joined

ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆ: ಪದ್ಮಶ್ರೀ ಪುರಸ್ಕೃತ ಜಿತೇಂದರ್ ಸಿಂಗ್ ಶುಂಟಿ AAP ಗೆ ಸೇರ್ಪಡೆ
ಶಹೀದ್ ಭಗತ್ ಸಿಂಗ್ (SBS) ಫೌಂಡೇಶನ್‌ನ ಅಧ್ಯಕ್ಷರಾದ ಶುಂಟಿ ಅವರು COVID-19 ಸಾಂಕ್ರಾಮಿಕ ಸಮಯದಲ್ಲಿ ಮಾನವೀಯ ಕಾರ್ಯಗಳಿಂದಾಗಿ ಜನಪ್ರಿಯತೆ ಗಳಿಸಿದ್ದರು.

ಜಮ್ಮು-ಕಾಶ್ಮೀರ: 35 ವರ್ಷಗಳಲ್ಲಿ ಇದೇ ಮೊದಲು, ಮೊಹರಂ ಮೆರವಣಿಗೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಭಾಗಿ
ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶನಿವಾರ ಶಿಯಾ ಸಮುದಾಯದ ಮೊಹರಂ ಮೆರವಣಿಗೆಯಲ್ಲಿ ಪಾಲ್ಗೊಂಡರು. ಕಳೆದ 35 ವರ್ಷಗಳಲ್ಲಿ ರಾಜ್ಯದ ಮುಖ್ಯಸ್ಥರೊಬ್ಬರು ಮೊಹರಂ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದು ಇದೇ ಮೊದಲು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಹೋದರನ ಜೊತೆ ಎಸ್‌ಎಡಿ ನಾಯಕ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಬಿಜೆಪಿಗೆ ಸೇರ್ಪಡೆ
ಶಿರೋಮಣಿ ಅಕಾಲಿದಳದ ನಾಯಕ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಮತ್ತಿತರ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಕೇಸರಿ ಪಕ್ಷ ಸೇರಿಕೊಂಡರು.

ಕೂಡ್ಲಿಗೆ ಶಾಸಕ ಎನ್.ವೈ.ಗೋಪಾಲಕೃಷ್ಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಗರಿಗೆದರಿದೆ. ಅಸಮಾಧಾನಗೊಂಡ ಶಾಸಕರು, ಮಾಜಿ ಶಾಸಕರು, ಬೇರೊಂದು ಪಕ್ಷಕ್ಕೆ ನೆಗೆಯುತ್ತಿದ್ದಾರೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಇದು ಪ್ರತಿನಿತ್ಯ ಕಂಡುಬರುತ್ತಿದೆ.

ಸುಧೀರ್ ಅತ್ತಾವರ್ ನಿರ್ದೇಶನದ 'ಕರಿ ಹೈದ ಕರಿ ಅಜ್ಜ' ಸಿನಿಮಾದಲ್ಲಿ ನೃತ್ಯ ನಿರ್ದೇಶಕ ಸಂದೀಪ್ ಸೋಪರ್ಕರ್
ತುಳುನಾಡಿನ ಕಾರ್ಣಿಕ ದೈವ ಕೊರಗಜ್ಜನ ಕುರಿತು ಸುಧೀರ್ ಅತ್ತಾವರ್ ನಿರ್ದೇಶನದ ತಯಾರಾಗುತ್ತಿರುವ 'ಕರಿ ಹೈದ ಕರಿ ಅಜ್ಜ' ಸಿನಿಮಾದಲ್ಲಿ ಭರತ್ ಸೂರ್ಯ, ಭವ್ಯ, ಶ್ರುತಿ ಮತ್ತು ಜನಪ್ರಿಯ ಹಿಂದಿ ನಟ ಕಬೀರ್ ಬೇಡಿ ನಟಿಸುತ್ತಿರುವುದು ಗೊತ್ತೇ ಇದೆ. ಇದೀಗ ಈ ಸಿನಿಮಾಕ್ಕೆ ಹಾಲಿವುಡ್ ಮತ್ತು ಬಾಲಿವುಡ್ ನ ಪ್ರಸಿದ್ಧ ಕೊರಿಯೋಗ್ರಾಫರ್ ಸಂದೀಪ್ ಸೋಪರ್ಕರ್ ಸೇರಿದ್ದಾರೆ.

ಜೆಡಿಎಸ್ ಮಾಜಿ ಶಾಸಕ ವೈಎಸ್ ವಿ ದತ್ತಾ, ಪಕ್ಷೇತರ ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ
ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಮಾನಸ ಪುತ್ರ ಎಂದೇ ಹೆಸರಾಗಿದ್ದ ಕಡೂರಿನ ಮಾಜಿ ಶಾಸಕ ವೈ ಎಸ್ವಿ ದತ್ತಾ ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದತ್ತಾ ಅವರು ಜೆಡಿಎಸ್ ಜೊತೆಗಿನ ಧೀರ್ಘಕಾಲದ ಸಂಬಂಧ ತೊರೆದು ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಸುಮಲತಾ ಆಪ್ತ ಇಂಡುವಾಳ ಸಚ್ಚಿದಾನಂದ ಬಿಜೆಪಿಗೆ ಸೇರ್ಪಡೆ; ಮಂಡ್ಯದ 7 ಕ್ಷೇತ್ರಗಳಲ್ಲಿ ಗೆಲುವು ಖಚಿತ: ನಾರಾಯಣಗೌಡ
ಸಂಸದೆ ಸುಮಲತಾ ಅವರ ಆಪ್ತ , ಕೆಪಿಸಿಸಿ ಮಾಜಿ ಸದಸ್ಯ ಎಸ್. ಸಚ್ಚಿದಾನಂದ ಮತ್ತಿತರ ಕಾಂಗ್ರೆಸ್ ಮುಖಂಡರು ಇಂದು ಬಿಜೆಪಿಗೆ ಸೇರ್ಪಡೆಯಾದರು.

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್ ಸೇರ್ಪಡೆ
ಪಂಜಾಬಿನ ಹೆಸರಾಂತ ಗಾಯಕ ಸಿಧು ಮೂಸೆವಾಲಾ ಅವರಿಂದು ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಭ್ರಷ್ಟ, ಕ್ರೂರಿ ಬಿಜೆಪಿ ಸರ್ಕಾರ: ಎನ್ ಸಿಪಿ ಸೇರಿದ ಶಂಕರ್ ಸಿಂಗ್ ವಾಘೇಲಾ ವಾಗ್ದಾಳಿ
ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಾಘೇಲಾ ಇಂದು ರಾಷ್ಟ್ರೀಯ ಕಾಂಗ್ರೆಸ್ ಪಾರ್ಟಿ-ಎನ್ ಸಿಪಿ ಸೇರ್ಪಡೆಯಾಗಿದ್ದಾರೆ

