುರಳಿಗೆ ಗಾಯ, ಆಸ್ಪತ್ರೆಗೆ ದಾಖಲು!
ನಟ ಶ್ರೀಮುರಳಿ ಬಘೀರ ಚಿತ್ರದ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಬಘೀರ ಆ್ಯಕ್ಷನ್ ಚಿತ್ರವಾಗಿದ್ದು ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ದೃಶ್ಯಗಳಿವೆ. ಫೈಟ್ ದೃಶ್ಯಗಳನ್ನು ಚಿತ್ರೀಕರಿಸುವ ವೇಳೆ ಶ್ರೀಮುರಳಿ ಕಾಲಿಗೆ ಗಾಯವಾಗಿದೆ.

ಚುನಾವಣಾ ಕರ್ತವ್ಯದ ನಂತರ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ: 21 ಮಂದಿಗೆ ಗಾಯ
ಚುನಾವಣಾ ಕರ್ತವ್ಯದ ನಂತರ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಶನಿವಾರ ನಸುಕಿನ ವೇಳೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಪಲ್ಟಿಯಾಗಿದ್ದು, 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಹಮದಾಬಾದ್: ಟ್ರಕ್ ಗೆ ಡಿಕ್ಕಿ ಹೊಡೆದ ಕಾರು,10 ಮಂದಿ ದುರ್ಮರಣ
ವಡೋದರಾ-ಅಹಮದಾಬಾದ್ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಜನರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಒಡಿಶಾ: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬಸ್, 5 ಮಂದಿ ಪ್ರಯಾಣಿಕರು ಸಾವು, ಹಲವರಿಗೆ ಗಾಯ
ಒಡಿಶಾದ ಜಾಜ್‌ಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-16 ರಲ್ಲಿ ಸೋಮವಾರ ರಾತ್ರಿ ಮೇಲ್ಸೇತುವೆಯಿಂದ ಬಸ್ ಕೆಳಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದು, ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶಾದ್ಯಂತ ಹೋಳಿ ಸಂಭ್ರಮಾಚರಣೆ: ಉಜ್ಜಯಿನಿ ಮಹಾಕಾಳೇಶ್ವರ ದೇವಾಲಯದ ಗರ್ಭಗೃಹದಲ್ಲಿ ಬೆಂಕಿ, 14 ಅರ್ಚಕರಿಗೆ ಗಾಯ
ದೇಶಾದ್ಯಂತ ಸಡಗರ-ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಬಣ್ಣಗಳ ಹಬ್ಬ ಎಂದೂ ಕರೆಯಲ್ಪಡುವ ಹೋಳಿಯು ವಸಂತಕಾಲದ ಆಗಮನ ಮತ್ತು ಚಳಿಗಾಲದ ಅಂತ್ಯವನ್ನು ಸೂಚಿಸುತ್ತದೆ. ಬೆಳಗ್ಗೆಯಿಂದಲೇ ದೇವಾಲಯಗಳಿಗೆ ಆಗಮಿಸುತ್ತಿರುವ ಜನರು, ದೇವರ ದರ್ಶನ ಪಡೆದು, ಪರಸ್ಪರ ಬಣ್ಣ ಎರಚುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.

