IPS officer

ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ
ಹಿರಿಯ ಐಪಿಎಸ್ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ(CH Pratap Reddy) ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಇನ್ನು ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು.

ಬೆಂಗಳೂರು: ಮಹಿಳಾ ಐಪಿಎಸ್ ಅಧಿಕಾರಿಗೆ ಸಾರ್ವಜನಿಕವಾಗಿ ನಿಂದನೆ, ಬೆದರಿಕೆ ಹಾಕಿದ ಬೈಕ್ ಸವಾರ!
ಮಹಿಳಾ ಐಪಿಎಸ್ ಅಧಿಕಾರಿ ವಾಹನಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರ ನಂತರ ಅವರನ್ನು ನಿಂದಿಸಿ, ಬೆದರಿಕೆ ಹಾಕಿರುವ ಘಟನೆ ತುಮಕೂರು ಮುಖ್ಯರಸ್ತೆ ಗೊರಗುಂಟೆ ಪಾಳ್ಯ ದಲ್ಲಿ ನಡೆದಿದೆ.

ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಮತ್ತೆ ವರ್ಗಾವಣೆ: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಐಜಿ ಆಗಿ ನೇಮಕ
ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ಇತ್ತೀಚಿಗಷ್ಟೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಮತ್ತೊಮ್ಮೆ ವರ್ಗಾವಣೆಗೊಳಿಸಲಾಗಿದೆ.

ಮಾನನಷ್ಟ ಮೊಕದ್ದಮೆ ಪ್ರಕರಣ: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಹಿರಿಯ ಐಪಿಎಸ್ ಅಧಿಕಾರಿ ಡಿ ರೂಪ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ರದ್ದು ಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಸಿಬಿಐ ವಿಶೇಷ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಅಜಯ್ ಭಟ್ನಾಗರ್ ನೇಮಕ
ಸಿಬ್ಬಂದಿ ಸಚಿವಾಲಯದ ಆದೇಶದ ಪ್ರಕಾರ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಭಟ್ನಾಗರ್ ಅವರನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ವಿಶೇಷ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ರಾ ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ರವಿ ಸಿನ್ಹಾ ನೇಮಕ
ದೇಶದ ಬೇಹುಗಾರಿಕಾ ಸಂಸ್ಥೆ ರಾ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ಅವರನ್ನು ಸೋಮವಾರ ನೇಮಕ ಮಾಡಲಾಗಿದೆ.

ಐಪಿಎಸ್ ಅಧಿಕಾರಿ ಸೋಗಿನಲ್ಲಿ ಹಲವರಿಗೆ ವಂಚನೆ; 45 ವರ್ಷದ ವ್ಯಕ್ತಿ ಬಂಧನ
ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು ಜನರಿಗೆ ಮತ್ತು ಹಲವಾರು ಪೊಲೀಸರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ಕಾಟನ್‌ಪೇಟೆ ಪೊಲೀಸರು 45 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ನಕಲಿ ಪೊಲೀಸ್ ಅಧಿಕಾರಿ ವಿರುದ್ಧ ರಿಯಲ್ ಎಸ್ಟೇಟ್ ಏಜೆಂಟ್ ದೂರು ದಾಖಲು
ನಕಲಿ ಐಪಿಎಸ್ ಅಧಿಕಾರಿ ಆರ್ ಶ್ರೀನಿವಾಸ್ ವಿರುದ್ಧ 51 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ದೂರು ದಾಖಲಿಸಿದ್ದು, ಇತ್ತೀಚೆಗೆ ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.

ರೋಹಿಣಿ ಸಿಂಧೂರಿ ಕೇಸ್: ರೂಪಾ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಆದೇಶಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ಶುಕ್ರವಾರ ಆದೇಶಿಸಿದ್ದು, ರೂಪಾ ಅವರಿಗೆ ಸಮನ್ಸ್ ಜಾರಿ ಮಾಡಿದೆ.

