JNU

ಜೆಎನ್ ಯು ದೇಶದ್ರೋಹಿಗಳಿಂದ ತುಂಬಿದೆ: ಕಲ್ಲಡ್ಕ ಪ್ರಭಾಕರ ಭಟ್
ದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ ಯು) ದೇಶದ್ರೋಹಿಗಳಿಂದ ತುಂಬಿದೆ ಎಂದು ಆರ್ ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

ಕೊಲೆ ಯತ್ನ ಪ್ರಕರಣ ದಾಖಲಿಸಿದ ಜೆಎನ್'ಯು ಅಧ್ಯಕ್ಷೆ ಆಯಿಷಾ ಘೋಷ್
ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಹಿಂಸಾಚಾರದ ವೇಳೆ ತಮ್ಮ ಮೇಲೆ ಕೊಲೆ ಯತ್ನ ನಡೆದಿದೆ ಎಂದು ಜೆಎನ್'ಯು ವಿದ್ಯಾರ್ಥಿಗಳ ಸಂಘಟನೆಯ ಅಧ್ಯಕ್ಷ ಆಯಿಷಾ ಘೋಷ್ ದೂರು ದಾಖಲಿಸಿದ್ದಾರೆ.

ಜೆಎನ್ ಯುಗೆ ದೀಪಿಕಾ ಪಡುಕೋಣೆ ಭೇಟಿ, ವಿದ್ಯಾರ್ಥಿಗಳ ಪರ ಬೀದಿಗಿಳಿದ ಬಾಲಿವುಡ್ ನಟಿ
ದೆಹಲಿಯ ಪ್ರತಿಷ್ಠಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದಲ್ಲಿ ಭಾನುವಾರ ನಡೆದ ಗೂಂಡಾ ದಾಳಿ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

'ತುಕ್ಡೆ ತುಕ್ಡೆ ಗ್ಯಾಂಗ್' ಗಳನ್ನು ನಾವು ಎಂದೂ ನೋಡಿರಲಿಲ್ಲ: ಜೈಶಂಕರ್
ನಾವು ಓದುತ್ತಿದ್ದ ವೇಳೆ ದೆಹಲಿಯ ಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ತುಕ್ಡೆ ತುಕ್ಡೆ ಗ್ಯಾಂಗ್ಗಳು ಇರಲಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ವಿವಿಯ ಇಂದಿನ ಪರಿಸ್ಥಿತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೆಎನ್'ಯು ಹಿಂಸಾಚಾರ: ಶುರುವಾಯ್ತು ರಾಜಕೀಯ ಕೆಸರೆರಚಾಟ, ಮೌನ ತಾಳಿದ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ
ರಾಜಧಾನಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಘಟನೆಯ ಬಗ್ಗೆ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವೆ ರಾಜಕೀಯ ಕೆಸರೆರಚಾಟ ಆರಂಭಗೊಂಡಿದ್ದು, ಪ್ರಕರಣ ಸಂಬಂಧ ಪ್ರದಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೌನ ತಾಳಿಸಿದ್ದಾರೆ.

ಶೈಕ್ಷಣಿಕ ಸಂಸ್ಥೆಗಳ ಪ್ರಜಾಪ್ರಭುತ್ವವನ್ನು ಸರ್ಕಾರ ಹೈಜಾಕ್ ಮಾಡುವಂತಿಲ್ಲ: ಅರುಂಧತಿ ನಾಗ್
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಸೋಮವಾರ ನಗರದ ವಿವಿಧ ಸಂಘಟನೆಗಳು, ಕಾರ್ಯಕರ್ತರು ಪುರಭವನ, ಆನಂದ್ ರಾವ್ ವೃತ್ತ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಜೆಎನ್'ಯು ಹಿಂಸಾಚಾರ: ಬೀದಿಗಿಳಿದು ವಿದ್ಯಾರ್ಥಿಗಳ ಆಕ್ರೋಶ, ಮಹತ್ವದ ಸುಳಿವು ಸಂಗ್ರಹಿಸಿದ ಪೊಲೀಸರು
ರಾಜಧಾನಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಲು ಹಾಗೂ ಅಧ್ಯಾಪಕರ ಮೇಲೆ ಮುಸುಕುಧಾರಿ ಅನಾಮಧೇಯ ಗೂಂಡಾಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ದಾಳಿಕೋರರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ವರೆಗೆ ಯಾರೂ ಬಂಧನಕ್ಕೊಳಗಾಗಿಲ್ಲ. ಆದರೆ, ಪ್ರಕರಣ ಸಂಬಂಧ ಪೊಲೀಸರಿಗೆ ಮಹತ್ವದ ಸುಳಿವುಗಳು ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ.

ಹಿಂಸಾಚಾರಕ್ಕೆ ಜೆಎನ್'ಯು ತತ್ತರ: ಎಫ್ಐಆರ್ ದಾಖಲು, ತನಿಖೆಗೆ ಮುಂದಾದ ದೆಹಲಿ ಸಿಸಿಬಿ ಪೊಲೀಸರು
ದೆಹಲಿಯ ಜೆಎನ್'ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದ್ದು, ಶೀಘ್ರದಲ್ಲಿಯೇ ದೆಹಲಿ ಸಿಸಿಬಿ ಪೊಲೀಸರು ತನಿಖೆ ಆರಂಭಿಸಲಿದ್ದಾರೆ.

ಜೆಎನ್ ಯು ಪ್ರತಿಭಟನೆ: ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್
ಹಾಸ್ಟೆಲ್ ಶುಲ್ಕ ಏರಿಕೆ,ಸಂಚಾರ ದೆಹಲಿಯ ಮೂರು ಮೆಟ್ರೊ ಸ್ಟೇಷನ್ ಗಳಲ್ಲಿ ಜನದಟ್ಟಣೆಯಿಂದ ಪ್ರಯಾಣಿಕರಿಗೆ ಆಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಸಾಗಲು ಯತ್ನಿಸಿದ್ದ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.

