Jammu-Srinagar

ಶ್ರೀನಗರ-ಚೆನಾಬ್ ಸೇತುವೆಗೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸೋನಂ ವಾಂಗ್ಚುಕ್; Video
2025ರಲ್ಲಿ ಉದ್ಘಾಟನೆಯಾದ ವಿಶ್ವದ ಅತಿ ಎತ್ತರದ ರೈಲು ಕಮಾನು ಸೇತುವೆಯಾದ ಚೆನಾಬ್ ರೈಲು ಸೇತುವೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಅವರು, ಈ ಪ್ರಯಾಣ ಅನುಭವ ಉತ್ತಮವಾಗಿತ್ತು ಎಂದು ಹೇಳಿದ್ದಾರೆ.

Jammu-Kashmir: ಆಕಸ್ಮಿಕವಾಗಿ ಗುಂಡು ಹಾರಿ ಯೋಧ ಸಾವು!
ಶನಿವಾರ ರಾತ್ರಿ ಸೇನೆಯ ರಾಷ್ಟ್ರೀಯ ರೈಫಲ್ಸ್‌ನ ಕಾನ್ಸ್‌ಟೇಬಲ್ ಚೋಟು ಕುಮಾರ್ ಎಂಬ ಸೈನಿಕ ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿದ್ದಾನೆ.

ಭಾರತ-ಪಾಕ್ ಸಂಘರ್ಷ: ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ದೆಹಲಿಗೆ ಸ್ಥಳಾಂತರ
ಪಾಕಿಸ್ತಾನದ ದಾಳಿ ನಡುವೆ ಉದ್ನಿಗ್ನ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ನಿರ್ದೇಶನದ ಮೇರೆಗೆ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಜಮ್ಮುವಿನಿಂದ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತರುವಲ್ಲಿ ಯಶಸ್ವಿ ಆಗಿದ್ದಾರೆ.

ಜಮ್ಮು-ಕಾಶ್ಮೀರ: ಶ್ರೀನಗರದಲ್ಲಿ ಸೇನಾಪಡೆ-ಉಗ್ರರ ನಡುವೆ ಎನ್‌ಕೌಂಟರ್; ಬಂಡಿಪೋರಾದಲ್ಲಿ ಶೋಧ ಕಾರ್ಯಾಚರಣೆ ಆರಂಭ
ಖನ್ಯಾರ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಬಳಿಕ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದು, ಎನ್ಕೌಂಟರ್ ಆರಂಭಿಸಿದೆ.

'ಮೋದಿಯನ್ನು ಅಧಿಕಾರದಿಂದ ಇಳಿಸೋವರೆಗೂ ನಾನು ಸಾಯೊಲ್ಲ' ಎಂದಿದ್ದ Kharge ಆರೋಗ್ಯ ವಿಚಾರಿಸಿದ ಪ್ರಧಾನಿ; 'ಅನಗತ್ಯ' ಎಂದ ಅಮಿತ್ ಶಾ!
ಜಮ್ಮು ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದರು.

ಲೋಕಸಭೆ ಚುನಾವಣೆ 4ನೇ ಹಂತ: ಮಧ್ಯಾಹ್ನ 3 ಗಂಟೆಯವರೆಗೆ ಶೇ.52.60ರಷ್ಟು ಮತದಾನ
ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಸೋಮವಾರ ಮಧ್ಯಾಹ್ನ 3 ಗಂಟೆಯವರೆಗೆ ಶೇ.52.60ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಆಳವಾದ ಕಮರಿಗೆ ಉರುಳಿದ ಟ್ರಕ್, ನಾಲ್ಕು ಮಂದಿ ದಾರುಣ ಸಾವು
ಮಂಗಳವಾರ ಮುಂಜಾನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದಿಂದ ಟ್ರಕ್ ಆಳವಾದ ಕಮರಿಗೆ ಉರುಳಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಮತ್ತೆ ಭೂ ಕುಸಿತ: ಸತತ ಮೂರನೇ ದಿನವೂ ರಸ್ತೆ ಬಂದ್
ರಾಂಬನ್ ಜಿಲ್ಲೆಯಲ್ಲಿ ಹೊಸದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಬುಧವಾರ ಸತತ ಮೂರನೇ ದಿನವೂ ಸಂಚಾರಕ್ಕೆ ಬಂದ್ ಮಾಡಲಾಗಿದ್ದು, 800ಕ್ಕೂ ಹೆಚ್ಚು ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿವೆ.

ಶ್ರೀನಗರ–ಜಮ್ಮು ಹೆದ್ದಾರಿ ಸಂಚಾರ ಮತ್ತೆ ಆರಂಭ
ಕಾಶ್ಮೀರ ಕಣಿವೆಯನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ 280 ಕಿಲೋಮೀಟರ್ ಉದ್ದದ ಶ್ರೀನಗರ- ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರದಿಂದ ಸಂಚಾರ ಮತ್ತೆ ಪುನರಾರಂಭವಾಗಿದೆ.

