Jayanagar

ಜಯನಗರ ಕ್ಷೇತ್ರದ ಫಲಿತಾಂಶ ಗೊಂದಲ, ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ-ಕಾಂಗ್ರೆಸ್ ನಾಯಕರ ವಾಗ್ವಾದ!
ರಾಜ್ಯ ವಿಧಾನಸಭಾ ಚುನಾವಣೆಯ 223 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದ್ದು ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಗೊಂದಲದ ಗೂಡಾಗಿದೆ.

ಮಾಜಿ ಕಾರ್ಪೊರೇಟರ್‌ಗಳ ಪ್ರತಿಭಟನೆ ಚುನಾವಣಾ ತಂತ್ರವಷ್ಟೇ: ಶಾಸಕಿ ಸೌಮ್ಯಾ ರೆಡ್ಡಿ
ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಳೆದ 4 ವರ್ಷ 9 ತಿಂಗಳಿಂದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಇದಕ್ಕೆ ಶಾಸಕಿ ಸೌಮ್ಯಾ ರೆಡ್ಡಿಯೇ ಮೂಲ ಕಾರಣವೆಂದು ಬಿಜೆಪಿ ಕಾರ್ಯಕರ್ತರು ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬೆಂಗಳೂರು: ನಿವೃತ್ತ ಸರ್ಕಾರಿ ನೌಕರರ ಮನೆಯ ದರೋಡೆ ಮಾಡಿದ್ದ ನೇಪಾಳದ ಐವರ ಬಂಧನ
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ನೇಪಾಳದ ಐವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಜಯನಗರ 5ನೇ ಬ್ಲಾಕ್‌ನಲ್ಲಿರುವ ದೂರುದಾರರ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದಾಗ ಬಂಧಿಸಲಾಗಿದೆ.

ಬೆಂಗಳೂರು: ಕಾಲೇಜಿನಲ್ಲಿ ಮಹಿಳೆಯರ ಶೌಚಾಲಯಕ್ಕೆ ಅಕ್ರಮ ಪ್ರವೇಶ ಮಾಡಿದ 42 ವರ್ಷದ ವ್ಯಕ್ತಿ ಬಂಧನ
ಮಹಿಳಾ ಶೌಚಾಲಯಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಂತರ ಜಯನಗರ 4ನೇ ಬ್ಲಾಕ್‌ನಲ್ಲಿರುವ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಭಯ ಹುಟ್ಟಿಸಿದ 42 ವರ್ಷದ ವ್ಯಕ್ತಿಯನ್ನು ಘಟನೆ ನಡೆದ 13 ದಿನಗಳ ನಂತರ ಹನುಮಂತನಗರದಲ್ಲಿ ಬಂಧಿಸಲಾಗಿದೆ.

ವಾಹನ ನಿಲುಗಡೆ ವಿಚಾರಕ್ಕೆ ಜಗಳ: ವ್ಯಕ್ತಿ, ಆತನ ಕುಟುಂಬದ ಮೇಲೆ ಸ್ಥಳೀಯ ನಿವಾಸಿಗಳಿಂದ ಹಲ್ಲೆ!
ಜಯನಗರ 5ನೇ ಬ್ಲಾಕ್‌ನ 39ನೇ ಕ್ರಾಸ್‌ನಲ್ಲಿ ವಾಹನ ನಿಲುಗಡೆ ವಿಚಾರವಾಗಿ ನಡೆದ ಜಗಳದಲ್ಲಿ 53 ವರ್ಷದ ಮಹಿಳೆ ಸೇರಿದಂತೆ ಮೂವರ ಮೇಲೆ ಸ್ಥಳೀಯ ನಿವಾಸಿ ಹಾಗೂ ಆತನ ಚಾಲಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಕೆಎಸ್ ಆರ್ ಟಿಸಿ ಆಸ್ಪತ್ರೆ ಖಾಸಗೀಕರಣಕ್ಕೆ ಸಂಸದ ತೇಜಸ್ವಿ ಸೂರ್ಯ ಯತ್ನ: ಕಾರ್ಮಿಕ ಒಕ್ಕೂಟ ಅಧ್ಯಕ್ಷ ಅನಂತ ಸುಬ್ಬಾರಾವ್
ಬೆಂಗಳೂರು ದಕ್ಷಿಣ ಸಂಸದರು, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ ಅವರು ಜಯನಗರದಲ್ಲಿರುವ ಕೆಎಸ್ ಆರ್ ಟಿಸಿ ಆಸ್ಪತ್ರೆಯನ್ನು ಖಾಸಗೀಕರಣಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಕೆಎಸ್ ಆರ್ ಟಿಸಿ ಸಿಬ್ಬಂದಿ ಹಾಗೂ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಹೆಚ್ ವಿ ಅನಂತ ಸುಬ್ಬಾರಾವ್ ಆರೋಪಿಸಿದ್ದಾರೆ.

ಜಯನಗರ ವಾಣಿಜ್ಯ ಸಂಕೀರ್ಣ ಹಂಚಿಕೆ ಪ್ರಕರಣ: ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಆದೇಶ
ಜಯನಗರ ವಾಣಿಜ್ಯ ಸಂಕೀರ್ಣದಲ್ಲಿರುವ ಕೆಲ ಮಳಿಗೆಗಳನ್ನು ಟೆಂಡರ್ ಪ್ರಕ್ರಿಯೆ ನಡೆಸದೆ ಹಂಚಿಕೆ ಮಾಡಿರುವ ಪ್ರಕರಣವನ್ನು ಹೈಕೋರ್ಟ್ ಲೋಕಾಯುಕ್ತ ತನಿಖೆಗೆ ಸೋಮವಾರ ಆದೇಶಿಸಿದೆ.

ಶಾಸಕಿ ಸೌಮ್ಯ ರೆಡ್ಡಿ ಟ್ವೀಟ್: ಸರ್ಕಾರಿ ಆಸ್ಪತ್ರೆಗಳಿಗೆ ಸಚಿವ ಸುಧಾಕರ್ ದಿಢೀರ್ ಭೇಟಿ, ವೈದ್ಯಾಧಿಕಾರಿಗಳಿಗೆ ತರಾಟೆ
ಕೊರೋನಾ ಸೋಂಕಿತ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲು ಅನುಭವಿಸಿದ ಸಮಸ್ಯೆ ಬಗ್ಗೆ ಜಯನಗರ ಶಾಸಕಿ ಸೌಮ್ಯ ರೆಡ್ಡಿ ಮಾಡಿದ್ದ ಟ್ವೀಟ್ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಭಾನುವಾರ ಜಯನಗರ ಸಾರ್ವಜನಿಕ ಆಸ್ಪತ್ರೆ ಮತ್ತು ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಗ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆದರ್ಶ ಯುವ ಶಾಸಕಿ ಪ್ರಶಸ್ತಿಗೆ ಭಾಜನರಾದ ಜಯನಗರ ಎಂಎಲ್ ಎ ಸೌಮ್ಯಾ ರೆಡ್ಡಿ
ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾರೆಡ್ಡಿ ಆದರ್ಶ ಯುವ ಶಾಸಕಿ ಎಂಬ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

