ರಾಜ್ಯಸೂತಕ ಸಂಪ್ರದಾಯ ಆಚರಣೆ; ಬಾಣಂತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ನ್ಯಾಯಾಧೀಶರು
ಬಾಣಂತಿ, ಹಸುಗೂಸನ್ನು ಊರಿನಿಂದ ಹೊರಗಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಅವರು ಗುರುವಾರ ಮಲ್ಲೇನಹಳ್ಳಿಯ ಗೊಲ್ಲರಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಮಹಿಳೆಯನ್ನು ರಕ್ಷಿಸಿದ್ದಾರೆ.