ರಾಜ್ಯಉದ್ಯೋಗ ಮೀಸಲಾತಿ ಅಡೆತಡೆ ನಿವಾರಣೆ: 56,000 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲು ಸರ್ಕಾರ ಸಜ್ಜು
ಬಜೆಟ್ನಲ್ಲಿ ಘೋಷಿಸಿದಂತೆ, ನಾವು ತಕ್ಷಣವೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುತ್ತಿದ್ದೇವೆ. 6 ಶೇಕಡಾ ಹುದ್ದೆಗಳನ್ನು ಬ್ಯಾಕ್ಲಾಗ್ ಆಗಿ ಉಳಿಸಿಕೊಂಡು, ನಾಳೆಯೇ ಅಧಿಸೂಚನೆ ಹೊರಡಿಸುತ್ತೇವೆ ಎಂದು ಸಚಿವ ಸಂಪುಟ ಸಭೆಯ ನಂತರ ಸಿದ್ದರಾಮಯ್ಯ ನಿನ್ನೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದರು.