ISIS

ಮಂಗಳೂರು ಸ್ಫೋಟ ಪ್ರಕರಣ: ಅಲ್-ಖೈದಾ ಉಗ್ರ ಸಂಘಟನೆಯ ವಿಡಿಯೋಗಳನ್ನು ಇತರೆ ಆರೋಪಿಗಳೊಂದಿಗೆ ಶೇರ್ ಮಾಡುತ್ತಿದ್ದ ಶಾರೀಕ್!
ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಅಲ್ ಖೈದಾದಿಂದ ಪ್ರೇರಿತನಾಗಿದ್ದ ಎನ್ನಲಾಗಿದ್ದು, ಈತ ಪ್ರಕರಣದ ಇತರ ಇಬ್ಬರು ಆರೋಪಿಗಳಾದ ಮಾಜ್ ಮುನೀರ್ ಅಹಮದ್ ಮತ್ತು ಸಯ್ಯದ್ ಯಾಸಿನ್ ಜೊತೆ ಉಗ್ರ ಸಂಘಟನೆಗಳ ವಿಡಿಯೋಗಳನ್ನು ಸೇವ್ ಮಾಡಿ ಶೇರ್ ಮಾಡಿದ್ದ ಎಂದು ಮೂಲಗಳು ತಿಳಿಸಿವೆ.

ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಾರೀಕ್ ಇಸಿಸ್ ನಿಂದ ತರಬೇತಿ ಪಡೆದಿದ್ದ: ಶೋಭಾ ಕರಂದ್ಲಾಜೆ
ಇತ್ತೀಚೆಗೆ ನಡೆದ ಮಂಗಳೂರು ಸ್ಫೋಟದ ಪ್ರಮುಖ ಶಂಕಿತ ಮೊಹಮ್ಮದ್ ಶಾರಿಕ್ ಇಸ್ಲಾಮಿಕ್ ಸ್ಟೇಟ್ ಆಫ್ ಇರಾನ್ ಆ್ಯಂಡ್ ಇರಾಕ್ ಉಗ್ರ ಸಂಘಟನೆಯಿಂದ ತರಬೇತಿ ಪಡೆದಿದ್ದ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಐಸಿಸ್ ಜೊತೆ ನಂಟು: ಬಂಧಿತ ಆರೋಪಿಗಳ ಪೊಲೀಸ್ ಕಸ್ಟಡಿ ಸೆ.30ರವರೆಗೆ ವಿಸ್ತರಣೆ
ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿರುವ ಆರೋಪದಡಿ ಬಂಧಿತರಾಗಿರುವ ಶಂಕಿತ ಉಗ್ರರ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸಲಾಗಿದೆ.

ಐಸಿಸ್ ಜೊತೆ ನಂಟು: ಗಂಗಾವತಿ ಹಣ್ಣಿನ ವ್ಯಾಪಾರಿ ಶಿವಮೊಗ್ಗ ಪೊಲೀಸರ ವಶಕ್ಕೆ!
ನಿಷೇಧಿತ ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ ಆರೋಪದ ಮೇರೆಗೆ ಗಂಗಾವತಿಯಲ್ಲಿ ವ್ಯಕ್ತಿಯೋರ್ವನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೇಶಭಕ್ತ ಮುಸಲ್ಮಾನರು ತಮ್ಮ ಮಕ್ಕಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು: ಕೆಎಸ್ ಈಶ್ವರಪ್ಪ
ದೇಶಭಕ್ತ ಮುಸಲ್ಮಾನರು ತಮ್ಮ ಮಕ್ಕಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಲ್ಲದಿದ್ದಲ್ಲಿ ಅವರು ಕೊಲೆ ಮಾಡಲು ಹೋಗಿ ಅಥವಾ ಭಯೋತ್ಪಾದಕ ಸಂಘಟನೆ ಜೊತೆ ಸೇರಿ ಜೈಲು ಸೇರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗ: ಭಾರತದಲ್ಲಿ ಐಸಿಸ್ ಚಟುವಟಿಕೆ ಹೆಚ್ಚಿಸಲು ಸಂಚು; ಬಂಧಿತರಿಂದ 'ಸ್ಫೋಟಕ' ಮಾಹಿತಿ
ಇಬ್ಬರು ಶಂಕಿತ ಉಗ್ರರು ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ಭಾರತದಲ್ಲಿ ಅಸ್ತಿತ್ವಕ್ಕಾಗಿ ಹರಸಾಹಸಪಡುತ್ತಿರುವ ಐಸಿಸ್ ಚಟುವಟಿಕೆಗಳ ಹೆಚ್ಚಿಸಲು ಬಂಧಿತರು ಸಂಚು ರೂಪಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ; ಧರ್ಮಗುರು ಸೇರಿ ಕನಿಷ್ಠ 21 ಸಾವು
ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಬುಧವಾರ ಸಂಜೆ ಪ್ರಾರ್ಥನೆಯ ವೇಳೆ ನಡೆದ ಬಾಂಬ್ ದಾಳಿಯಲ್ಲಿ ಪ್ರಮುಖ ಧರ್ಮಗುರು ಸೇರಿದಂತೆ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ದೆಹಲಿ: ಇಸ್ಲಾಮಿಕ್ ಸ್ಟೇಟ್‌ನ ಸಕ್ರಿಯ ಸದಸ್ಯನನ್ನು ಬಂಧಿಸಿದ ಎನ್‌ಐಎ
ಭಯೋತ್ಪಾದಕ ಸಂಘಟನೆಗೆ ನಿಧಿ ಸಂಗ್ರಹಿಸುವಲ್ಲಿ ಭಾಗಿಯಾಗಿದ್ದಕ್ಕಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶನಿವಾರ ಇಸ್ಲಾಮಿಕ್ ಸ್ಟೇಟ್ (ಐಎಸ್‌ಐಎಸ್)ನ ತೀವ್ರಗಾಮಿ ಮತ್ತು ಸಕ್ರಿಯ ಸದಸ್ಯನನ್ನು ದೆಹಲಿಯ ಅವರ ನಿವಾಸದಿಂದ ಬಂಧಿಸಲಾಗಿದೆ ಎಂದು ಎನ್‌ಐಎ ತಿಳಿಸಿದೆ.

ಐಎಸ್ಐಎಸ್ ನೊಂದಿಗೆ ಆನ್ ಲೈನ್ ಸಂಪರ್ಕ: ತಮಿಳುನಾಡು ವಿದ್ಯಾರ್ಥಿ ಬಂಧನ
ಗುಪ್ತಚರ ಇಲಾಖೆಯ ಹಲವು ಗಂಟೆಗಳ ವಿಚಾರಣೆಯ ಬಳಿಕ, ಐಎಸ್ಐಎಸ್ ನೊಂದಿಗೆ ಆನ್ ಲೈನ್ ಸಂಪರ್ಕ ಹೊಂದಿದ್ದ ಆರೋಪದಡಿ ತಮಿಳುನಾಡು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.

