Janasevaka scheme

ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವ "ಜನಸೇವಕ" ಯೋಜನೆಗೆ ಮುಖ್ಯಮಂತ್ರಿ ಚಾಲನೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜನಸ್ನೇಹಿ ಸಹಾಯ ವೇದಿಕೆ, ಕಾರ್ಮಿಕ ಇಲಾಖೆಯ ಆಶಾದೀಪ ಯೋಜನೆ, ಸಕಾಲ ಮಿಷನ್ ಭಾಗವಾದ ಜನಸೇವಕ ಯೋಜನೆ ಹಾಗೂ ಮಾಹಿತಿ ಹಕ್ಕಿನ ಆನ್‌ಲೈನ್ ಸೇವೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು

ಬಿಡಿಎ ಸೇವೆಗಳು ಶೀಘ್ರವೇ `ಜನಸೇವಕ’ ವ್ಯಾಪ್ತಿಗೆ: ಸಚಿವ ಅಶ್ವತ್ಥನಾರಾಯಣ
ಆಧಾರ್ ಕಾರ್ಡಿನಿಂದ ಹಿಡಿದು ಭೂ ಹಿಡುವಳಿ ಪ್ರಮಾಣ ಪತ್ರದವರೆಗೆ 79 ಅಗತ್ಯ ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸುವ `ಜನಸೇವಕ’ ಯೋಜನೆ ವ್ಯಾಪ್ತಿಗೆ ಸದ್ಯದಲ್ಲೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸೇವೆಗಳನ್ನೂ ಸೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಜನಸೇವಕ ವ್ಯಾಪ್ತಿಗೆ ಆಧಾರ್, ಎಪಿಎಲ್, ವೋಟರ್ ಐಡಿ ನೋಂದಣಿ: ಸುರೇಶ್ ಕುಮಾರ್
ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು, ನೋಂದಣಿ ಸೇವೆಗಳನ್ನು ಸಕಾಲ ಸ್ಕೀಂನ ಜನಸೇವಕ ಯೋಜನೆಯಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿದ್ದು, ಇಷ್ಟರಲ್ಲಿಯೇ ಈ ಸೇವೆಗಳನ್ನು ಜನಸೇವಕ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

