ರಾಜ್ಯರಾಜ್ಯದಲ್ಲಿ ಆಪಲ್ ಫೋನ್ ತಯಾರಿಕಾ ಘಟಕ ಸ್ಥಾಪನೆಗೆ ಸ್ಥಳ ವೀಕ್ಷಣೆ; ಫಾಕ್ಸ್ ಕಾನ್ ನಿಯೋಗದೊಂದಿಗೆ ಅಶ್ವತ್ಥ ನಾರಾಯಣ ಮಾತುಕತೆ
ಫಾಕ್ಸ್ಕಾನ್ ಸಮೂಹದ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ನೇತೃತ್ವದ ಉನ್ನತ ಮಟ್ಟದ ನಿಯೋಗವು ರಾಜ್ಯದಲ್ಲಿ ಆಪಲ್ ಫೋನ್ ತಯಾರಿಕಾ ಘಟಕ ಸ್ಥಾಪಿಸುವ ಸಂಬಂಧ ಸ್ಥಳ ವೀಕ್ಷಣೆಗೆ ಆಗಮಿಸಿದ್ದು, ಐಟಿ-ಬಿಟಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಶುಕ್ರವಾರ ಮೊದಲ ಸುತ್ತಿನ ಚರ್ಚೆ ನಡೆಸಿತು.