JDS

ಜನವರಿ 24 ರಂದು ಹಾಸನದಲ್ಲಿ 'ಜೆಡಿಎಸ್' ಬೃಹತ್ ಸಮಾವೇಶ: ಸುಮಾರು 2 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ!
ಸಭೆಯಲ್ಲಿ 2 ಲಕ್ಷಕ್ಕೂ ಅಧಿಕ ಜನ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಾಲೂಕುಗಳಲ್ಲಿ ಪೂರ್ವ ಭಾವಿ ಸಭೆ ಏರ್ಪಡಿಸಲಾಗಿದೆ.

ದೇವೇಗೌಡರಿಗೆ ಈಗ ನಾವು ಬೇಡವಾಗಿದ್ದೇವೆ, ನಮ್ಮ ಅಗತ್ಯ ಅವರಿಗೆ ಬೇಡವಾಗಿದೆ: ಮಾಜಿ ಸಚಿವ ನಾರಾಯಣ ಗೌಡ ಆರೋಪ
ರಾಜ್ಯಾಧ್ಯಕ್ಷರು ನಮ್ಮನ್ನು ಸಭೆಗೆ ಕರೆಸಿದ್ದರು. ಸ್ಥಳೀಯ ಚುನಾವಣೆ ಸಂಬಂಧ ದೇವೇಗೌಡರು ಹೇಳಿಕೆ ನೀಡಿದರು. ನಾವು ನಮ್ಮ ಹಕ್ಕನ್ನು ಬಿಟ್ಟುಕೊಟ್ಟೆವು ಎಂದಿದ್ದಾರೆ.

ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳ ಪರಿಷತ್ ಚುನಾವಣೆ: ಬಿಜೆಪಿ 3 ಸ್ಥಾನಗಳಲ್ಲಿ ಸ್ಪರ್ಧೆ ಇಂಗಿತ, ಕೋರ್ ಕಮಿಟಿಯಲ್ಲಿ ಚರ್ಚೆ
ಸೋಮವಾರ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ, ಮುಂಬರುವ ಚುನಾವಣೆಗಳಿಗೂ ಮೈತ್ರಿ ಮುಂದುವರಿಸುವ ಬಗ್ಗೆ ಚರ್ಚಿಸಲಾಯಿತು. ಕೆಲವು ಬಿಜೆಪಿ ನಾಯಕರು ಮೂರು ಸ್ಥಾನಗಳನ್ನು ಉಳಿಸಿಕೊಳ್ಳಲು ಸೂಚಿಸಿದರು.

ಮಾಧ್ಯಮಗಳ ಮುಂದೆ ಮಾತ್ರ ರಾಜಕಾರಣ ಮಾಡುವವರ ಹೇಳಿಕೆಗೆ ಪ್ರತಿಕ್ರಿಯಿಸಲ್ಲ: HDKಗೆ ಡಿಕೆಶಿ ತಿರುಗೇಟು
ನಮ್ಮ ಕಾರ್ಯಕರ್ತ ಸತ್ತಿದ್ದಾನೆ. ನಾನು ಪಕ್ಷದ ಸಮಿತಿಯಿಂದ ಮಾಹಿತಿ ಪಡೆದಿದ್ದೇನೆ. ಅಧಿಕೃತವಾಗಿ ವರದಿ ನೀಡಬೇಕಿದೆ. ನಾನು ಕುಮಾರಸ್ವಾಮಿ ಹಾಗೂ ಇತರರ ಹೇಳಿಕೆಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ.

ದ್ವೇಷ ಭಾಷಣ ಮಸೂದೆ: ಸಹಿ ಹಾಕದಂತೆ ರಾಜ್ಯಪಾಲರಿಗೆ ಜೆಡಿಎಸ್ ಮನವಿ
ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ಜೆಡಿಎಸ್ ಮುಖಂಡರು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ.

JDS ಜೊತೆಗಿನ ಚುನಾವಣಾ ಮೈತ್ರಿ ತೀರ್ಮಾನ ಹೈಕಮಾಂಡ್'ಗೆ ಬಿಟ್ಟದ್ದು: ಬಿ.ವೈ ವಿಜಯೇಂದ್ರ
ಬಿಜೆಪಿ ಕೇಂದ್ರ ನಾಯಕತ್ವವು ಜೆಡಿಎಸ್ ಜೊತೆ ಕೈಜೋಡಿಸಲು ತೀರ್ಮಾನಿಸಿದೆ. ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಮುಂದಾಗಿದ್ದಾರೆ.

ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಕಷ್ಟ: ಹೆಚ್.ಡಿ ದೇವೇಗೌಡ
ಜೆಡಿಎಸ್ ತನ್ನ ಬಲವಿರುವ ಸ್ಥಳಗಳಲ್ಲಿ ಮೈತ್ರಿ ಇಲ್ಲದೆ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲಿದೆ ಎಂದು ದೇವೇಗೌಡ ಸ್ಪಷ್ಟಪಡಿಸಿದರು.

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 5 ಜೆಡಿಎಸ್ ಅಭ್ಯರ್ಥಿಗಳ ಗೆಲುವು
ಮಹಾರಾಷ್ಟ್ರದಲ್ಲಿ ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ನ ಐವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಇದಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಸಂತಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕಠಿಣ ನಿರ್ಧಾರಗಳಿಂದ ದೇವೇಗೌಡರ ರಾಜಕೀಯ ಜೀವನ ನಾಶ: ಹೆಚ್.ಡಿ ಕುಮಾರಸ್ವಾಮಿ ಆರೋಪ
ನನ್ನ ತಂದೆ ಪ್ರಧಾನಿ, ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರಾಗಿ ರಾಜ್ಯ ಮತ್ತು ರಾಷ್ಟ್ರ ಎರಡಕ್ಕೂ ಸೇವೆ ಸಲ್ಲಿಸಿದ್ದಾರೆ. ಆದರೆ, ಕಾಂಗ್ರೆಸ್ ಕೈಗೊಂಡ ತುರ್ತು ಮತ್ತು ಕಠಿಣ ನಿರ್ಧಾರಗಳ ಕಾರಣ ಅವರು ಈ ಸ್ಥಾನಗಳಲ್ಲಿ ದೀರ್ಘಕಾಲ ಸೇವೆ ಮಾಡಲು ಸಾಧ್ಯವಾಗಲಿಲ್ಲ.

