Job

ಯುವ ಸಮೂಹಕ್ಕೆ ಉದ್ಯೋಗ, ಹೊಸ ನೇಮಕಾತಿ ಪ್ರಸ್ತಾಪವಿಲ್ಲ; ನವೋದ್ಯಮಗಳಿಗೆ ಹೆಚ್ಚಿನ ಒತ್ತು ನೀಡಿಲ್ಲ: ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ
ಯುವ ಸಮೂಹಕ್ಕೆ ಉದ್ಯೋಗ ಒದಗಿಸಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ರಾಜ್ಯ ಬಜೆಟ್ ನಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಪ್ರಕಟಿಸದೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ನಿರಾಸೆ ಉಂಟು ಮಾಡಿದ್ದಾರೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಟೀಕಿಸಿದ್ದಾರೆ.

ಕೆಲಸ ಇಲ್ಲ, ಕೈಯಲ್ಲಿ ಹಣವಿಲ್ಲ: ಅಸಂಘಟಿತ ವಲಯ ಕಾರ್ಮಿಕರ ಕಷ್ಟ ಕೇಳೋರಿಲ್ಲ, ಇದು ಕೊರೋನಾ ಎಫೆಕ್ಟ್!
ಕೊರೋನಾ ಲಾಕ್ ಡೌನ್ ನಂತರ ಉಂಟಾಗಿರುವ ಆರ್ಥಿಕ ದುಸ್ಥಿತಿ ಅಸಂಘಟಿತ ವಲಯ ಕಾರ್ಮಿಕರ ಮೇಲೆ ತೀವ್ರವಾಗಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪರಿಣಾಮ ಬೀರುತ್ತಿದೆ. ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಲಕ್ಷಾಂತರ ಕಾರ್ಮಿಕರು ಉದ್ಯೋಗವಿಲ್ಲದೆ, ಕೈಯಲ್ಲಿ ಕಾಸಿಲ್ಲದೆ ತಮ್ಮ ಊರುಗಳಿಗೆ ಹಿಂತಿರುಗಿದ್ದಾರೆ.

ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಶೀಘ್ರದಲ್ಲೇ ಸರ್ಕಾರ ಆದೇಶ
ರಾಜ್ಯ ಸರ್ಕಾರದಿಂದ ಯಾವುದೇ ರಿಯಾಯಿತಿಯನ್ನು ಪಡೆಯದ ಖಾಸಗಿ ಸಂಸ್ಥೆಗಳೂ ಕೂಡ ತಮ್ಮಲ್ಲಿನ ಸಿ ಮತ್ತು ಡಿ ವೃಂದದಲ್ಲಿನ ಎಲ್ಲಾ ಉದ್ಯೋಗಗಳನ್ನು ಕನ್ನಡಿಗರಿಗೆ ಮೀಸಲಿಡುವಂತೆ ಹಾಲಿ ಜಾರಿ ಇರುವ ಆದೇಶವನ್ನು ಅನ್ವಯಿಸುವ ಬಗ್ಗೆ ಸರ್ಕಾರ ಚಿಂತನೆ ಮಾಡುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ನೂತನ ಕೈಗಾರಿಕೆ ನೀತಿಯಡಿ ಬೆಂಗಳೂರು ಹೊರಗಡೆ 60 ಲಕ್ಷ ಉದ್ಯೋಗ ಸೃಷ್ಟಿಯ ಗುರಿ
ದೇಶದ ಟ್ರಿಲಿಯನ್ ಡಾಲರ್ ಆರ್ಥಿಕ ಪ್ರಗತಿಯ ಗುರಿಯಲ್ಲಿ ರಾಜ್ಯ ಮಾಹಿತಿ ತಂತ್ರಜ್ಞಾನ ಉದ್ಯಮದಿಂದ ಶೇ. 30 ರಷ್ಟು ಕೊಡುಗೆ ನೀಡುವ ಉದ್ದೇಶದ ನಿಟ್ಟಿನಲ್ಲಿ ನೂತನ ಕೈಗಾರಿಕಾ ನೀತಿಯನ್ನು 2020-2025ನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ಪೊಲೀಸ್ ಇಲಾಖೆಯಲ್ಲಿ ತೃತೀಯ ಲಿಂಗಿಗಳಿಗೆ ಶೀಘ್ರವೇ ಮೀಸಲಾತಿ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ
ತೃತೀಯ ಲಿಂಗಿಗಳಿಗೆ ಮೀಸಲಾತಿ ಕಲ್ಪಿಸುವ ನಿರ್ಧಾರವನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಹೊಸ ಕೈಗಾರಿಕಾ ನೀತಿಯಿಂದ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ: ಜಗದೀಶ್ ಶೆಟ್ಟರ್
ಹೊಸ ಕೈಗಾರಿಕಾ ನೀತಿಯಲ್ಲಿ ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ ಎಂದ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕೊರೋನಾ ಎಫೆಕ್ಟ್: ಸಂಕಷ್ಟದಲ್ಲಿ ಪ್ರವಾಸೋದ್ಯಮ ವಲಯ, ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ 3 ಲಕ್ಷ ಜನ!
ಜೀವನೋಪಾಯಕ್ಕೆ ಪ್ರವಾಸೋದ್ಯಮ ಕ್ಷೇತ್ರವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ನಂಬಿಕೊಂಡಿದ್ದ ಸುಮಾರು 3 ಲಕ್ಷ ಜನರು ಈ ವರ್ಷ ಕೋವಿಡ್-19ನಿಂದಾಗಿ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಪಶ್ಚಿಮ ಬಂಗಾಳ: ಲಾಕ್ ಡೌನ್ ವೇಳೆ ಕೆಲಸವಿಲ್ಲದೆ ಎರಡೂವರೆ ತಿಂಗಳ ಮಗುವನ್ನು 3 ಸಾವಿರ ರೂ. ಗೆ ಮಾರಿದ ದಂಪತಿ
ಕೊರೋನಾ ಲಾಕ್ ಡೌನ್ ನಿಂದ ಮೂರು ತಿಂಗಳ ಹಿಂದೆ ಉದ್ಯೋಗ ಕಳೆದುಕೊಂಡು ಜೀವನೋಪಾಯಕ್ಕೆ ದಿಕ್ಕು ತೋಚದೆ ಪಶ್ಚಿಮ ಬಂಗಾಳದ ಮಿಡ್ನಾಪುರ್ ಜಿಲ್ಲೆಯಲ್ಲಿ ದಿನಗೂಲಿ ದಂಪತಿ ಎರಡೂವರೆ ತಿಂಗಳ ಮಗುವನ್ನು 3 ಸಾವಿರ ರೂಪಾಯಿಗೆ ಮಾರಾಟ ಮಾಡಿದ ಹೃದಯ ವಿದ್ರಾವಕ ಘಟನೆ ನಡೆದಿದೆ.

ಲಾಕ್‌ಡೌನ್ ನಿಂದಾಗಿ ಕೆಲಸ ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆ
ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡ ವ್ಯಕ್ತಿಯೊಬ್ಬ ತೀವ್ರ ಖಿನ್ನತೆಗೊಳಗಾಗಿ ಆತ್ಮಹತ್ಯೆಕ್ಕೆ ಶರಣಾಗಿರುವ ಘಟನೆ ಈ ಜಿಲ್ಲೆಯ ತೆನುಘಾಟ್ ವ್ಯಾಪ್ತಿಯಲ್ಲಿ ನಡೆದಿದೆ.

