Joe Biden

ಇಸ್ರೇಲ್-ಹಮಾಸ್ ಯುದ್ಧ: ಇಸ್ರೇಲ್'ಗೆ ನಾಳೆ ಅಮೆರಿಕಾ ಅಧ್ಯಕ್ಷ ಬೈಡನ್ ಭೇಟಿ
ಯುದ್ಧಪೀಡಿತ ಇಸ್ರೇಲ್ ರಾಷ್ಟ್ರಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಬುಧವಾರ (ಅಕ್ಟೋಬರ್ 18) ಭೇಟಿ ನೀಡುತ್ತಿದ್ದು, ಭೇಟಿ ವೇಳೆ ಅಲ್ಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಹಮಾಸ್ ಉಗ್ರಗಾಮಿಗಳಿಂದ ಕನಿಷ್ಠ 14 ಮಂದಿ ಅಮೆರಿಕನ್ನರ ಸಾವು; ಹಲವರು ಒತ್ತೆಯಾಳು!
ಅಮೆರಿಕದ ಕನಿಷ್ಠ 14 ಮಂದಿ ನಾಗರಿಕರು ಇಸ್ರೇಲ್‌ನಲ್ಲಿ ಕೊಲ್ಲಲ್ಪಟ್ಟಿದ್ದಾರೆ, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧ್ಯಕ್ಷ ಜೊ ಬೈಡನ್ ಘೋಷಿಸಿದ್ದಾರೆ. ಹಮಾಸ್ ವಶದಲ್ಲಿರುವವರಲ್ಲಿ ಅಮೆರಿಕದ ನಾಗರಿಕರು ಕೂಡ ಇದ್ದಾರೆ ಎಂದು ಅವರು ಹೇಳಿದರು.

2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆ: ಸಮೀಕ್ಷೆಯಲ್ಲಿ ಬೈಡನ್ ಗಿಂತ ಟ್ರಂಪ್ ಮುಂದೆ
2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರಿಗಿಂತ ಹಾಲಿ ಅಧ್ಯಕ್ಷ ಜೋ ಬೈಡನ್ ಹಿಂದಿರುವುದಾಗಿ ವಾಷಿಂಗ್ಟನ್ ಪೋಸ್ಟ್ ಮತ್ತು ಎಬಿಸಿ ನ್ಯೂಸ್ ಚಾನೆಲ್ ನಡೆಸಿದ ಸಮೀಕ್ಷೆ ಹೇಳಿದೆ.

2024ರ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಬೈಡೆನ್ ಗೆ ಆಹ್ವಾನ ನೀಡಿದ ಪ್ರಧಾನಿ ಮೋದಿ
ಮುಂದಿನ ವರ್ಷ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ ಎಂದು ದೆಹಲಿಯಲ್ಲಿರುವ ಅಮೆರಿಕದ ರಾಯಭಾರಿ ಎರಿಕ್...

'ಜಿ20 ಶೃಂಗಸಭೆ ಉತ್ತಮವಾಗಿ ನಡೆಯುತ್ತಿದೆ': ಚೀನಾ ಅಧ್ಯಕ್ಷರ ಗೈರಿಗೆ ಅಮೆರಿಕ ಅಧ್ಯಕ್ಷರ ಪರೋಕ್ಷ ಟಾಂಗ್!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಜಿ20 ಶೃಂಗಸಭೆಗೆ ಗೈರಾಗಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಗೆ ಪರೋಕ್ಷ ಟಾಂಗ್ ನೀಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, 'ಶೃಂಗಸಭೆ ಉತ್ತಮವಾಗಿ ನಡೆಯುತ್ತಿದೆ' ಎಂದು ಹೇಳಿದ್ದಾರೆ.

G20 ಶೃಂಗಸಭೆಯು ಹೆಚ್ಚಿನ ಸಮಸ್ಯೆಗಳಿಗೆ ಪರಿಹಾರವನ್ನು ನೀಡಬಲ್ಲದು ಎಂಬುದನ್ನು ಸಾಬೀತುಪಡಿಸಿದೆ: ಜೊ ಬೈಡನ್
ಈ ವರ್ಷದ G20 ಶೃಂಗಸಭೆಯು ಹವಾಮಾನ ಬಿಕ್ಕಟ್ಟು, ಸೂಕ್ಷ್ಮತೆ ಮತ್ತು ಸಂಘರ್ಷದ ಹೆಚ್ಚಿನ ಸಮಸ್ಯೆಗಳಿಗೆ ಪರಿಹಾರವನ್ನು ನೀಡಬಲ್ಲದು ಎಂಬುದನ್ನು ಸಾಬೀತುಪಡಿಸಿದೆ ಎಂದು ಅಮೆರಿಕ ಅಧ್ಯಕ್ಷ ಜೊ ಬೈಡನ್ ಹೇಳಿದ್ದಾರೆ.

ಜಿ20 ಶೃಂಗಸಭೆ ಮುಗಿಸಿ ವಿಯೆಟ್ನಾಂಗೆ ಪ್ರಯಾಣ ಬೆಳೆಸಿದ ಅಮೆರಿಕ ಅಧ್ಯಕ್ಷ ಜೊ ಬೈಡನ್
ಜಿ 20 ಶೃಂಗಸಭೆಯನ್ನು ಮುಗಿಸಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ದೆಹಲಿಯಿಂದ ವಿಯೆಟ್ನಾಂಗೆ ತೆರಳಿದ್ದಾರೆ. ಭಾರತದ ರಾಜಧಾನಿಯಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ G20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ US ಅಧ್ಯಕ್ಷ ಜೊ ಬೈಡನ್ ಮತ್ತು ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಹೆಚ್ಚಿನ ರಾಷ್ಟ್ರಗಳ ಮುಖ್ಯಸ್ಥರು ಇಂದೇ ದೆಹಲಿಯಿಂದ ಹೊರಡಲಿದ್ದಾರೆ.

ಜಿ20: ಬೈಡೆನ್- ಮೋದಿ ಮಾತುಕತೆ; ಚಂದ್ರಯಾನ 3 ಯಶಸ್ಸು, ಕ್ವಾಡ್, UNSC ಭದ್ರತಾ ಮಂಡಳಿ ಸದಸ್ಯತ್ವ ವಿಚಾರ ಚರ್ಚೆ
ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ ನೇರವಾಗಿ ಪ್ರಧಾನಿ ನಿವಾಸ 7 ಲೋಕ ಕಲ್ಯಾಣ್ ಮಾರ್ಗ್ ತಲುಪಿದ್ದು ಅವರನ್ನು ಪ್ರಧಾನಿ ಮೋದಿ ಆತ್ಮೀಯವಾಗಿ ಸ್ವಾಗತಿಸಿದರು.

ಜಿ 20 ಶೃಂಗಸಭೆ: ಅಮೆರಿಕಾ ಅಧ್ಯಕ್ಷ ಜೋ ಬೈಡನ್ ದೆಹಲಿಗೆ ಆಗಮನ; ಶೀಘ್ರದಲ್ಲೇ ಪ್ರಧಾನಿ ಮೋದಿ ಭೇಟಿ!
ನಾಳೆಯಿಂದ 18ನೇ G20 ಶೃಂಗಸಭೆಯನ್ನು ಆಯೋಜಿಸಲು ನವದೆಹಲಿ ಸಜ್ಜಾಗಿದೆ. ಇದು 25ಕ್ಕೂ ಹೆಚ್ಚು ವಿಶ್ವ ನಾಯಕರು ಮತ್ತು ಅವರ ಜೊತೆಯಲ್ಲಿರುವ ಪ್ರತಿನಿಧಿಗಳ ಉಪಸ್ಥಿತಿಗೆ ಸಾಕ್ಷಿಯಾಗಲಿದೆ.

