ವಿದೇಶಗಾಜಾ ಮೇಲೆ ಭಾರೀ ವಾಯುದಾಳಿ: ಇಂಟರ್ ನೆಟ್, ಮೊಬೈಲ್ ಸೇವೆ ಸ್ಥಗಿತ; ಪತ್ರಕರ್ತರ ಸುರಕ್ಷತೆ ಖಾತರಿಪಡಿಸಲು ಸಾಧ್ಯವಿಲ್ಲ ಎಂದ ಇಸ್ರೇಲ್
ಹಮಾಸ್ ಉಗ್ರರ ಜಾಲವನ್ನು ಧ್ವಂಸಗೊಳಿಸುವ ಉದ್ದೇಶದಿಂದ ಗಾಜಾದಲ್ಲಿ ಇಸ್ರೇಲ್ ಸೇನೆ ವೈಮಾನಿಕ ದಾಳಿಯನ್ನು ಮುಂದುವರೆಸಿದ್ದು, ಇದರ ನಡುವಲ್ಲೇ ದಾಳಿ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆ ಖಾತರಿಪಡಿಸಲು ಸಾಧ್ಯವಿಲ್ಲ ಎಂದು ಇಸ್ರೇಲ್ ಸೇನಾಪಡೆ ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳಾದ ರಾಯಿಟರ್ಸ್ ಮತ್ತು ಏಜೆನ್ಸ್ ಫ್ರಾನ್ಸ್ ಪ್ರೆಸ್ಗೆ ತಿಳಿಸಿದೆ.