Jammu and Kashmir

ಜಮ್ಮು ಮತ್ತು ಕಾಶ್ಮೀರ: ನಿಷೇಧಿತ ಜಮಾತ್-ಎ-ಇಸ್ಲಾಮಿ ವಿರುದ್ಧ ಬೃಹತ್ ಕಾರ್ಯಾಚರಣೆ; ಕುಲ್ಗಾಮ್‌ನ 200 ಸ್ಥಳಗಳಲ್ಲಿ ದಾಳಿ!
ಕಳೆದ ನಾಲ್ಕು ದಿನಗಳಲ್ಲಿ, 500ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಮತ್ತು ಅವರಲ್ಲಿ ಹಲವರನ್ನು ಬಂಧಿಸಲಾಗಿದೆ.

ಪಕ್ಷಗಳ ನಿರಾಸಕ್ತಿ: ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಸಮನ್ವಯ ಸಮಿತಿ ರಚನೆ ಕುರಿತು ಮುಂದುವರಿಯದ ಮಾತುಕತೆ!
ಒಕ್ಕೂಟದ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ರಚಿಸಲಾದ ಸಮನ್ವಯ ಸಮಿತಿಗೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ನಾಯಕತ್ವದ ನಡುವೆ ಯಾವುದೇ ಸಂಪರ್ಕವಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Pahalgam terror attack: ಆರು ತಿಂಗಳ ನಂತರ ಕಾಶ್ಮೀರದಲ್ಲಿ ಸಿನಿಮಾ ಚಿತ್ರೀಕರಣ ಪುನರಾರಂಭ
ಈ ಹಾಸ್ಯ ಚಿತ್ರವನ್ನು 'ಜೆಸ್ಸಿ' ಮತ್ತು 'ಲೇಡೀಸ್ & ಜಂಟಲ್‌ಮನ್'ನಂತಹ ಚಿತ್ರಗಳಿಗೆ ಹೆಸರುವಾಸಿಯಾದ ವಿಮಲ್ ಕೃಷ್ಣ ನಿರ್ದೇಶಿಸುತ್ತಿದ್ದಾರೆ.

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಪುನಃಸ್ಥಾಪನೆಗೆ ಸೂಕ್ತ ಸಮಯ ಯಾವಾಗ?' ಕೇಂದ್ರಕ್ಕೆ ಸಿಎಂ ಒಮರ್
ರಾಜ್ಯತ್ವದ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸಬಾರದು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ನೀಡಿದ ಹೇಳಿಕೆಗಳಿಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದರು.

'ದೇಶ ವಿರೋಧಿ ಚಟುವಟಿಕೆ': ಜಮ್ಮು, ಕಾಶ್ಮೀರದ ಇಬ್ಬರು ಸರ್ಕಾರಿ ನೌಕರರು ವಜಾ
ಶಾಲಾ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರಾಗಿರುವ ಗುಲಾಮ್ ಹುಸೇನ್ ಮತ್ತು ಮಾಜ್ದ್ ಇಕ್ಬಾಲ್ ದಾರ್ ಅವರನ್ನು ಲೆಫ್ಟಿನೆಂಟ್ ಗವರ್ನರ್ ವಜಾಗೊಳಿಸಿದ್ದಾರೆ.

ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ; ಮಾನವ ಹಕ್ಕು ಉಲ್ಲಂಘನೆ ಕೊನೆಗೊಳಿಸಿ: ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ಗುಡುಗು
ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ದಬ್ಬಾಳಿಕೆ, ಕ್ರೌರ್ಯ ಮತ್ತು ಸಂಪನ್ಮೂಲಗಳ ಅಕ್ರಮ ಶೋಷಣೆ ನಡೆಸುತ್ತಿದ್ದು, ಅಲ್ಲಿ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ.

ಜಮ್ಮು, ಕಾಶ್ಮೀರ ಉಪಚುನಾವಣೆ: ಎರಡೂ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ
ಕಣಿವೆಯ ಬುದ್ಗಮ್ ಕ್ಷೇತ್ರಕ್ಕೆ ಅಗಾ ಸೈಯದ್ ಮೊಹ್ಸಿನ್ ಮತ್ತು ಜಮ್ಮುವಿನ ನಾಗ್ರೋಟಾ ಸ್ಥಾನದಿಂದ ದೇವಯಾನಿ ರಾಣಾ ಅವರನ್ನು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಸಿದೆ.

2021 ರಿಂದ ಖಾಲಿ ಇದ್ದ ಜಮ್ಮು, ಕಾಶ್ಮೀರದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಕೊನೆಗೂ ಚುನಾವಣೆ ಘೋಷಣೆ
"ನಾಮ ಪತ್ರಗಳನ್ನು ಸಲ್ಲಿಸಲು ಅಕ್ಟೋಬರ್ 13 ಕೊನೆಯ ದಿನಾಂಕವಾಗಿದ್ದು, ನಾಮಪತ್ರಗಳ ಪರಿಶೀಲನೆ ಅಕ್ಟೋಬರ್ 14 ರಂದು ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ 16 ಕೊನೆಯ ದಿನವಾಗಿದೆ".

ಜಮ್ಮು ಮತ್ತು ಕಾಶ್ಮೀರ; ಉಗ್ರರೊಂದಿಗೆ ಗುಂಡಿನ ಚಕಮಕಿ, ಯೋಧ ಹುತಾತ್ಮ; ಶೋಧ ಕಾರ್ಯಾಚರಣೆ ಪುನರಾರಂಭ
ಎನ್‌ಕೌಂಟರ್ ನಡೆದ ಸ್ಥಳದ ಸುತ್ತಮುತ್ತಲಿನ ಪ್ರದೇಶವನ್ನು ರಾತ್ರಿಯಿಡೀ ಸೇನೆ ಸುತ್ತುವರಿದಿದ್ದು, ಶನಿವಾರ ಬೆಳಿಗ್ಗೆ ಜಂಟಿ ಶೋಧ ಕಾರ್ಯಾಚರಣೆ ಪುನರಾರಂಭವಾಯಿತು.

