ಸುದ್ದಿಗಳುಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಕಾನೂನು ಹೋರಾಟಕ್ಕೆ ಸೌಮ್ಯ ರೆಡ್ಡಿ ತೀರ್ಮಾನ
ತೀವ್ರ ರೋಚಕ ಫಲಿತಾಂಶಕ್ಕೆ ಕಾರಣವಾದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸಿ. ರಾಮಮೂರ್ತಿ 16 ಮತಗಳ ಅಂತರದಿಂದ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ. ಆದರೆ, ಈ ಫಲಿತಾಂಶದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಸೋತ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಿಳಿಸಿದ್ದಾರೆ.