Jagdish Shettar

ನವೆಂಬರ್-ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ನಲ್ಲಿ ಮಹಾಸ್ಫೋಟ: ಸಿದ್ದರಾಮಯ್ಯ ವಿರುದ್ಧ ಶೆಟ್ಟರ್ 'ಬಾಂಬ್'!
ಸಿದ್ದರಾಮಯ್ಯ ಮೇಲೆ ಆರೋಪ ಬಂದಾಗಲೆಲ್ಲಾ ಜಾತಿ ಜನಗಣತಿ ತರುತ್ತಾರೆ. ಅಧಿಕಾರದಿಂದ ಇಳಿಯುವ ಸಮಯ ಬಂದಾಗಲೆಲ್ಲ ಹೀಗೆ ಮಾಡುತ್ತಾರೆ. ಲಿಂಗಾಯತ, ಒಕ್ಕಲಿಗರು, ದಲಿತರನ್ನು ಒಡೆಯುವ ಹುನ್ನಾರ ಇದು.

ವಂದೇ ಭಾರತ್ ರೈಲು ಸೌಲಭ್ಯ ಬೆಳಗಾವಿಗೂ ವಿಸ್ತರಿಸಲು ಬದ್ಧ: ಸಂಸದ ಜಗದೀಶ್ ಶೆಟ್ಟರ್
ಬೆಂಗಳೂರು-ಧಾರವಾಡ ಮಾರ್ಗದ ವಂದೇ ಭಾರತ್ ರೈಲನ್ನು ಬೆಳಗಾವಿ ವರೆಗೆ ವಿಸ್ತರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ.

ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯದ ಬೊಕ್ಕಸ ಖಾಲಿ: ಸಂಸದ ಜಗದೀಶ್ ಶೆಟ್ಟರ್ ವ್ಯಂಗ್ಯ
ಖಾತರಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ಇದಕ್ಕಾಗಿ ಹಣ ಸಂಗ್ರಹಿಸಲು, ರಾಜ್ಯದಲ್ಲಿ ಇಂಧನ ಬೆಲೆಯನ್ನು ಹೆಚ್ಚಿಸುವ ಮೂಲಕ ಸರ್ಕಾರ ಬಡವರ ಜೇಬಿಗೆ ಕತ್ತರಿ ಹಾಕಲು ಪ್ರಾರಂಭಿಸಿದೆ.

ರಾಮಮಂದಿರ ನಿರ್ಮಾಣಕ್ಕೆ 2 ಕೋಟಿ ರೂ. ಸಂಗ್ರಹಿಸಿ ಕೊಟ್ಟೆ; ನನಗೆ ಆಹ್ವಾನ ಕೊಟ್ಟಿಲ್ಲ, ನಾನು ಹೋಗಲ್ಲ: ಜಗದೀಶ್ ಶೆಟ್ಟರ್
ರಾಮ ಮಂದಿರ ವಿಚಾರವಾಗಿ ಯಾರೂ ರಾಜಕೀಯ ಮಾಡಬಾರದು ಎಂದು ಹೇಳಿರುವ ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ಅವರು, ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುವಾಗ 2 ಕೋಟಿ ರೂಪಾಯಿ ಸಂಗ್ರಹ ಕೊಟ್ಟಿದ್ದೆ. ಆದರೆ ನನಗೆ ಆಹ್ವಾನ ಬಂದಿಲ್ಲ. ಹೀಗಾಗಿ ನಾನು ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಪ್ರಮುಖ ನಾಯಕರ ನಿರ್ಗಮನದಿಂದ ಕನಲಿದ ಕಮಲ: ಬಿಜೆಪಿಗೆ ತಪ್ಪುತ್ತಾ ಲಿಂಗಾಯತರ ಬೆಂಬಲ; 'ನಿಷ್ಠೆ' ಬದಲಿಸಿತೇ ಸಮುದಾಯ?
ಯಡಿಯೂರಪ್ಪನವರು ಏಕಾಂಗಿಯಾಗಿ ಹೋರಾಡಿ ಲಿಂಗಾಯತರ ವಿಶ್ವಾಸ ಮತ್ತು ಬೆಂಬಲ ಪಡೆದು ಅಧಿಕಾರಕ್ಕೇರಿದ್ದರು. ಆದರೆ ಲಿಂಗಾಯತ ಸಮುದಾಯ ವ್ಯಕ್ತಿಗಾಗಿ ಮತಹಾಕಿ ಬೆಂಬಲಿಸಿತ್ತೇ ಹೊರತು ಪಕ್ಷಕ್ಕಾಗಿ ಅಲ್ಲ. ಹೀಗಾಗಿ ಈ ಬಾರಿ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.

ಟಿಕೆಟ್ ಸಿಗುವ ವಿಶ್ವಾಸವಿದೆ, ಸಂಜೆವರೆಗೂ ಕಾದು ನೋಡೋಣ; ಹೈಕಮಾಂಡ್ಗೆ ಮತ್ತೊಂದು ಗಡುವು ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್
ಟಿಕೆಟ್ ಸಿಗುವ ವಿಶ್ವಾಸವಿದ್ದು, ಮುಂದೆ ಏನು ಮಾಡಬೇಕು ಎನ್ನುವ ಪರಿಸ್ಥಿತಿ ಬರುವುದಿಲ್ಲ ಎಂದು ನಂಬಿದ್ದೇನೆಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ಹೇಳಿದ್ದಾರೆ.

ಬಿಜೆಪಿ ಬುಡಕ್ಕೆ ಬಂಡಾಯದ ಬೆಂಕಿ… ಜೆಡಿಎಸ್ ಗೆ ಕುಟುಂಬ ಕಲಹದ ಉರಿ (ಸುದ್ದಿ ವಿಶ್ಲೇಷಣೆ)
ಚುನಾವಣೆಗೆ ಅಧಿಸೂಚನೆ ಹೊರ ಬಿದ್ದು ನಾಮ ಪತ್ರ ಸಲ್ಲಿಕೆ ಆರಂಭವಾಗಿರುವ ಈ ಹೊತ್ತಿನಲ್ಲಿ ಆಡಳಿತ ಪಕ್ಷ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಭುಗಿಲೆದ್ದಿದೆ. ಇದು ಸದ್ಯಕ್ಕೆ ತಣ್ಣಗಾಗುವ ಸಾಧ್ಯತೆಗಳಿಲ್ಲ. ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ನಂತರವೂ ಹೆಚ್ಚುತ್ತಲೇ ಇದೆ.

ವಿಶೇಷ ಹೂಡಿಕೆ ವಲಯದ ಕುರಿತು ಚರ್ಚಿಸಲು ಗುಜರಾತ್'ಗೆ ಸಚಿವ ಶೆಟ್ಟರ್ ಭೇಟಿ: ರಾಜ್ಯ ಸರ್ಕಾರದ ವಿರುದ್ಧ ಡಿಕೆಶಿ ಕಿಡಿ
ವಿಶೇಷ ಹೂಡಿಕೆ ವಲಯ ನಿರ್ಮಾಣ ಕುರಿತು ಅಧ್ಯಯನ ನಡೆಸಲು ರಾಜ್ಯದ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ನೇತೃತ್ವದ ತಂಡ ಶುಕ್ರವಾರ ಗುಜರಾತ್ ರಾಜ್ಯಕ್ಕೆ ತೆರಳಿದ್ದು, ಅಲ್ಲಿನ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನು ಭೇಟಿಮಾಡಿ ಚರ್ಚೆ ನಡೆಸಿದೆ.

ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಹೊಸ ನೀತಿ ರೂಪಿಸಿ: ಅಧಿಕಾರಿಗಳಿಗೆ ಜಗದೀಶ್ ಶೆಟ್ಟರ್ ಸೂಚನೆ
ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ನೂತನ ಕೈಗಾರಿಕಾ ನೀತಿಯನ್ನು ಸಿದ್ಧಪಡಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ ನೀಡಿದ್ದಾರೆ.

