Irregularities

ಬೆಂಗಳೂರು: ಬಿಡಿಎ, ಬಿಬಿಎಂಪಿ, ಕೆಐಎಡಿಬಿಬಿ ಅಕ್ರಮಗಳ ತನಿಖೆಗೆ ಟಾಸ್ಕ್ ಫೋರ್ಸ್ ರಚನೆ?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಂತಹ ವಿವಿಧ ಏಜೆನ್ಸಿಗಳಲ್ಲಿನ ಹಗರಣಗಳ ತನಿಖೆಗೆ ಕಾರ್ಯಪಡೆ ರಚಿಸುವುದನ್ನು ಪರಿಗಣಿಸುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ವಿಧಾನ ಪರಿಷತ್ತಿಗೆ ತಿಳಿಸಿದರು.

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ: ಎಫ್‌ಐಆರ್ ದಾಖಲು
ಗಂಗಾ ಕಲ್ಯಾಣ ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ಹಾಗೂ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆ.

ಗುರುರಾಘವೇಂದ್ರ, ವಸಿಷ್ಠ ಸೌಹಾರ್ದ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ: ಸಚಿವ ಎಸ್.ಟಿ. ಸೋಮಶೇಖರ್
ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮತ್ತು ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆದಿರುವ ಅವ್ಯವಹಾರಗಳ ಕುರಿತ ತನಿಖೆಯನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು

ಕಂದಾಯ ಕಚೇರಿಗಳಲ್ಲಿ ಅಕ್ರಮ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು
ಬೆಂಗಳೂರು ಕಂದಾಯ ಕಚೇರಿಗಳಲ್ಲಿ ಅಕ್ರಮಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು, ವಿಚಾರಣೆ ಆರಂಭಿಸಿದ್ದಾರೆ.

ಬೆಂಗಳೂರು: ಅಕ್ರಮ ಎಸಗಿದ 7 ಜೈಲು ಅಧಿಕಾರಿಗಳ ವರ್ಗಾವಣೆ
ಅಕ್ರಮ ಎಸಗಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 7 ಕಾರಾಗೃಹದ ಅಧಿಕಾರಿಗಳನ್ನು ರಾಜ್ಯ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡಲಾಗಿದೆ.

ನೀರಾವರಿ ಯೋಜನೆ ಅನುಷ್ಠಾನದಲ್ಲಿ ಲೋಪ ದೋಷಗಳು ಕಂಡುಬಂದಲ್ಲಿ ಕಠಿಣ ಕ್ರಮ: ಬಿ.ಎಸ್. ಯಡಿಯೂರಪ್ಪ
ನೀರಾವರಿ ಯೋಜನೆಗಳನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನಗೊಳಿಸಬೇಕು. ಲೋಪ ದೋಷಗಳು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಬೆಡ್ ಬುಕ್ಕಿಂಗ್ ಅವ್ಯವಹಾರ, ಮಾಫಿಯಾ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ: ಸಿಎಂ ಭೇಟಿ ಮಾಡಿ ಕ್ರಮಕ್ಕೆ ಆಗ್ರಹ
ಕೊರೋನಾ ಕಾಲದಲ್ಲೂ ಜನರ ಜೀವದ ಜೊತೆ ಆಟಾಡುತ್ತಿರುವ, ಅಕ್ರಮವಾಗಿ ಬೆಡ್ ಬುಕ್ಕಿಂಗ್ ಮಾಡುತ್ತಿದ್ದ ಮಾಫಿಯಾವನ್ನು ಸಂಸದ ತೇಜಸ್ವಿ ಸೂರ್ಯ ಬಹಿರಂಗಪಡಿಸಿದ್ದಾರೆ.

'ಅಮೆರಿಕ ಇತಿಹಾಸದಲ್ಲಿಯೇ ಇದು ಅತಿ ಭ್ರಷ್ಟ ಚುನಾವಣೆ, ನನ್ನ ಹೋರಾಟ ಮುಗಿದಿಲ್ಲ': ಡೊನಾಲ್ಡ್ ಟ್ರಂಪ್
ಕಳೆದ ನವೆಂಬರ್ 3ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ಪ್ರಶ್ನಿಸಿ ತಮ್ಮ ಹೋರಾಟ ಮುಗಿದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಅಧಿಕೃತ ಪ್ರಮಾಣ ಪತ್ರದಲ್ಲಿ ಚುನಾಯಿತ ಅಧ್ಯಕ್ಷ ಜೊ ಬೈಡನ್ ಅವರ ಪರವಾಗಿದ್ದರೂ ಕೂಡ ತಮ್ಮ ಕಾನೂನು ಹೋರಾಟವನ್ನು ಮುಂದುವರಿಸುವುದಾಗಿ ಡೊನಾಲ್ಡ್ ಟ್ರಂಪ್ ಹೇಳುತ್ತಲೇ ಇದ್ದಾರೆ.

ಹಣಕಾಸು ಅಕ್ರಮ: ಲೀಲಾ ಸ್ಯಾಮ್ಸನ್ ವಿರುದ್ಧ ಕೇಸ್ ದಾಖಲಿಸಿದ ಸಿಬಿಐ
ಹಣಕಾಸು ಅಕ್ರಮಕ್ಕೆ ಸಂಬಂಧಿಸಿದಂತೆ ಖ್ಯಾತ ಭರತನಾಟ್ಯ ಕಲಾವಿದೆ ಹಾಗೂ ಸಂಗೀತ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷೆ ಲೀಲಾ ಸ್ಯಾಮ್ಸನ್ ಅವರ ವಿರುದ್ಧ ಸಿಬಿಐ ಶನಿವಾರ ಕೇಸ್ ದಾಖಲಿಸಿದೆ.

