IPL 2024

IPL 2024: ಪಂಜಾಬ್ ಕಿಂಗ್ಸ್ ವಿರುದ್ಧದ ಸವಾಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಿದ್ಧತೆ, ಗೆಲ್ಲೋದು ಯಾರು?
ಐಪಿಎಲ್ 2024ರ ಆವೃತ್ತಿಯಲ್ಲಿ ಸತತ ಸೋಲುಗಳ ಬಳಿಕ ಗೆಲುವಿನ ಲಯಕ್ಕೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನೂ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಇದೀಗ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಪರಸ್ಪರ ಸೆಣಸಲಿವೆ. ಧರ್ಮಶಾಲಾದ ಎಚ್‌ಪಿಸಿಎ ಅಂಗಳದಲ್ಲಿ ಗುರುವಾರ ಈ ಪಂದ್ಯ ನಡೆಯಲಿದೆ.

IPL 2024: ನೀತಿ ಸಂಹಿತೆ ಉಲ್ಲಂಘನೆ; ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್‌ಗೆ ಭಾರಿ ದಂಡ!
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್ (ಆರ್‌ಆರ್) ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ ಪಂದ್ಯ ಶುಲ್ಕದ ಶೇ 30ರಷ್ಟು ದಂಡ ವಿಧಿಸಲಾಗಿದೆ.

ಐಪಿಎಲ್ 2024: ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು, ಪ್ಲೇಆಫ್ ಕನಸು ಜೀವಂತ
ಐಪಿಎಲ್ 2024ರ 56ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮಂಗಳವಾರ ಭರ್ಜರಿ ಗೆಲುವು ಸಾಧಿಸಿದೆ.

ಐಪಿಎಲ್ 2024: ಸೂರ್ಯಕುಮಾರ್ ಶತಕದ ನೆರವಿನಿಂದ ಹೈದರಾಬಾದ್ ವಿರುದ್ಧ ಮುಂಬೈ ಗೆಲುವು
ಐಪಿಎಲ್ 2024ರ 55ನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ಸೋಮವಾರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

IPL 2024: 9ನೇ ಕ್ರಮಾಂಕದಲ್ಲಿ ಧೋನಿ ಬ್ಯಾಟಿಂಗ್: CSK ನಿರ್ಧಾರ ಪ್ರಶ್ನಿಸಿದ ಹರ್ಭಜನ್ ಸಿಂಗ್!
ಚೆನ್ನೆ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಫಾರ್ಮ್ ನಲ್ಲಿದ್ದರೂ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿಸಿದ ಸಿಎಸ್ ಕೆ ನಿರ್ಧಾರವನ್ನು ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಪ್ರಶ್ನಿಸಿದ್ದಾರೆ.

IPL 2024: ಲಕ್ನೊ ವಿರುದ್ಧ ಕೆಕೆಆರ್ಗೆ 98 ರನ್ ಜಯ: ಅಂಕ ಪಟ್ಟಿಯಲ್ಲಿ ಕೋಲ್ಕತ್ತಾ ತಂಡ ಅಗ್ರ ಸ್ಥಾನಕ್ಕೆ!
ಐಪಿಎಲ್ 2024 ರ ಟೂರ್ನಿ ನಿರ್ಣಾಯಕ ಘಟ್ಟ ತಲುಪಿದ್ದು, ಈ ಹಂತದಲ್ಲಿ ಲಕ್ನೋ ತಂಡದ ವಿರುದ್ದ 98 ರನ್ ಗಳ ಬೃಹತ್ ಜಯ ಗಳಿಸಿರುವ ಕೋಲ್ಕತ್ತ ತಂಡ ಅಂಕಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದೆ.

IPL 2024: ರವೀಂದ್ರ ಜಡೇಜಾ ಆಲ್ರೌಂಡ್ ಆಟ; ಪಂಜಾಬ್ ವಿರುದ್ಧ ಚೆನ್ನೈಗೆ 28 ರನ್ ಜಯ
ಐಪಿಎಲ್ 2024ರ 53ನೇ ಪಂದ್ಯದಲ್ಲಿ ರವೀಂದ್ರ ಜಡೇಜಾ ಅವರ ಆಲ್‍ರೌಂಡ್ ಆಟದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ), ಪಂಜಾಬ್ ಕಿಂಗ್ಸ್ ವಿರುದ್ಧ 28 ರನ್‍ಗಳ ಭರ್ಜರಿ ಗೆಲುವು ಸಾಧಿಸಿದೆ.

IPL 2024: ನಿನ್ನ ಸ್ಟ್ರೈಕ್ ರೇಟ್ ಗೆ ಚಪ್ಪಾಳೆ ಹೊಡೆಯಬೇಕಾ? ಕಿಂಗ್ ಕೊಹ್ಲಿ ವಿರುದ್ಧ ಸುನಿಲ್ ಗವಾಸ್ಕರ್ ಗರಂ
ಲಿಟ್ಲ್ ಮಾಸ್ಟರ್ ಸುನಿಲ್ ಗವಾಸ್ಕರ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಭಾರತೀಯ ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿಯನ್ನು ಟಾರ್ಗೆಟ್ ಮಾಡಿದ್ದಾರೆ. ಕಳೆದ ಪಂದ್ಯದ ನಂತರ ಕೊಹ್ಲಿ ತಮ್ಮ ಸ್ಟ್ರೈಕ್ ರೇಟ್ ಟೀಕಾಕಾರರನ್ನು ಗುರಿಯಾಗಿಸಿಕೊಂಡಿದ್ದರು.

IPL 2024: ನಿರ್ಣಾಯಕ ಹಂತದಲ್ಲಿ ಚೆನ್ನೈ ತಂಡಕ್ಕೆ ಆಘಾತ, ಮಾರಕ ವೇಗಿ Matheesha Pathiranaಗೆ ಗಾಯ, ಶ್ರೀಲಂಕಾಗೆ ವಾಪಸ್!
ಐಪಿಎಲ್ 2024ರ ಟೂರ್ನಿ ನಿರ್ಣಾಯಕ ಘಟ್ಟ ತಲುಪಿದ್ದು, ಇದೇ ಹೊತ್ತಿನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತವೊಂದು ಎದುರಾಗಿದೆ.

