IPC Section

ಕೊಲೆಗಾರರಿಗೆ ಸಂಬಂಧಪಟ್ಟ ಕಾನೂನನ್ನು ಪ್ರಾಣಿ ಹತ್ಯೆ ಮಾಡುವವರಿಗೆ ಅನ್ವಯಿಸಲು ಸಾಧ್ಯವಿಲ್ಲ: ಹೈಕೋರ್ಟ್
ಕೊಲೆಗಾರರನ್ನು ಶಿಕ್ಷಿಸಲು ಅನ್ವಯವಾಗುವ ಕ್ರಿಮಿನಲ್ ಕಾನೂನುಗಳನ್ನು ಪ್ರಾಣಿಹಂತಕರ ವಿಚಾರಣೆಗೆ ಅನ್ವಯಿಸಬೇಕು ಎಂಬ ವಾದವನ್ನು ತಿರಸ್ಕರಿಸಿರುವ ಕರ್ನಾಟಕ ಹೈಕೋರ್ಟ್, ನಾಯಿಯನ್ನು ಕೊಂದಿದ್ದರಿಂದ ಐಪಿಸಿ ಮತ್ತು ಮೋಟಾರು ವಾಹನ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದ ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿದೆ.

ಪೋಷಕರ ಪರಸ್ಪರ ಸಂಧಾನ: ಅಪ್ರಾಪ್ತ ಬಾಲಕನ ವಿರುದ್ಧದ ಪೋಕ್ಸೋ ಪ್ರಕರಣ ಮುಕ್ತಾಯಗೊಳಿಸಿದ ಹೈಕೋರ್ಟ್!
ಸಂತ್ರಸ್ಥ ಅಪ್ರಾಪ್ತ ಬಾಲಕಿಯ ಪೋಷಕರ ನಡುವೆ ಸಂಧಾನ ಏರ್ಪಟ್ಟ ಹಿನ್ನಲೆಯಲ್ಲಿ ಐಪಿಸಿ ಅಡಿಯಲ್ಲಿ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಕಾಯ್ದೆಗಳಡಿ ಆಪ್ರಾಪ್ತ ಬಾಲಕನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದೆ.

