ರಾಜ್ಯಕೊರೋನಾ ವೈರಸ್: ಅಂತರ್ ರಾಜ್ಯ ಬಸ್ ಸೇವೆ ಮಾರ್ಚ್ 31ರ ವರೆಗೆ ಸ್ಥಗಿತ
ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಪ್ರಯಾಣಿಕ ರೈಲು ಸೇವೆ ಸ್ಥಗಿತ ಆದೇಶ ಹೊರಬಿದ್ದ ಬೆನ್ನಲ್ಲೇ ಇದೀಗ ಕರ್ನಾಟಕ ಸರ್ಕಾರ ಎಲ್ಲ ಅಂತರರಾಜ್ಯ ಬಸ್ ಸೇವೆಯನ್ನು ಮಾರ್ಚ್ 31ರ ವರೆಗೆ ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ.