israel

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹಮಾಸ್ ವಾಯುಪಡೆ ಮುಖ್ಯಸ್ಥ ಮುರಾದ್ ಅಬು ಹತ್ಯೆ!
ಇಸ್ರೇಲ್ ಹಾಗೂ ಪ್ಯಾಲೆಸ್ಟೀನ್ ನಡುವೆ ಸಂಘರ್ಷ ತೀವ್ರಗೊಂಡಿದ್ದು, ರಾತ್ರಿಯಿಡೀ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್ ಸಂಘಟನೆಯ ವಾಯುಪಡೆಯ ಮುಖ್ಯಸ್ಥ ಅಬು ಮುರಾದ್ ಹತ್ಯೆಯಾಗಿರುವುದಾಗಿ ತಿಳಿದುಬಂದಿದೆ.

ಯುದ್ಧಪೀಡಿತ ಇಸ್ರೇಲ್ ನಿಂದ ತವರಿಗೆ ಮರಳಿದ 6 ಮಂದಿ ಕನ್ನಡಿಗರು
ಯುದ್ಧಪೀಡಿತ ಇಸ್ರೇಲ್ನಲ್ಲಿ ಸಿಲುಕಿದ್ದ ರಾಜ್ಯದ 6 ಮಂದಿ ಕನ್ನಡಿಗರು ಕೊನೆಗೂ ಸುರಕ್ಷಿತವಾಗಿ ತವರಿಗೆ ಮರಳಿದ್ದಾರೆ.

ಹಮಾಸ್ ಬಂಡುಕೋರರ ದಾಳಿ: ಒತ್ತೆಯಾಳು ಬಿಡುಗಡೆಯಾಗುವವರೆಗೂ ಗಾಜಾಕ್ಕೆ ನೀರು, ವಿದ್ಯುತ್ ಇಲ್ಲ: ಇಸ್ರೇಲ್
ಪ್ಯಾಲೆಸ್ತೈನ್ ನ ಬಂಡುಕೋರರು ಒತ್ತೆಯಾಳು ಬಿಡುಗಡೆ ಮಾಡುವವರೆಗೂ ಗಾಜಾಕ್ಕೆ ನೀರು, ವಿದ್ಯುತ್ ಸೇರಿದಂತೆ ಮತ್ತಿತರ ಅಗತ್ಯ ಮೂಲಸೌಕರ್ಯ ಒದಗಿಸುವುದಿಲ್ಲ ಎಂದು ಇಸ್ರೇಲ್ ಹೇಳಿದೆ.

24 ಗಂಟೆಗಳಲ್ಲಿ ದಕ್ಷಿಣ ಗಾಜಾಕ್ಕೆ ಸ್ಥಳಾಂತರಗೊಳ್ಳಿ: ಇಸ್ರೇಲ್ ಆದೇಶ ತಿರಸ್ಕರಿಸಿದ ಹಮಾಸ್
ಗಾಜಾಪಟ್ಟಿಯಲ್ಲಿ ಬೀಡು ಬಿಟ್ಟಿರುವ ಹಮಾಸ್ ಉಗ್ರರನ್ನು ನಿರ್ನಾಮ ಮಾಡದೆ ಬಿಡುವುದಿಲ್ಲ ಎಂದು ಪಣತೊಟ್ಟಿರುವ ಇಸ್ರೇಲ್ ಉತ್ತರ ಗಾಜಾದಲ್ಲಿರುವ ಪ್ಯಾಲೆಸ್ಟೀನಿಯನ್ ಜನರನ್ನು 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಗಾಜಾಕ್ಕೆ ಸ್ಥಳಾಂತರಗೊಳ್ಳುವಂತೆ ಆದೇಶಿಸಿದ್ದು, ಈ ಆದೇಶವನ್ನು ಹಮಾಸ್ ತಿರಸ್ಕರಿಸಿದೆ.

ಉದ್ಯೋಗ ಅರಸಿ ಭಾರತೀಯರು ಇಸ್ರೇಲ್'ಗೆ ಪ್ರಯಾಣಿಸುವುದೇಕೆ? ಅಲ್ಲಿ ಸಿಗುವ ಸವಲತ್ತುಗಳಾದರೂ ಏನು?
ಹಮಾಸ್ ಉಗ್ರಗಾಮಿಗಳ ದಾಳಿಯಿಂದ ಇತ್ತೀಚೆಗೆ ಗಾಜಾಪಟ್ಟಿಯಲ್ಲಿ ನಡೆದ ಸಂಘರ್ಷ ಅಂತಾರಾಷ್ಟ್ರೀಯ ಗಮನ ಸೆಳೆದಿದೆ. ಬೆದರಿಕೆಗೆ ಪ್ರತಿಕ್ರಿಯೆಯಾಗಿ, ಇಸ್ರೇಲ್ ಪ್ರತಿದಾಳಿ ನಡೆಸುತ್ತಿದೆ. ಈ ಬೆಳವಣಿಗೆ ವಿಶ್ವಾದ್ಯಂತ ಕಳವಳವನ್ನು ಉಂಟುಮಾಡಿದೆ.

ಹಮಾಸ್ ಉಗ್ರರಿಗೆ ಚಿಕಿತ್ಸೆ ನೀಡದಂತೆ ಆಸ್ಪತ್ರೆಗಳಿಗೆ ಇಸ್ರೇಲ್ ಆದೇಶ
ಹಮಾಸ್ ಉಗ್ರರಿಗೆ ಚಿಕಿತ್ಸೆ ನೀಡುವುದನ್ನು ನಿಲ್ಲಿಸುವಂತೆ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಿಗೆ ಇಸ್ರೇಲ್ ನಿರ್ಗಮಿತ ಆರೋಗ್ಯ ಸಚಿವ ಮೋಶೆ ಅರ್ಬೆಲ್ ಅವರು ಸೂಚನೆ ನೀಡಿದ್ದಾರೆ.

ಆಪರೇಷನ್ ಅಜಯ್: ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್ನಿಂದ ಟೇಕಾಫ್
ಯುದ್ಧ ಪೀಡಿತ ಇಸ್ರೇಲ್ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್ ಆರಂಭಿಸಿದ್ದು, ಮೊದಲ ಚಾರ್ಟರ್ ಫ್ಲೈಟ್ ಗುರುವಾರ ರಾತ್ರಿ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಹೊರಡಲಿದೆ ಎಂದು ಮೂಲಗಳು ತಿಳಿಸಿವೆ.

ಭಾರತಕ್ಕೂ ತಟ್ಟಲಿದೆ ಇಸ್ರೇಲ್-ಹಮಾಸ್ ಯುದ್ಧದ ಬಿಸಿ: ಏರಲಿದೆಯೇ ಚಿನ್ನದ ದರ?
ಹಬ್ಬ- ಹರಿದಿನ ಬಂದರೆ ಭಾರತದಲ್ಲಿ ಚಿನ್ನದ ಖರೀದಿ ಸಾಮಾನ್ಯವಾಗಿಯೇ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಚಿನ್ನವನ್ನು ಆಭರಣ ರೂಪದಲ್ಲಿ ಖರೀದಿಸುತ್ತಾರೆ. ಇನ್ನೂ ಕೆಲವರು ಹೂಡಿಕೆಗೆ ಚಿನ್ನ ಉತ್ತಮ ಆಯ್ಕೆ ಎಂದೂ ಪರಿಗಣಿಸುತ್ತಾರೆ.

ಯುದ್ಧ ಪೀಡಿತ ಇಸ್ರೇಲ್ನಿಂದ ಭಾರತೀಯರನ್ನು ಕರೆತರಲು 'ಆಪರೇಷನ್ ಅಜಯ್' ಘೋಷಣೆ
ಯುದ್ಧ ಪೀಡಿತ ಇಸ್ರೇಲ್ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರಲು ಆಪರೇಷನ್ ಅಜಯ್ ಪ್ರಾರಂಭಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಬುಧವಾರ ಹೇಳಿದ್ದಾರೆ.

