ರಾಜಕೀಯಲೋಕಸಭೆ ಚುನಾವಣೆ 2024: ಬಿಜೆಪಿ ಜೊತೆಗೆ ಜೆಡಿಎಸ್ ವಿಲೀನದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ
ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನಗೊಳ್ಳುವ ಊಹಾಪೋಹಗಳ ನಡುವೆ, ಎಲ್ಲವೂ ಸುಸೂತ್ರವಾಗಿ ನಡೆದರೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್-ಬಿಜೆಪಿ ಅಭ್ಯರ್ಥಿ ಎಚ್ಡಿ ಕುಮಾರಸ್ವಾಮಿ ಶನಿವಾರ ಹೇಳಿದ್ದಾರೆ.