Ishant Sharma

ಆಸ್ಟ್ರೇಲಿಯಾ ಟೆಸ್ಟ್ ಸರಣಿಯಿಂದ ಇಶಾಂತ್ ಶರ್ಮಾ ಹೊರಕ್ಕೆ!
ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಟೆಸ್ಟ್ ಸರಣಿಯಿಂದ ಭಾರತ ತಂಡದ ಹಿರಿಯ ವೇಗಿ ಇಶಾಂತ್ ಶರ್ಮಾ ಹೊರನಡೆದಿದ್ದಾರೆ. ಮತ್ತೊಂದೆಡೆ ಸೀಮಿತ ಓವರ್‌ಗಳ ಸರಣಿಗೆ ಅಲಭ್ಯರಾಗಿರುವ ರೋಹಿತ್ ಶರ್ಮಾ, ಟೆಸ್ಟ್ ಸರಣಿಗೆ ಲಭ್ಯರಾಗುವ ಸುಳಿವು ಇನ್ನೂ ಸಿಕ್ಕಿಲ್ಲ. ಆದರೆ, ಡಿಸೆಂಬರ್ 11 ರಂದು ಬಿಸಿಸಿಐ ಈ ಬಗ್ಗೆ ಸ್ಪಷ್ಟತೆ ನೀಡಲಿದೆ.

ಆಸ್ಟ್ರೇಲಿಯಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಡಬಲ್ ಆಘಾತ: ರೋಹಿತ್, ಇಶಾಂತ್ ಆಡುವುದು ಡೌಟ್
ಮುಂದಿನ ತಿಂಗಳು ಆರಂಭವಾಗುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಿಂದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಇಶಾಂತ್ ಶರ್ಮಾ ಹೊರಗುಳಿಯುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಆ ಮೂಲಕ ಬಲಿಷ್ಠ ಆಸ್ಟ್ರೇಲಿಯಾ ಎದುರು ಟೀಂ ಇಂಡಿಯಾಗೆ ಭಾರಿ ಆಘಾತ ಉಂಟಾಗಿದೆ.

ಜನಾಂಗೀಯ ನಿಂದನೆ: ಡರೇನ್ ಸಾಮಿ ಆರೋಪಕ್ಕೆ ಪುಷ್ಠಿ ನೀಡಿದ ಇಶಾಂತ್ ಶರ್ಮಾ ಪೋಸ್ಟ್!
ವೆಸ್ಟ್ ಇಂಡೀಸ್ ಕ್ರಿಕೆಟಿಗರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಜನಾಂಗೀಯ ನಿಂದನೆ ಆರೋಪಕ್ಕೆ ಪುಷ್ಠಿ ದೊರೆತಿದ್ದು, ಭಾರತ ತಂಡದ ಕ್ರಿಕೆಟಿಗ ಇಶಾಂತ್ ಶರ್ಮಾರ ಇನ್ ಸ್ಟಾಗ್ರಾಮ್ ಪೋಸ್ಟ್ ಇದೀಗ ಭಾರಿ ವೈರಲ್ ಆಗುತ್ತಿದೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆಲುವು ಯಾವುದೇ ಕ್ರಿಕೆಟಿಗನಿಗೆ ದೊಡ್ಡ ಸಂಗತಿ: ಇಶಾಂತ್ ಶರ್ಮ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆಲುವು ಯಾವುದೇ ಕ್ರಿಕೆಟಿಗನಿಗೆ ದೊಡ್ಡ ಸಂಗತಿ ಎಂದು ಭಾರತ ಕ್ರಿಕೆಟ್ ತಂಡದ ವೇಗಿ ಇಶಾಂತ್ ಶರ್ಮ ಹೇಳಿದ್ದಾರೆ.

ಮೊದಲ ನೋಟದಲ್ಲೇ ಪ್ರೇಮಾಂಕುರವಾದ ಬಗ್ಗೆ ಇಶಾಂತ್ ಮಾತು
2011ರಲ್ಲಿ ದೆಹಲಿಯಲ್ಲಿ ಬ್ಯಾಸ್ಕೆಟ್‌ಬಾಲ್ ಟೂರ್ನಿಗೆ ಅತಿಥಿಯಾಗಿ ಹೋಗಿದ್ದ ಇಶಾಂತ್ ಶರ್ಮಾ, ಮೊಟ್ಟ ಮೊದಲ ಬಾರಿ ಪ್ರತಿಮಾ ಅವರನ್ನು ನೋಡಿ ಇಷ್ಟಪಟ್ಟಿದ್ದರು. ಆ ಕ್ಷಣದಲ್ಲಿಯೇ ಅವರು ಮದುವೆಯಾಗಲು ನಿರ್ಧರಿಸಿದ್ದರು.

2ನೇ ಟೆಸ್ಟ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಮರ್ಮಾಘಾತ: ಇಶಾಂತ್ ಶರ್ಮಾ ಪಂದ್ಯದಿಂದ ಔಟ್
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ಪಡೆದು ಟೀಂ ಇಂಡಿಯಾದ ಟ್ರಂಪ್ ಕಾರ್ಡ್ ಆಗಿದ್ದ ಇಶಾಂತ್ ಶರ್ಮಾ ಗಾಯಗೊಂಡಿದ್ದಾರೆ.

ಮತ್ತೊಂದು ದಾಖಲೆಯ ಸನಿಹದಲ್ಲಿ ಇಶಾಂತ್ ಶರ್ಮಾ
ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡು ಮುಖಭಂಗ ಅನುಭವಿಸಿದೆ. ಈ ಪಂದ್ಯದಲ್ಲಿ ಸ್ಟಾರ್ ಬೌಲರ್ ಇಶಾಂತ್ ಶರ್ಮಾ ಬಿಗುವಿನ ದಾಳಿ ನಡೆಸಿ ಗಮನ ಸೆಳೆದಿದ್ದರು. ಶನಿವಾರದಿಂದ ಆರಂಭವಾಗುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಮತ್ತೊಂದು ಮೈಲುಗಲ್ಲು ತಲುಪುವ ಕನಸಿನಲ್ಲಿದ್ದಾರೆ.

ಸಂಕಷ್ಟದಲ್ಲಿ ಟೀಂ ಇಂಡಿಯಾ: ಇಶಾಂತ್ ಶರ್ಮಾರನ್ನು ಕೊಂಡಾಡಿದ ಜೇಸನ್ ಗಿಲೆಸ್ಪಿ
ಭಾರತ ತಂಡದ ಹಿರಿಯ ವೇಗಿ ಇಶಾಂತ್ ಶರ್ಮಾ ಅವರ ವರ್ತನೆಯನ್ನು ಆಸ್ಟ್ರೇಲಿಯಾ ಮಾಜಿ ವೇಗಿ ಜೇಸನ್ ಗಿಲೆಸ್ಪಿ ಶ್ಲಾಘಿಸಿದ್ದು ಕಲಿಯಲು, ಸುಧಾರಿಸಲು ಮತ್ತು ಉತ್ತಮಗೊಳ್ಳಬೇಕೆಂಬ ಬಯಕೆ ಅವರನ್ನು ಉತ್ತಮ ಸ್ಥಾನದಲ್ಲಿರಿಸಿದೆ ಎಂದು ಹೇಳಿದ್ದಾರೆ.

ಇಶಾಂತ್ ಶರ್ಮಾ ಫಿಟ್ ನೆಸ್ ಪರೀಕ್ಷೆ ಪಾಸ್: ಕಿವೀಸ್ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾಗೆ ಆನೆಬಲ!
ಟೀಂ ಇಂಡಿಯಾದ ಭರವಸೆಯ ವೇಗದ ಬೌಲರ್ ಇಶಾಂತ್ ಶರ್ಮಾ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ನ್ಯೂಜಿಲೆಂಡ್ ನಲ್ಲಿ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾಗವಹಿಸಲಿದ್ದಾರೆ.

