Jharkhand

ಜಾರ್ಖಂಡ್'ನಲ್ಲಿ ಎನ್ಕೌಂಟರ್: ನಾಲ್ವರು ನಕ್ಸಲರ ಹತ್ಯೆ, ಇಬ್ಬರ ಬಂಧನ
ಜಾರ್ಖಂಡ್ನ ಚೈಬಾಸಾದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ಈ ವೇಳೆ ನಾಲ್ವರು ನಕ್ಸಲರನ್ನು ಹತ್ಯೆ ಮಾಡಿ, ಇಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಜಾರ್ಖಂಡ್; ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಮೂವರು ಸಾವು
ಜಮ್ಶೆಡ್ಪುರ ನಗರದ ಹೊರವಲಯದಲ್ಲಿರುವ ಗೋವಿಂದಪುರ ಹಾಲ್ಟ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಎರಡು ವರ್ಷದ ಬಾಲಕ ಮತ್ತು ಮೂರು ವರ್ಷದ ಬಾಲಕಿ ಜೊತೆಯಲ್ಲಿ ಮುಂಜಾನೆ ಹಳಿ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಜಾರ್ಖಂಡ್: ಸಹೋದ್ಯೋಗಿಯಿಂದ ಪೊಲೀಸ್ ಅಧಿಕಾರಿ ಹತ್ಯೆ!
ಜಾರ್ಖಂಡ್ ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸಹೋದ್ಯೋಗಿಯಿಂದಲೇ ಹತ್ಯೆಗೀಡಾಗಿದ್ದಾರೆ.

ಲೋಕಸಭೆ ಚುನಾವಣೆ 2024: ಜಾರ್ಖಂಡ್ನಲ್ಲಿ ಎಲ್ಲಾ ಐದು ಬುಡಕಟ್ಟು ಸ್ಥಾನಗಳಲ್ಲಿ ಬಿಜೆಪಿ ಸೋಲು
ಜಾರ್ಖಂಡ್ನಲ್ಲಿ ಬುಡಕಟ್ಟು ಸಮುದಾಯಕ್ಕೆ ಮೀಸಲಾಗಿದ್ದ ಎಲ್ಲ ಐದು ಸ್ಥಾನಗಳನ್ನು ಬಿಜೆಪಿ ಕಳೆದುಕೊಂಡಿದೆ. ಕುಂತಿ ಲೋಹರ್ಡಗಾ, ಸಿಂಗ್ಭೂಮ್, ರಾಜಮಹಲ್ ಮತ್ತು ದುಮ್ಕಾ ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ.

ಜೂನ್ 4ರ ನಂತರ ದೇಶದಲ್ಲಿ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: ಪ್ರಧಾನಿ ನರೇಂದ್ರ ಮೋದಿ
ಬುಡಕಟ್ಟು ಜನಾಂಗದ ಜನಸಂಖ್ಯೆಯು ವೇಗವಾಗಿ ಕಡಿಮೆಯಾಗುತ್ತಿದೆ ಮತ್ತು ನುಸುಳುಕೋರರ ಸಂಖ್ಯೆಯು ಹೆಚ್ಚುತ್ತಿದೆ. ನುಸುಳುಕೋರರಿಂದ ಬುಡಕಟ್ಟು ಹೆಣ್ಣುಮಕ್ಕಳನ್ನು ಗುರಿಯಾಗಿಸಲಾಗುತ್ತಿದೆ. ಅವರನ್ನು ಜೀವಂತವಾಗಿ ಸುಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

LokSabha Election 2024: ಲವ್ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್ನಿಂದ!: JMM ವಿರುದ್ಧ ಪ್ರಧಾನಿ ಮೋದಿ
ಹಿಂದೂ ಧರ್ಮಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ‘ಲವ್ ಜಿಹಾದ್’ ಆರಂಭಗೊಂಡದ್ದೇ ಜಾರ್ಖಂಡ್ನಿಂದ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪ ಮಾಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಬಂಧಿಸಿದ ಇಡಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಮತ್ತು ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ಬಂಧಿಸಿದೆ.

ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಜಾರ್ಖಂಡ್ನ ಪಲಮುದಲ್ಲಿ ಸ್ಫೋಟ; ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!
ನಾಲ್ಕನೇ ಹಂತದ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿಯೇ ಜಾರ್ಖಂಡ್ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 190 ಕಿ.ಮೀ ದೂರದ ಮನಾಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸ್ಕ್ರ್ಯಾಪ್ ಡೀಲರ್ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಮಿತ್ ಶಾ ಭಾಷಣದ ವೀಡಿಯೋ ತಿರುಚಿದ ಪ್ರಕರಣ: ಜಾರ್ಖಂಡ್ ಕಾಂಗ್ರೆಸ್ ಎಕ್ಸ್ ಖಾತೆ ಸ್ಥಗಿತ!
ಜಾರ್ಖಂಡ್ ಕಾಂಗ್ರೆಸ್ ನ ಅಧಿಕೃತ ಟ್ವಿಟರ್ ಖಾತೆ ಸ್ಥಗಿತಗೊಂಡಿದೆ.

