IT

ಕೇಂದ್ರ ತನಿಖಾ ಸಂಸ್ಥೆಗಳ ಕಿರುಕುಳದಿಂದ 12 ಲಕ್ಷ ಉದ್ಯಮಿಗಳು ಭಾರತ ತೊರೆದಿದ್ದಾರೆ: ಸಿಎಂ ಡಿ.ಕೆ ಶಿವಕುಮಾರ್
ಐಟಿ, ಇಡಿ ಮತ್ತು ಸಿಬಿಐ ಅವರ ಪಾಲಿಗೆ ಅತಿಯಾಗಿವೆ. ಹೀಗಾಗಿ ಅವರು ದೇಶವನ್ನೇ ತೊರೆಯುತ್ತಿದ್ದಾರೆಯ ಅಗತ್ಯವಿಲ್ಲದ ಕಿರುಕುಳವಿಲ್ಲದೆ ಸುಗಮವಾಗಿ ಕಾರ್ಯನಿರ್ವಹಿಸಲು ಉದ್ಯಮಗಳಿಗೆ ಅನುಕೂಲಕರ ವಾತಾವರಣವನ್ನು ಸರ್ಕಾರ ನಿರ್ಮಿಸಬೇಕು.

ಐಟಿ ತಂತ್ರಜ್ಞಾನ ಬಳಸಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಿಸಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸಬೇಕಾಗಿದೆ. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸಲು ಆದ್ಯತೆ ನೀಡಬೇಕು.

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: SITಯಿಂದ IT ಅಧಿಕಾರಿಗಳ ವಿಚಾರಣೆ ಸಾಧ್ಯತೆ..!
ಎಸ್‌ಐಟಿಗೆ ಐಟಿ ಅಧಿಕಾರಿಗಳನ್ನು ಪ್ರಶ್ನಿಸಿ ಅವರ ಹೇಳಿಕೆಗಳನ್ನು ದಾಖಲಿಸುವ ಅಧಿಕಾರ ಮಾತ್ರ ಇದೆ. ಆದರೆ, ತೆರಿಗೆ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವುದು ಐಟಿ ಅಧಿಕಾರಿಗಳ ಸ್ವೈಚ್ಛೆಗೆ ಒಳಪಟ್ಟಿದೆ.

ಮಹಿಳಾ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ: ಐಟಿ ಕಂಪನಿ ಸಿಇಒ ಸೇರಿ 3 ಜನರ ಬಂಧನ
ಮೂವರು ಆರೋಪಿಗಳನ್ನು ಗುರುವಾರ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು, ನ್ಯಾಯಾಲಯವು ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

ಐಟಿ, ಬಿಟಿ ರಫ್ತಿನಲ್ಲಿ ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಬೆಂಗಳೂರು ಸಮರ್ಥ: ಸಿಎಂ ಸಿದ್ದರಾಮಯ್ಯ
ಐಟಿ ಮತ್ತು ಬಿಟಿ ರಫ್ತಿನಲ್ಲಿ ಬೆಂಗಳೂರು ಮುಂಚೂಣಿಯಲ್ಲಿದ್ದು, ವಿಶ್ವದಲ್ಲಿಯೇ ನಂಬರ್ ಒನ್ ಆಗುವ ಎಲ್ಲಾ ಸಾಮರ್ಥ್ಯವನ್ನು ಹೊಂದಿದೆ. ಇದನ್ನು ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಒಟ್ಟಾರೆ ಬೆಂಗಳೂರು ಮತ್ತು ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನದಲ್ಲಿ ದೇಶವನ್ನು ಮುನ್ನಡೆಸುವ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಟೆಕ್ಕಿಗಳ 'ವರ್ಕ್ ಫ್ರಮ್ ಹೋಮ್' ಆಯ್ಕೆಯಿಂದ ಬಿಎಂಟಿಸಿ-ಕೆಎಸ್'ಆರ್'ಟಿಸಿ ಇಕ್ಕಟ್ಟಿಗೆ!
ಬಹುರಾಷ್ಟ್ರೀಯ ಕಂಪನಿ ಉದ್ಯೋಗಿಗಳ ವರ್ಕ್ ಫ್ರಮ್ ಹೋಮ್ ಆಯ್ಕೆಯು ಸರ್ಕಾರಿ ಸಾರಿಗೆ ಸಂಸ್ಥೆಗಳಾಗಿರುವ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಡಿಕೆ ಶಿವಕುಮಾರ್ ಗೆ ಸಂಕಷ್ಟ: ಡಿಕೆಶಿ ವಿರುದ್ಧದ ಪ್ರಕರಣ ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆಯಾಜ್ಞೆ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಡಿಸೆಂಬರ್ 31 ಕೊನೆಯ ದಿನ: ಇದುವರೆಗೂ 4.51 ಕೋಟಿಗೂ ಅಧಿಕ ಅರ್ಜಿ ನೋಂದಣಿ
2019-20 ಆರ್ಥಿಕ ವರ್ಷದಲ್ಲಿ 5.95 ಕೋಟಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಾಗಿತ್ತು.

ವಿಧಾನಪರಿಷತ್ ಮಾಜಿ ಸದಸ್ಯ ಗೋವಿಂದರಾಜು ಡೈರಿ ಪ್ರಕರಣ: ಐಟಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ವಜಾ
ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿದ್ದನ್ನು ಆದಾಯ ತೆರಿಗೆ ಇಲಾಖೆಯ ತನಿಖಾ ವಿಭಾಗದ ಮಹಾ ನಿರ್ದೇಶಕರು, ನಿರ್ದೇಶಕರು ಹಾಗೂ ಕೇಂದ್ರ ಆಯುಕ್ತರು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಪ್ರಶ್ನಿಸಿದ್ದರು.

