Jagadish Shettar

ಬಿಜೆಪಿಯ 'ಟೆಂಗಿನಕಾಯಿ' ನನ್ನ ಶಿಷ್ಯ ಅಲ್ಲ, ಅವರ ಗುರು ದೆಹಲಿಯಲ್ಲಿದ್ದಾರೆ: ಶೆಟ್ಟರ್ ಟಾಂಗ್
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ವಿರುದ್ಧ ಕಣಕ್ಕಿಳಿದಿದ್ದಾರೆ, ಇದನ್ನು 'ಗುರು-ಶಿಷ್ಯ' ಸ್ಪರ್ಧೆ ಎಂದು ಪರಿಗಣಿಸಲಾಗಿದೆ.

ತಾವೇ ಕಟ್ಟಿದ ಬಿಜೆಪಿ ಕೋಟೆ ಕೆಡವುವ ಉಮೇದಿನಲ್ಲಿ ಶೆಟ್ಟರ್: ವ್ಯಕ್ತಿಯೋ, ಪಕ್ಷವೋ? ಜಿಜ್ಞಾಸೆಯಲ್ಲಿ ಕ್ಷೇತ್ರದ ಮತದಾರ!
ಹುಬ್ಬಳ್ಳಿ ಧಾರವಾಡ ಸೆಂಟ್ರಲ್(ಕೇಂದ್ರ) ವಿಧಾನಸಭಾ ಕ್ಷೇತ್ರ ರಾಜ್ಯ ರಾಜಕಾರಣದ ದೃಷ್ಟಿಯಿಂದ ಮಹತ್ವದ್ದು. ಈ ಕ್ಷೇತ್ರದಿಂದ ಗೆದ್ದವರು ಇಬ್ಬರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದಾರೆ. ಆದರೆ ಇಬ್ಬರು ಸಿಎಂಗಳದ್ದು ಅಲ್ಫಾವಧಿಯಾಗಿತ್ತು ಎನ್ನುವುದು ವಿಶೇಷ.

ಜಗದೀಶ್ ಶೆಟ್ಟರ್ 100ಕ್ಕೆ 100 ಗೆಲ್ತಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ರಕ್ತದಲ್ಲೇ ಪತ್ರ ಬರೆದ ಅಭಿಮಾನಿ!
ಈ ಬಾರಿ ವಿಧಾನಸಭೆ ಚುನಾವಣಾ ಕಣದಲ್ಲಿ ರಕ್ತ ರಾಜಕೀಯ ಭಾರೀ ಸದ್ದು ಮಾಡುತ್ತಿದ್ದು, ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಕ್ತದಲ್ಲಿ ಬರೆದುಕೊಡುವುದಾಗಿ

ಶೆಟ್ಟರ್ ಸೋಲಿಸುವ ಜವಬ್ದಾರಿ ನನ್ನದು, ಲಕ್ಷ್ಮಣ ಸವದಿ ಸೋಲಿಸುವ ಜವಾಬ್ದಾರಿ ನಿಮ್ಮದು: ಬಿ ಎಸ್ ಯಡಿಯೂರಪ್ಪ
ಬಿಜೆಪಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೆ ಬಂಡಾಯವೆದ್ದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಮೇಲೆ ಬಿಜೆಪಿ ನಾಯಕರು ಜಿದ್ದಿಗೆ ಬಿದ್ದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಜಗದೀಶ್ ಶೆಟ್ಟರ್ ಮತ್ತು ಬಿಜೆಪಿ ನಾಯಕರ ಮಧ್ಯೆ ದಿನಕ್ಕೊಂದು ಸೇಡಿನ ಮಾತುಗಳು ಹೊರಬರುತ್ತಲೇ ಇವೆ.

ಸಿಡಿ ಭಯದಿಂದ ಸ್ಟೇ ತಂದೋರಿಗೆ, 80 ಪ್ರಕರಣದಲ್ಲಿ ಭಾಗಿಯಾದವರಿಗೆ ಟಿಕೆಟ್ ಕೊಟ್ರು; ನನಗೆ 'ಕೈ' ಕೊಟ್ರು: ಶೆಟ್ಟರ್ ವಾಗ್ದಾಳಿ
ನಿನ್ನೆ ಮೊನ್ನೆ ಪಕ್ಷಕ್ಕೆ ಬಂದೋರಿಗೆ, ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಟ್ಟಿದ್ದೀರಿ. ನನಗೆ ಮಾತ್ರ ಟಿಕೆಟ್ ಸಿಗಲಿಲ್ಲ. ನನಗೆ ಟಿಕೆಟ್ ಕೈ ತಪ್ಪಿದಾಗ ಯಾರೊಬ್ಬರೂ ನನ್ನನ್ನು ಮಾತನಾಡಿಸಲಿಲ್ಲ. ಗೌರವದಿಂದ ನಡೆಸಿಕೊಳ್ಳಲಿಲ್ಲ ಎಂದಷ್ಟೇ ನಾನು ಬಿಜೆಪಿ ಬಿಟ್ಟು ಹೊರಬಂದೆ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು.

ರಕ್ತದಲ್ಲಿ ಬರೆದುಕೊಡ್ತೇನೆ ಯಾವುದೇ ಕಾರಣಕ್ಕೂ ಪಕ್ಷ ದ್ರೋಹಿ ಶೆಟ್ಟರ್ ಚುನಾವಣೆಯಲ್ಲಿ ಗೆಲ್ಲಲ್ಲ: ಬಿಎಸ್.ಯಡಿಯೂರಪ್ಪ
ನನ್ನ ರಕ್ತದಲ್ಲಿ ಬರೆದುಕೊಡುತ್ತೇನೆ. ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಹೇಳಿದರು.

ನಾನು ರಾಜ್ಯಸಭೆಗೆ ಹೋಗಲ್ಲ, ಕಾಂಗ್ರೆಸ್ ಸಿದ್ಧಾಂತಕ್ಕೆ ಹೊಂದಿಕೊಳ್ಳುತ್ತೇನೆ, ಆದರೆ...: ಜಗದೀಶ್ ಶೆಟ್ಟರ್ (ಸಂದರ್ಶನ)
ಆರ್ ಎಸ್ ಎಸ್ ಜೊತೆಗಿನ ಪ್ರಬಲ ಒಡನಾಟದ ಹೊರತಾಗಿಯೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಪ್ರಿಲ್ 16 ರಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಸುದೀರ್ಘ ಮೂರು ದಶಕಗಳ ಕಾಲ ಪಕ್ಷದ ಜೊತೆಗಿದ್ದ ಬಾಂಧವ್ಯವನ್ನು ಕಳಚಿಕೊಂಡಿದ್ದಾರೆ.

ಬಿಜೆಪಿ ಸ್ಪಷ್ಟ ಬಹುಮತ ಪಡೆಯುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿಎಸ್ ಯಡಿಯೂರಪ್ಪ (ಸಂದರ್ಶನ)
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷದಿಂದ ಹೊರಹೋಗಿದ್ದರೂ ಕೂಡ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿಯ ಲಿಂಗಾಯತ ಪ್ರಬಲ ನಾಯಕ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ.

ಜಗದೀಶ್ ಶೆಟ್ಟರ್ ಸೋಲಿಸುವ ಜವಾಬ್ದಾರಿ ಪ್ರಲ್ಹಾದ್ ಜೋಶಿಗೆ ನೀಡಿದ ಅಮಿತ್ ಶಾ
ಕರ್ನಾಟಕ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪಕ್ಷದಿಂದ ಕಾಂಗ್ರೆಸ್‌ಗೆ ಜಿಗಿದಿರುವ ಜಗದೀಶ್ ಶೆಟ್ಟರ್ ನಡೆಗೆ ಅಸಮಾಧಾನಗೊಂಡಿರುವ ಬಿಜೆಪಿ, ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿಯನ್ನು ತವರು ನೆಲದಲ್ಲಿಯೇ ಸೋಲಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.

