IT raid

ಟಿಎಂಸಿ ಶಾಸಕ ಜಾಕೀರ್ ಹುಸೇನ್ ಮನೆ ಮೇಲೆ ಐಟಿ ದಾಳಿ: 11 ಕೋಟಿ ರೂ. ವಶ!
ತೃಣಮೂಲ ಕಾಂಗ್ರೆಸ್(ಟಿಎಂಸಿ) ಶಾಸಕ ಹಾಗೂ ಜಂಗಿಪುರದ ಮಾಜಿ ಸಚಿವ ಜಾಕೀರ್ ಹುಸೇನ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ಬರೋಬ್ಬರಿ 11 ಕೋಟಿ ರುಪಾಯಿಯನ್ನು ವಶಪಡಿಸಿಕೊಂಡಿದೆ.

ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಐಟಿ ಶೋಧ: ಮದುವೆ ದಿಬ್ಬಣದ ಸೋಗಿನಲ್ಲಿ ಬಂದಿದ್ದ ಅಧಿಕಾರಿಗಳು!
ಕಾಂಗ್ರೆಸ್ ನಾಯಕಿ, ಮಾಜಿ ಎಂಎಲ್ ಸಿ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಜಾರ್ಖಂಡ್‌ನ ಕಾಂಗ್ರೆಸ್ ಶಾಸಕರ ಮನೆ ಮೇಲೆ ಐಟಿ ದಾಳಿ, 100 ಕೋಟಿ ರೂ. ಲೆಕ್ಕ ರಹಿತ ವಹಿವಾಟು ಪತ್ತೆ
ಕಳೆದ ವಾರ ರಾಜ್ಯಾದ್ಯಂತ ಇಬ್ಬರು ಜಾರ್ಖಂಡ್ ಕಾಂಗ್ರೆಸ್ ಶಾಸಕರು, ಅವರ ಸಹಚರರಿಗೆ ಸಂಬಂಧಿಸಿದ ಕಲ್ಲಿದ್ದಲು ಮತ್ತು ಕಬ್ಬಿಣದ ಅದಿರು ವ್ಯವಹಾರಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 100 ಕೋಟಿಗೂ ಹೆಚ್ಚು ಮೌಲ್ಯದ ಲೆಕ್ಕ ರಹಿತವಾದ ವಹಿವಾಟು ಮತ್ತು ಹೂಡಿಕೆಗಳನ್ನು ಪತ್ತೆಹಚ್ಚಿದ್ದಾರೆ.

ಬೃಹತ್ ಐಟಿ ದಾಳಿ; 56 ಕೋಟಿ ರೂ. ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ರೂ. ಮೌಲ್ಯದ ವಜ್ರ ಸೇರಿ 390 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
ಮಹಾರಾಷ್ಟ್ರದಲ್ಲಿ ಬೃಹತ್ ಐಟಿ ದಾಳಿಯಾಗಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಳ್ಳಂಬೆಳಗ್ಗೆ ಐಟಿ ಶಾಕ್: ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ 22 ಕಡೆ ದಾಳಿ, ಪರಿಶೀಲನೆ
ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ತೆರಿಗೆ ವಂಚನೆ ಆರೋಪ: ತಮಿಳು ಚಲನಚಿತ್ರ ನಿರ್ಮಾಪಕರು, ವಿತರಕರ ಮನೆ ಮೇಲೆ ಐಟಿ ದಾಳಿ
ತೆರಿಗೆ ವಂಚನೆ ಆರೋಪದ ಮೇಳೆ ಶಂಕಿತ 10 ತಮಿಳು ಚಲನಚಿತ್ರ ನಿರ್ಮಾಪಕರು ಮತ್ತು ವಿತರಕರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ: 'ಡೋಲೋ 650' ಗೆ ಚಳಿ ಜ್ವರ!
ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಹಲವು ಶಿಕ್ಷಣ ಸಂಸ್ಥೆಗಳಿಗೆ ಐಟಿ ಶಾಕ್, ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳಿಂದ ದಾಳಿ, ತಪಾಸಣೆ
ರಾಜಕೀಯ ಮುಖಂಡರು, ಅಧಿಕಾರಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುವುದು ಸಾಮಾನ್ಯ. ಇಂದು ಗುರುವಾರ ಬೆಳ್ಳಂಬೆಳಗ್ಗೆ ಐಟಿ ಇಲಾಖೆ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ.

ಸರಳ, ಮಿತಭಾಷಿ, ಸ್ಕೂಟರ್ ಓಡಿಸುತ್ತಿದ್ದವನ ಆಸ್ತಿ ಸಾವಿರ ಕೋಟಿ ರೂ.: ನೆರೆಹೊರೆಯವರು ಕಕ್ಕಾಬಿಕ್ಕಿ
ಅಕ್ಕಪಕ್ಕದವರ ಜೊತೆ ಸ್ನೇಹದಿಂದ ಮೌನಿಯಾಗಿ ಯಾರೊಂದಿಗೂ ದ್ವೇಷಿವಿಲ್ಲದೇ ಮಿತಭಾಷಿಯಾಗಿದ್ದವನು ಶತಕೋಟಿ ಸಂಪತ್ತಿನ ಒಡೆಯನಾಗಿದ್ದ. ಈತ ಸುಗಂಧ ದ್ರವ್ಯಗಳ ಉದ್ಯಮಿ 'ಪಿಯೂಷ್ ಜೈನ್'. ಇತ್ತೀಚಿಗಷ್ಟೆ ಆತನ ಮನೆ ಮೇಲೆ ಐಟಿ ದಾಳಿ ನಡೆದಿತ್ತು.

