ರಾಜ್ಯಅಕ್ರಮ ವಿದೇಶಿಗರ ಮೇಲೆ ನಿಗಾ ಇಡಿ: ಪೊಲೀಸರಿಗೆ ಗೃಹ ಸಚಿವ ಆರಗ ಸೂಚನೆ
ರಾಜ್ಯದಲ್ಲಿ ವೀಸಾ ಅವಧಿ ಮುಗಿದರೂ ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಗುರುತಿಸಿ ಅವರು ನಡೆಸುತ್ತಿರುವ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಈ ಮೂಲಕ ಅಕ್ರಮ, ದೇಶದ್ರೋಹ ಹಾಗೂ ಸಮಾಜ ವಿರೋಧಿ ಕೃತ್ಯಗಳು ನ ಡೆಯದಂತೆ ತಡೆಯಬೇಕು ಎಂದು ರಾಜ್ಯ ಪೊಲೀಸರಿಗೆ ಸೂಚಿಸಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.