Job

ಕೋವಿಡ್, ಆರ್ಥಿಕ ಕುಸಿತ: 2022ರಲ್ಲಿ ಕರ್ನಾಟಕದಲ್ಲಿ ಉದ್ಯೋಗ ಕಳೆದುಕೊಂಡ ಹಲವು ಮಂದಿ, ಐಟಿ ಉದ್ಯಮದಲ್ಲಿ ಮುನ್ನಡೆ
2022 ನೇ ವರ್ಷ ಮುಗಿದು 2023ಕ್ಕೆ ಕಾಲಿಡಲು ಇನ್ನು ಕೆಲವೇ ದಿನಗಳು ಬಾಕಿ. 2022ರಲ್ಲಿ ಕೋವಿಡ್19 ಪ್ರಕರಣಗಳ ಪ್ರಮಾಣ ಸಾಕಷ್ಟು ಇಳಿಕೆಯಾದವು. ಇದರಿಂದಾಗಿ ತೀವ್ರ ಕುಸಿತ ಕಂಡಿದ್ದ ಆರ್ಥಿಕತೆ ಚೇತರಿಕೆ ಕಂಡಿತು. ಎಲ್ಲಾ ವ್ಯಾಪಾರ-ವಹಿವಾಟುಗಳು ಸಹಜ ಸ್ಥಿತಿಗೆ ಬರಲಾರಂಭಿಸಿತು. ಅಪಘಾತ, ಪ್ರಾಕೃತಿಕ ವಿಕೋಪ, ಸಾವು-ನೋವುಗಳು 20222ರಲ್ಲಿ ಕೂಡ ಸಾಕಷ್ಟು ಕಂಡವು.

ತಂತ್ರಜ್ಞಾನದಲ್ಲಿನ ಪ್ರಗತಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲಿದೆ: ಡಾ. ವಿ.ಕೆ.ಆತ್ರೆ
ತಂತ್ರಜ್ಞಾನದಲ್ಲಿನ ಅಭಿವೃದ್ಧಿಯು ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ಕಾರಣವಾಗಲಿದ್ದು, ಇದರಿಂದ ಭಾರತ ಇಂದು ಉತ್ಪನ್ನಗಳನ್ನು ರಫ್ತು ಮಾಡುವಷ್ಟು ಸ್ವಾವಲಂಬನೆ ಸಾಧಿಸಿದೆ ಎಂದು ವಿಜ್ಞಾನಿ ಮತ್ತು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮಾಜಿ ಮುಖ್ಯಸ್ಥ ಡಾ ವಿ ಕೆ ಆತ್ರೆ ಅವರು ಗುರುವಾರ ಹೇಳಿದರು.

ಉದ್ಯೋಗ ಭರವಸೆ ನೀಡುವ ನಕಲಿ ಸಂದೇಶಗಳಿಗೆ ಮೋಸ ಹೋಗಬೇಡಿ: ರಾಷ್ಟ್ರೀಯ ಮಾಹಿತಿ ಕೇಂದ್ರ ಎಚ್ಚರಿಕೆ
ಉದ್ಯೋಗದ ಭರವಸೆ, ಆಮಿಷವೊಡ್ಡುವ ನಕಲಿ ಎಸ್ ಎಂಎಸ್ ಗಳಿಂದ ಸಾರ್ವಜನಿಕರು ದೂರವಿರಬೇಕು, ಮೋಸ ಹೋಗಬಾರದು ಎಂದು ರಾಷ್ಟ್ರೀಯ ಮಾಹಿತಿ ಕೇಂದ್ರ(NIC) ಎಚ್ಚರಿಕೆ ನೀಡಿದೆ.

ಕೇವಲ 3,673 ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸರ್ಕಾರ ನಿರ್ಧಾರ!
ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ 3,500 ಗುತ್ತಿಗೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಇತರೆ ಪೌರಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾಲ್ಕು ರಾಜ್ಯಗಳ ಶೇ.39 ಮಂದಿಗೆ ಕೋವಿಡ್ ಸಮಯದಲ್ಲಿ ನರೇಗಾ ಯೋಜನೆಯಡಿ ಒಂದು ದಿನವೂ ಕೆಲಸ ಸಿಕ್ಕಿಲ್ಲ!
ಭಾರತದ ನಾಲ್ಕು ರಾಜ್ಯಗಳಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 2020-21 ಅವಧಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ 2005ರ ಅಡಿಯಲ್ಲಿ ನೋಂದಾಯಿಸಲಾದ ಎಲ್ಲಾ ಉದ್ಯೋಗ ಕಾರ್ಡು ಹೊಂದಿರುವ ಸುಮಾರು ಶೇಕಡಾ 39ರಷ್ಟು ಕುಟುಂಬಗಳಿಗೆ ಒಂದು ದಿನವೂ ಕೆಲಸ ನೀಡಲಾಗಿಲ್ಲ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ.

ಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೌಕರಿ: ರಾಜ್ಯ ಸರ್ಕಾರದಿಂದ ಆದೇಶ
ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ...

ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗಕ್ಕೆ ಚಿಂತನೆ: ಸಚಿವ ಸುನೀಲ್ ಕುಮಾರ್
ರಾಜ್ಯದಲ್ಲಿರುವ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ನಿರ್ದಿಷ್ಟ ಉದ್ಯೋಗ ಮೀಸಲಾತಿ ನೀಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ: ನಿರಾಣಿ
ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ' ಉದ್ಯೋಗ ಕ್ರಾಂತಿಗೆ' ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ ದೊರಕಲಿದೆ ಎಂದು ಭಾರಿ ಕೈಗಾರಿಕಾ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಹೆತ್ತವರ ಸಂಬಂಧ ಅನಧಿಕೃತ ಇರಬಹುದು, ಮಕ್ಕಳಲ್ಲ; ಎರಡನೇ ಪತ್ನಿ ಮಕ್ಕಳು ನೌಕರಿ ಪಡೆಯಲು ಅರ್ಹರು: ಹೈಕೋರ್ಟ್
ಪೋಷಕರ ಸಂಬಂಧ ಅನಧಿಕೃತ ಇರಬಹುದು. ಆದರೆ, ಅವರ ಮಕ್ಕಳು ಅನಧಿಕೃತ ಅಲ್ಲ, ಹೀಗಾಗಿ ಎರಡನೆಯ ಪತ್ನಿಯ ಮಕ್ಕಳಿಗೂ ಅನುಕಂಪದ ಆಧಾರದ ಮೇಲೆ ನೌಕರಿ ಪಡೆಯಲು ಅಧಿಕಾರವಿರುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.

