JC Madhuswamy

CM ಆಗಿದ್ದಾಗ 3 ದಿನ ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಮಂಗಳೂರಿನಲ್ಲಿ ಕುಮಾರಸ್ವಾಮಿ ಏಕೆ ಸುತ್ತಾಡುತ್ತಿದ್ರು? ಮಾಧುಸ್ವಾಮಿ ಹಳೇಯ ವಿಡಿಯೋ ವೈರಲ್!
ಚಿಕ್ಕನಾಯಕನಹಳ್ಳಿ ಶಾಸಕರನ್ನು ಕುಮಾರಸ್ವಾಮಿ ತಮ್ಮ ಜೊತೆ ಏಕೆ ಇಟ್ಟುಕೊಂಡಿದ್ದರು ಎಂಬುದು ನನಗೆ ಗೊತ್ತು ಎಂದು ಹೇಳಿರುವ ಅವರು, ಯಾವ್ಯಾವ ಗೆಸ್ಟ್ ಹೌಸ್ ನಲ್ಲಿ ಏನೇನು ಮಾಡಿದ್ದಾರೆ ಎಂಬ ಸಂಪೂರ್ಣ ಮಾಹಿತಿಯಿದೆ. ನನ್ನ ಜೊತೆ ಚಾಲೆಂಜ್ ಮಾಡಲಿ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಕರೆಯದ ಕಾರ್ಯಕ್ರಮಕ್ಕೆ ಹೆಂಗಪ್ಪ ಬರಲಿ; ಪಿತೂರಿ ಮಾಡುವುದನ್ನು ಬಿಟ್ಟು ಬೆಳೆಯುವವರನ್ನು ಪ್ರೋತ್ಸಾಹಿಸಿ: ಜೆ.ಸಿ ಮಾಧುಸ್ವಾಮಿ
2023ರಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಸೋತ ಬಳಿಕ ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರು ಉಳಿದಿದ್ದ, ಮಾಧುಸ್ವಾಮಿ ಇದೀಗ ಏಕಾಏಕಿ ಪ್ರತ್ಯಕ್ಷರಾಗಿ ಸ್ವಪಕ್ಷದ ನಾಯಕರ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.

ತುಮಕೂರು ಲೋಕಸಭೆ ಕ್ಷೇತ್ರ: ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಒಡೆದ ಮನೆಯಾದ ಬಿಜೆಪಿ; ಪ್ರಚಾರ ಆರಂಭಿಸಿದ ಕಾಂಗ್ರೆಸ್!
ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಸೋಮಣ್ಣ ಹೊರಗಿನವರು ಎಂದು ಕರೆದಿದ್ದರು, ಇದಾದ ನಂತರ, ಕ್ಷೇತ್ರದ ಚಿಕ್ಕನಾಯಕನಹಳ್ಳಿ, ತಿಪಟೂರು ಮುಂತಾದ ಕಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಆರಂಭವಾಯಿತು.

ತುಮಕೂರು ಕ್ಷೇತ್ರಕ್ಕಾಗಿ ಜಟಾಪಟಿ: ಹೊರಗಿನಿಂದ ಬಂದು ಗೆದ್ದಿರುವ ಇತಿಹಾಸವಿಲ್ಲ; ಸೋಮಣ್ಣಗೆ ಮಾಧುಸ್ವಾಮಿ ಟಕ್ಕರ್!
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹೊರಗಿನಿಂದ ಬಂದವರು ಗೆದ್ದಿರುವ ಉದಾಹರಣೆ ಇಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ, ವಿ.ಸೋಮಣ್ಣ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಡಾ. ಬಿಆರ್ ಅಂಬೇಡ್ಕರ್ಗೆ ಅವಮಾನ ಮಾಡಿದರೆ ಸಹಿಸುವುದಿಲ್ಲ: ಸಚಿವ ಜೆಸಿ ಮಾಧುಸ್ವಾಮಿ
ಇತ್ತೀಚೆಗೆ ನಗರದ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ಆಕ್ಷೇಪಾರ್ಹ ನಾಟಕ ಪ್ರದರ್ಶನದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಭಾರತೀಯ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರಿಗೆ ಮಾಡುವ ಯಾವುದೇ ಅವಮಾನವನ್ನು ಸಹಿಸುವುದಿಲ್ಲ ಎಂದು ಬುಧವಾರ ಹೇಳಿದೆ.

ರಾಜ್ಯ ಸೈಬರ್ ಭದ್ರತಾ ನೀತಿ-2023ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸೈಬರ್ ಭದ್ರತಾ ನೀತಿ 2023ಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.

ವನ್ಯಜೀವಿ ಮಂಡಳಿಗೆ ಸದಸ್ಯರಾಗಿ ನಟ ದರ್ಶನ್, ಸಚಿವ ಮಾಧುಸ್ವಾಮಿ ನೇಮಕ!
ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯಲ್ಲಿ ಖಾಲಿ ಇದ್ದ ಸದಸ್ಯ ಸ್ಥಾನಕ್ಕೆ ಚಿತ್ರನಟ ದರ್ಶನ್ ತೂಗುದೀಪ್ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

ಬಾದಾಮಿಯಲ್ಲಿ ಒಳ್ಳೆಯ ಕೆಲಸ ಮಾಡಿಲ್ಲವೇ, ಮತ್ತೆ ಸ್ಪರ್ಧಿಸಿದರೆ ಗೆಲ್ಲುವ ವಿಶ್ವಾಸವಿಲ್ಲವೇ: ಕೋಲಾರ ಸುರಕ್ಷಿತವಲ್ಲ ಎನಿಸಿದರೇ ಚಿಕ್ಕನಾಯಕನಹಳ್ಳಿಗೆ ಬರಲಿ!
ಸಿದ್ದರಾಮಯ್ಯರ ಕ್ಷೇತ್ರ ಹುಡುಕಾಟದ ಬಗ್ಗೆ ಟೀಕೆ ಮಾಡಲ್ಲ, ಜನ ನಿರ್ಧರಿಸುತ್ತಾರೆ. ಅವರಿಗೆ ಎಲ್ಲಿ ಗೆಲ್ಲುತ್ತೀನಿ ಅನ್ನೋ ವಿಶ್ವಾಸ ಇರುವ ಕ್ಷೇತ್ರದಲ್ಲಿ ಸ್ಪರ್ಧಿಸುವುದು, ಬಿಡುವುದು ಅವರ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದರು.

ತುಮಕೂರು: ಕಳಪೆ ಕಾಮಗಾರಿಗೆ ಸಚಿವ ಜೆ.ಸಿ. ಮಾಧುಸ್ವಾಮಿ ವಿರುದ್ಧ ಬಿಜೆಪಿ ಮುಖಂಡ ವಾಗ್ದಾಳಿ
ತುಮಕೂರಿನಲ್ಲಿ ಬಿಜೆಪಿಯೊಳಗೆ ಗುಸುಗುಸು ಶುರುವಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಪ್ರತಿನಿಧಿಸುವ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿಲ್ಲ ಎಂದು ಬಿಜೆಪಿ ಮುಖಂಡ ವಾಗ್ದಾಳಿ ನಡೆಸಿದ್ದಾರೆ.

