ದೇಶ'ಯೋಗಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಅಸಾದುದ್ದೀನ್ ಓವೈಸಿ ಜನಿವಾರ ಧರಿಸಿ ರಾಮನಾಮ ಜಪಿಸುತ್ತಾರೆ'
ಮುಂದಿನ ಅವಧಿಗೆ ಕೂಡ ಯೋಗಿ ಆದಿತ್ಯನಾಥ್ ಸರ್ಕಾರ ಅಧಿಕಾರಕ್ಕೆ ಬಂದರೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಜನಿವಾರ ಧರಿಸಿ ಶ್ರೀರಾಮನಾಮ ಜಪ ಪ್ರಾರಂಭ ಮಾಡುತ್ತಾರೆ ಎಂದು ಉತ್ತರ ಪ್ರದೇಶದ ಪಂಚಾಯಿತಿ ರಾಜ್ ಸಚಿವ ಭೂಪೇಂದ್ರ ಸಿಂಗ್ ಚೌಧರಿ ಹೇಳಿದ್ದಾರೆ.