ರಾಜಕೀಯ19 ಜೆಡಿಎಸ್ ಶಾಸಕರ ಪೈಕಿ 11 ಮಂದಿ ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಸಿಎಂ ಇಬ್ರಾಹಿಂ
2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರ ಏಕಪಕ್ಷೀಯ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್ ಪಕ್ಷದ 19 ಶಾಸಕರ ಪೈಕಿ 11 ಶಾಸಕರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಬುಧವಾರ ಹೇಳಿದ್ದಾರೆ. .