investigation

ಸಿಡಿ ಹಗರಣ: ಎಸ್ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ತನಿಖೆ ಪ್ರಗತಿ ಸಾಧ್ಯವೇ?- ಸರ್ಕಾರಕ್ಕೆ ಹೈ ಪ್ರಶ್ನೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಹಗರಣದ ತನಿಖೆಯನ್ನು ವಿಶೇಷ ತನಿಖಾದಳ (ಎಸ್ ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರ ಅನುಪಸ್ಥಿತಿಯಲ್ಲಿ ಮುಂದುವರೆಸುವ ವಿಚಾರವಾಗಿ ಹೈಕೋರ್ಟ್ ಸರ್ಕಾರದಿಂದ ವಿವರಣೆಯನ್ನು ಕೇಳಿದೆ.

ವಾಯುನೆಲೆಯಲ್ಲಿ ಡ್ರೋಣ್ ಸ್ಫೋಟ ಪ್ರಕರಣ: ಎನ್‌ಎಸ್‌ಜಿಯ ವಿಶೇಷ ಬಾಂಬ್ ತಪಾಸಣಾ ತಂಡದಿಂದ ತನಿಖೆ ಆರಂಭ
ಭಾರತೀಯ ವಾಯುಪಡೆ ಕೇಂದ್ರದ ಮೇಲಿನ ಡ್ರೋಣ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ (ಎನ್ ಎಸ್ ಜಿ) ವಿಶೇಷ ಬಾಂಬ್ ತಪಾಸಣಾ ತಂಡ ತನಿಖೆ ಆರಂಭಿಸಿದೆ ಎಂದು ಮೂಲಗಳಿಂದ ಮಂಗಳವಾರ ತಿಳಿದುಬಂದಿದೆ.

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಮೃತದೇಹ ಕುಟುಂಬಕ್ಕೆ ಹಸ್ತಾಂತರ: ಶಂಕಿತರ ವಿಚಾರಣೆ
ಬಿಬಿಎಂಪಿಯ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ವಿಧಿವಿಧಾನ ಮುಗಿದ ಬಳಿಕ ಅವರ ಕುಟುಂಬಸ್ಥರಿಗೆ ಶುಕ್ರವಾರ ಬೆಳಗ್ಗೆ ಮೃತದೇಹ ಹಸ್ತಾಂತರಿಸಲಾಗಿದೆ.

ಪ್ರಕರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಮಾಹಿತಿ ಬಹಿರಂಗಪಡಿಸಬೇಡಿ: ಪೊಲೀಸರಿಗೆ 'ಹೈ' ಸೂಚನೆ
ಅಪರಾಧ ಕೃತ್ಯಗಳ ತನಿಖೆ ಪೂರ್ಣಗೊಳ್ಳುವುದಕ್ಕೂ ಮುನ್ನವೇ ಪೊಲೀಸ್ ಅಧಿಕಾರಿಗಳು ಮಾಹಿತಿಗಳನ್ನು ಬಹಿರಂಗಪಡಿಸುತ್ತಿರುವುದಕ್ಕೆ ಹೈಕೋರ್ಟ್ ಮಂಗಳವಾರ ತೀವ್ರವಾಗಿ ಕೆಂಡಾಮಂಡಲಗೊಂಡಿದೆ.

ಮೈಸೂರು ಐಎಎಸ್ ಅಧಿಕಾರಿಗಳ ಕಿತ್ತಾಟಕ್ಕೆ ಭೂ ಹಗರಣ ಕಾರಣ, ತನಿಖೆ ನಡೆಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ
ರಾಜ್ಯದ ಇಬ್ಬರು ಐಎಎಸ್ ಅಧಿಕಾರಿಗಳ ಬಹಿರಂಗ ಕಿತ್ತಾಟಕ್ಕೆ ಭೂ ಹಗರಣ ಕಾರಣ ಎಂದು ಹೇಳಲಾಗುತ್ತಿದ್ದು, ಹೀಗಾಗಿ ಸರ್ಕಾರ ಕೂಡಲೇ ಹಗರಣದ ಬಗ್ಗೆ ಸ್ವತಂತ್ರ ತನಿಖಾ ಸಂಸ್ಥೆ ಮೂಲಕ ತನಿಖೆ ನಡೆಸಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ 8 ಗಂಟೆಗಳ ಕಾಲ ಸಿಬಿಐ ಡ್ರಿಲ್!
ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿದ್ದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ನಿರ್ದೇಶನದ ಮೇರೆಗೆ ಪ್ರಾಥಮಿಕ ವಿಚಾರಣೆ ನಡೆಸುತ್ತಿರುವ ಸಿಬಿಐನಿಂದ ಇಂದು 8 ಗಂಟೆಗಳ ಕಾಲ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಪ್ರಶ್ನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೂಚ್ ಬೆಹಾರ್ ಘರ್ಷಣೆ ಪ್ರಕರಣವನ್ನು ಸರ್ಕಾರ ತನಿಖೆ ನಡೆಸಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಮಮತಾ ಬ್ಯಾನರ್ಜಿ
ಕೂಚ್ ಬೆಹಾರ್‌ನ ಸೀತಾಲಕುಚಿಯಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ತನಿಖೆ ನಡೆಸಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಹೇಳಿದ್ದಾರೆ.

ಡಿಜೆ ಹಳ್ಳಿ ಗಲಭೆ ಪ್ರಕರಣ: ಪೊಲೀಸರಿಗೆ ಸಹಾಯ ಮಾಡುವ ಸಲುವಾಗಿ ನಮ್ಮನ್ನು ಸ್ಥಳಕ್ಕೆ ಕರೆಯಲಾಗಿತ್ತು- ಎನ್ಐಎಗೆ ಶಾಸಕರ ಹೇಳಿಕೆ
ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ನನ್ನನ್ನು ಕರೆದಿದ್ದು ಅಚ್ಚರಿ ಮೂಡಿಸಿದೆ. ಡಿಜೆ ಹಳ್ಳಿ ಗಲಭೆ ಸ್ಥಳಕ್ಕೆ ಭೇಟಿ ನೀಡಿದ್ದೆವು ಎಂಬ ಕಾರಣಕ್ಕೆ ಕರೆದಿದ್ದರು.

ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ಬಂದರೆ ತನಿಖೆ ಇಲ್ಲ: ಸರ್ಕಾರದ ಆದೇಶ
ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಬರುವ ಅನಾಮಧೇಯ ದೂರುಗಳ ಬಗ್ಗೆ ಕ್ರಮಕೈಗೊಳ್ಳುವಂತಿಲ್ಲ. ಪೂರ್ಣ ವಿಳಾಸ, ದಾಖಲೆ ಇದ್ದರೆ ಮಾತ್ರ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

