ರಾಜ್ಯಲಂಚ ಪ್ರಕರಣ: ಐಎಎಸ್ ಅಧಿಕಾರಿ ಮಂಜುನಾಥ್ ಗೆ 14 ದಿನಗಳ ನ್ಯಾಯಾಂಗ ಬಂಧನ
ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಿಂದ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜಿ.ಮಂಜುನಾಥ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.