Jammu

ಬಾರಾಮುಲ್ಲಾ ದಾಳಿ ಪ್ರಕರಣ: ಓರ್ವ ಉಗ್ರನನ್ನು ಸದೆಬಡಿದ ಸೇನಾಪಡೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸಿಆರ್'ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ್ದ ಓರ್ವ ಉಗ್ರನನ್ನು ಭಾರತೀಯ ಸೇನಾಪಡೆ ಸದೆಬಡಿದಿದೆ ಎಂದು ಸೋಮವಾರ ತಿಳಿದುಬಂದಿದೆ.

ಕೊರೋನಾ ವೈರಸ್ ಲಾಕ್ ಡೌನ್: ಐದು ತಿಂಗಳ ನಂತರ ಭಕ್ತರಿಗೆ ವೈಷ್ಣೋದೇವಿ ದರ್ಶನ
ಕೊರೋನಾ ವೈರಸ್ ಸಾಂಕ್ರಾಮಿಕದ ಲಾಕ್ ಡೌನ್ ನಿಂದಾಗಿ ಮುಚ್ಚಲ್ಪಟ್ಟಿದ್ದ ಮಾತಾ ವೈಷ್ಣೋದೇವಿ ದೇಗುಲವನ್ನು ಐದು ತಿಂಗಳ ಬಳಿಕ ಮೊದಲ ಬಾರಿಗೆ ಭಕ್ತರಿಗಾಗಿ ತೆರೆಯಲಾಗಿದೆ.

24 ಗಂಟೆಗಳಲ್ಲಿ 8 ಮಂದಿ ಉಗ್ರರನ್ನು ಸದೆಬಡಿದ ಭಾರತೀಯ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 24 ಗಂಟೆಗಳಲ್ಲಿ ಎರಡು ಪ್ರದೇಶಗಳಲ್ಲಿ ಎನ್'ಕೌಂಟರ್ ನಡೆಸಲಾಗಿದ್ದು, 8 ಮಂದಿ ಉಗ್ರರನ್ನು ಹತ್ಯೆ ಮಾಡುವಲ್ಲಿ ಭಾರತೀಯ ಸೇನಾಪಡೆ ಯಶಸ್ವಿಯಾಗಿದೆ.

ಕೋವಿಡ್-19: ಕಾಶ್ಮೀರದಿಂದ ರಜೌರಿವರೆಗೂ ಮಾಲೀಕನನ್ನು ಕರೆದೊಯ್ದ ಕುದುರೆಗೆ 'ಹೋಮ್ ಕ್ವಾರಂಟೈನ್'
ಕಾಶ್ಮೀರದಿಂದ ಜಮ್ಮ ವಲಯದ ರಜೌರಿ ಜಿಲ್ಲೆಯವರೆಗೂ ತನ್ನ ಮಾಲೀಕನನ್ನು ಕರೆದೊಯ್ದ ಕುದುರೆಯೊಂದಕ್ಕೆ ಕೊರೋನಾವೈರಸ್ ಭೀತಿಯ ಹಿನ್ನೆಲೆಯಲ್ಲಿ ಇತರ ಪ್ರಾಣಿಗಳಿಂದ ಪ್ರತ್ಯೇಕಗೊಳಿಸಿ ಹೋಮ್ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.

ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಇಬ್ಬರು ಉಗ್ರರು ಹತ
ದಕ್ಷಿಣ ಕಾಶ್ಮೀರ ಜಿಲ್ಲೆಯ ಶೋಪಿಯಾನ್‌ನಲ್ಲಿ ಶುಕ್ರವಾರ ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಜಮ್ಮು-ಕಾಶ್ಮೀರ: ಉಗ್ರ ದಾಳಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮ, ನಾಗರಿಕ ಸಾವು
ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ಸೊಪೊರೆ ಪ್ರದೇಶದಲ್ಲಿ ನಡೆದ ಉಗ್ರರ ದಾಳಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಎನ್ ಕೌಂಟರ್: ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಕಣಿವೆ ಪ್ರದೇಶ ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸಪ್ಪಳ ಕೇಳಿಬಂದಿದೆ. ಅದು ಕಳೆದ ವರ್ಷ ಫೆಬ್ರವರಿ 14ರಂದು 40 ಯೋಧರನ್ನು ಬಲಿ ತೆಗೆದುಕೊಂಡಿದ್ದ ಪುಲ್ವಾಮಾ ಜಿಲ್ಲೆಯಲ್ಲಿಯೇ.

ಜಮ್ಮುವಿನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
ಜಮ್ಮುವಿನ ಗೊಲೆಪುಲ್ಲಿ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಹಲವಾರು ಜನರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಘಟನೆ ಬುಧವಾರ ನಡೆದಿದೆ.

ಪಾಕಿಸ್ತಾನದ ಡ್ರೋಣ್ ಹೊಡೆದುರುಳಿಸಿದ ಬಿಎಸ್ಎಫ್
ಗಡಿ ಭದ್ರತಾ ಸಿಬ್ಬಂದಿಗಳು ಜ.28 ರಂದು ರಾತ್ರಿ ಪಾಕಿಸ್ತಾನದ ಡ್ರೋಣ್ ನ್ನು ಹೊಡೆದುರುಳಿಸಿದೆ.

