ದೇಶಪ್ರಧಾನಿ ಮೋದಿಯನ್ನು ಟೀಕಿಸಿದ ಹೇಮಂತ್ ಸೊರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ನಾಲಾಯಕ್: ಬಿಜೆಪಿ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಶುಕ್ರವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡರು, ನಿರೀಕ್ಷಿಸಲಾಗಿದ್ದ ಕನಿಷ್ಠ ಸೌಜನ್ಯದ ಕೊರತೆಯಿಂದ ಮುಖ್ಯಮಂತ್ರಿ ಕಚೇರಿ ಹಾಗೂ ಅದರ ಘನತೆಗೆ ಕುಂದುಂಟಾಗಿದೆ ಎಂದು ಆರೋಪಿಸಿದ್ದಾರೆ.